Homeಕರೋನಾ ತಲ್ಲಣಕೊರೊನಾ ನಕಲಿ ಪರೀಕ್ಷಾ ಕಿಟ್ ತಯಾರಿಸುವ ಕಂಪನಿ ಪತ್ತೆ: ಮಾಲೀಕನನ್ನು ಬಂಧಿಸಿದ ನೋಯ್ಡಾ ಪೊಲೀಸ್

ಕೊರೊನಾ ನಕಲಿ ಪರೀಕ್ಷಾ ಕಿಟ್ ತಯಾರಿಸುವ ಕಂಪನಿ ಪತ್ತೆ: ಮಾಲೀಕನನ್ನು ಬಂಧಿಸಿದ ನೋಯ್ಡಾ ಪೊಲೀಸ್

3.97 ಲಕ್ಷ ಪೌಚ್‌ಗಳು ಹೊಂದಿದ್ದ ನಕಲಿ ಪರೀಕ್ಷಾ ಕಿಟ್‌ಗಳನ್ನು ಕಂಪನಿಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ಕೋವಿಡ್ ನಕಲಿ ಪರೀಕ್ಷಾ ಕಿಟ್‌ಗಳನ್ನು ತಯಾರಿಸುವ ಕಂಪನಿಯನ್ನು ನೋಯ್ಡಾ ಪೊಲೀಸರು ಪತ್ತೆಹಚ್ಚಿದ್ದು, ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ವಲಯ 20ನೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಲಯ 7ರಲ್ಲಿರುವ ಕಂಪನಿಯಿಂದ ಸುಮಾರು ನಾಲ್ಕು ಲಕ್ಷ ನಕಲಿ ಕ್ಷಿಪ್ರ ಪರೀಕ್ಷಾ ಕಿಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮುಟ್ಟಿನ ಸಮಯದಲ್ಲಿ ಪಿಪಿಇ ಜೊತೆಗೆ ಸ್ಯಾನಿಟರಿ ಪ್ಯಾಡ್ ಹಾಗೂ ಡೈಪರ್‌ ಕೂಡಾ ಧರಿಸಬೇಕು: ಮಹಿಳಾ ವೈದ್ಯೆಯರ ಸಂಕಷ್ಟ

“ಕೋವಿಡ್-19 ಟೆಸ್ಟ್ ಕಿಟ್ ತಯಾರಿಸುವ ಕಂಪನಿಯ ಪ್ರತಿನಿಧಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಈ ಕಂಪನಿಯನ್ನು ಸೀಲ್ ಮಾಡಲಾಗಿದೆ. ಈ ಕಂಪನಿಯು ತನ್ನ ನಕಲಿ ಲೇಬಲ್‌ಗಳನ್ನು ಪರೀಕ್ಷಾ ಕಿಟ್‌ಗಳಲ್ಲಿ ಬಳಸಲಾಗುತ್ತಿದೆ ಎಂದು ಹೇಳಿಕೊಂಡಿದೆ” ಎಂಬುದಾಗಿ ಪೊಲೀಸ್ ವಕ್ತಾರರು ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಈ ನಕಲಿ ಕಂಪನಿ ನಡೆಸುತ್ತಿರುವ ಮಾಲೀಕ ರಾಜೇಶ್ ಪ್ರಸಾದ್‌ನನ್ನು ಬಂಧಿಸಲಾಗಿದೆ. ಈತನನ್ನು ದೆಹಲಿಯ ಅಶೋಕ್ ನಗರದಲ್ಲಿರುವ ಆತನ ಮನೆಯಿಂದ ಕರೆದೊಯ್ಯಲಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ರವಿಕೃಷ್ಣಾರೆಡ್ಡಿ ಸಂದರ್ಶನ

3.97 ಲಕ್ಷ ಪೌಚ್‌ಗಳು ಹೊಂದಿದ್ದ ನಕಲಿ ಕಿಟ್‌ಗಳನ್ನು ಕಂಪನಿಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಠಾಣೆಯಲ್ಲಿ ಹಕ್ಕುಸ್ವಾಮ್ಯ ಕಾಯ್ದೆ 1957ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು, ಹೆಚ್ಚಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ: ಪಿಪಿಇ ಕಿಟ್‌, ಔಷಧಿ ಪೂರೈಕೆ ಆಗುತ್ತಿಲ್ಲ; ರಾಜಕೀಯವಾಡದಿರಿ: ಬಿಜೆಪಿ ವಿರುದ್ದ ಮಹಾ ಸಿಎಂ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...