Homeಕರ್ನಾಟಕಗೌರಿ ಟ್ರಸ್ಟ್ ಕುರಿತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ.

ಗೌರಿ ಟ್ರಸ್ಟ್ ಕುರಿತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ.

ಸ್ವತಃ ತನ್ನ ಅಕ್ಕ ಗೌರಿ ಲಂಕೇಶ್‌ರವರಿಗೆ ಬಂದೂಕು ತೋರಿಸಿದ ವ್ಯಕ್ತಿ ಇಂದ್ರಜಿತ್‌ ಲಂಕೇಶ್‌ರವರಿಂದ ಇದಕ್ಕಿಂತ ಹೆಚ್ಚಿನ ನಿರೀಕ್ಷೆ ಮಾಡುವುದೂ ಕಷ್ಟ ಎಂದು ನಗರಗೆರೆ ರಮೇಶ್‌ ತಿಳಿಸಿದ್ದಾರೆ.

- Advertisement -
- Advertisement -

ಗೌರಿ ಟ್ರಸ್ಟ್ ಹಣಕಾಸು ವ್ಯವಹಾರದ ತನಿಖೆಗೆ ಸ್ವಾಗತ, ತನಿಖೆ ನಡೆಯದಿದ್ದರೂ ಟ್ರಸ್ಟ್‌ನ ವತಿಯಿಂದ ಸಾರ್ವಜನಿಕ ಆಡಿಟ್‌ಗೆ ಆಹ್ವಾನ ಮತ್ತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ ಮಾಡಲಾಗಿದೆ ಎಂದು ಗೌರಿ ಮೀಡಿಯಾ ಟ್ರಸ್ಟ್‌ನ ನಗರಗೆರೆ ರಮೇಶ್, ಪ್ರೊ.ವಿ.ಎಸ್.ಶ್ರೀಧರ ಮತ್ತು ಕೆ.ಎಲ್.ಅಶೋಕ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹೊಸದಿಗಂತ ಎಂಬ ಪತ್ರಿಕೆಯೊಂದು ಗೌರಿ ಸ್ಮಾರಕ ಟ್ರಸ್ಟ್‌ನ ಮೇಲೆ ದುರುದ್ದೇಶಪೂರ್ವಕವಾದ ಸುಳ್ಳು ಆರೋಪವನ್ನು ಮಾಡಿ ವರದಿಯೊಂದನ್ನು ಪ್ರಕಟಿಸಿದೆ. ಅದರ ನಂತರ ಚಿತ್ರ ನಿರ್ದೇಶಕ ಇಂದ್ರಜಿತ್ ಅವರು ಟಿವಿ ವಾಹಿನಿಯೊಂದರ ಜೊತೆ ಮಾತನಾಡಿದ್ದಲ್ಲದೇ ಇಂದು ಪತ್ರಿಕಾಗೋಷ್ಠಿಯನ್ನೂ ನಡೆಸಿ ಮೇಲಿನ ಆರೋಪಗಳನ್ನು ಉಲ್ಲೇಖಿಸಿ ತನಿಖೆ ನಡೆಯಬೇಕೆಂದು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಸ್ವಾಗತಿಸುತ್ತೇವೆ, ಜೊತೆಗೆ ಮಾನನಷ್ಟ ಮೊಕದ್ದಮೆ ಕೂಡ ದಾಖಲಿಸುತ್ತೇವೆ ಎಂದಿದ್ದಾರೆ.

ಇವೆಲ್ಲವೂ ಅತ್ಯಂತ ಸುಳ್ಳು ಆರೋಪಗಳಷ್ಟೇ ಅಲ್ಲ, ದುರುದ್ದೇಶದಿಂದ ಕೂಡಿದೆ. ಸತ್ಯ ನುಡಿದಿದ್ದಕ್ಕೆ ಮತ್ತು ದೇಶದ ಪ್ರಜಾತಂತ್ರದ ಪರವಾಗಿ ದನಿಯೆತ್ತಿದ್ದಕ್ಕೆ ಜೀವವನ್ನೇ ಕಳೆದುಕೊಳ್ಳಬೇಕಾಗಿ ಬಂದ ಗೌರಿ ಲಂಕೇಶರ ಆಶಯಗಳನ್ನು ಮುಂದುವರೆಸುವ ಸಲುವಾಗಿ ಗೌರಿ ಸ್ಮಾರಕ ಟ್ರಸ್ಟ್ ಅಸ್ತಿತ್ವಕ್ಕೆ ಬಂದಿತು. ಹಾಗೆಯೇ ಮಾಧ್ಯಮ ಪ್ರಯತ್ನವನ್ನು ಮುಂದುವರೆಸುವ ಹೊಣೆ ಹೊರುವುದಕ್ಕೋಸ್ಕರ ಗೌರಿ ಮೀಡಿಯಾ ಟ್ರಸ್ಟ್ ರೂಪುಗೊಂಡಿತು ಎಂದು ಗೌರಿ ಸ್ಮಾರಕ ಟ್ರಸ್ಟ್‌ನ ಕಾರ್ಯದರ್ಶಿ ಕೆ.ಎಲ್‌ ಅಶೋಕ್‌ ತಿಳಿಸಿದ್ದಾರೆ.

ಇದುವರೆಗೆ ಗೌರಿ ಸ್ಮಾರಕ ಟ್ರಸ್ಟ್ 6 ಕಾರ್ಯಕ್ರಮಗಳನ್ನು ಸಂಘಟಿಸಿದ್ದು ಖ್ಯಾತ ಪತ್ರಕರ್ತ ರವೀಶ್‌ಕುಮಾರ್ ಅವರಿಗೆ ಗೌರಿ ಲಂಕೇಶ್ ರಾಷ್ಟ್ರೀಯ ಪ್ರಶಸ್ತಿಯನ್ನೂ ನೀಡಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಗೌರಿ ಲಂಕೇಶರ ಆಶಯವನ್ನು ಎತ್ತಿ ಹಿಡಿದು ದನಿಯೆತ್ತುತ್ತಿರುವ ಅವರ ಸಹೋದರಿ ಕವಿತಾ ಲಂಕೇಶ್‌ರು ಭಾಗವಹಿಸಿದ್ದಾರೆ. ಗೌರಿಯವರ ತಾಯಿ ಇಂದಿರಾ ಲಂಕೇಶ್‌ರೂ ಹಲವು ಕಾರ್ಯಕ್ರಮಗಳಲ್ಲಿ ಜೊತೆಯಾಗಿದ್ದಾರೆ. ಸ್ಮಾರಕ ಟ್ರಸ್ಟ್‌ನ ಪೋಷಕರಲ್ಲಿ ಕವಿತಾ ಲಂಕೇಶ್‌ರೂ ಸಹಾ ಒಬ್ಬರು. ಅವರುಗಳು ನಮ್ಮ ಸ್ಫೂರ್ತಿ ಹಾಗೂ ಶಕ್ತಿಯನ್ನು ಹೆಚ್ಚಿಸಿದ್ದಾರೆ. ಆದರೆ ಗೌರಿ ಲಂಕೇಶ್‌ ಬದುಕಿದ್ದಾಗಲೂ ಅವರ ಆಶಯಗಳಿಗೆ ವಿರುದ್ಧವಾಗಿದ್ದ ಮತ್ತು ನಂತರವೂ ಅದೇ ರೀತಿ ಮುಂದುವರೆದಿರುವ ಇಂದ್ರಜಿತ್ ಲಂಕೇಶ್‌ರು ಎಂದೂ ಇದರಲ್ಲಿ ಭಾಗಿಯಾಗುವ ಸಾಧ್ಯತೆ ಇರಲಿಲ್ಲ ಎಂದು ಕೆ.ಎಲ್‌ ಅಶೋಕ್‌ ತಿಳಿಸಿದ್ದಾರೆ.

ರವೀಶ್‌ ಕುಮಾರ್‌ರವರಿಗೆ ಗೌರಿ ಲಂಕೇಶ್‌ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

ಟ್ರಸ್ಟ್‌ನ ಕಾರ್ಯಚಟುವಟಿಕೆಗಳಿಗೆ ಹಿತೈಷಿಗಳಿಂದ ಹಣ ಸಂಗ್ರಹಿಸಿದ್ದಲ್ಲದೇ, ಆಯಾ ಸಂದರ್ಭದಲ್ಲಿ ಅವನ್ನು ಸಾರ್ವಜನಿಕವಾಗಿಯೂ ಮುಂದಿಡಲಾಗಿದೆ. ಮಾಧ್ಯಮ ಸಂಸ್ಥೆಯು ತಾನು ನಡೆಸುತ್ತಿರುವ ನ್ಯಾಯಪಥ ಪತ್ರಿಕೆಯ ಓದುಗರಿಂದ ಚಂದಾ ಸಹಾ ಸಂಗ್ರಹಿಸಿದೆ. ವಾರ್ಷಿಕ ಚಂದಾ 1,000 ರೂ. ಇದ್ದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಚಂದಾದಾರರಿದ್ದಾರೆ. ಸಂಗ್ರಹಿಸಿದ ಮತ್ತು ಖರ್ಚು ಮಾಡಿದ ಎಲ್ಲಾ ಹಣಕ್ಕೂ ಲೆಕ್ಕವಿದ್ದು ಲೆಕ್ಕ ಪರಿಶೋಧಕರಿಂದ ಪರಿಶೀಲನೆಯೂ ಆಗಿದೆ. ಹಣಕಾಸಿನ ವ್ಯವಹಾರವೆಲ್ಲವೂ ಬ್ಯಾಂಕ್ ಮೂಲಕವೇ ನಡೆಯುತ್ತದಲ್ಲದೇ, ಎಲ್ಲಾ ಹಣಕಾಸಿನ ವ್ಯವಹಾರಗಳಿಗೂ ಸೂಕ್ತ ದಾಖಲಾತಿಗಳು ಇವೆ, ಪಾರದರ್ಶಕವಾಗಿವೆ.
ಹೀಗಿದ್ದೂ ಅದರ ಬಗ್ಗೆ ಸುಳ್ಳು ಆರೋಪ ಮಾಡುತ್ತಿರುವುದು ದುರುದ್ದೇಶದಿಂದ ಕೂಡಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಗೌರಿ ಮೀಡಿಯಾ ಟ್ರಸ್ಟ್‌ ಅಧ್ಯಕ್ಷರಾದ ನಗರಗೆರೆ ರಮೇಶ್ ಹೇಳಿದ್ದಾರೆ.

ಈ ಬಗ್ಗೆ ತನಿಖೆ ನಡೆಯಬೇಕು ಎಂದು ಯಾರೇ ಹೇಳಲಿ ಅದಕ್ಕೆ ನಮ್ಮ ಸ್ವಾಗತವಿದೆ. ಒಂದು ವೇಳೆ ತನಿಖೆ ನಡೆಯದಿದ್ದಲ್ಲಿ ಜನವರಿ 29ರಂದು (ಗೌರಿ ದಿನ) ನಮ್ಮ ಹಣಕಾಸಿನ ಲೆಕ್ಕಾಚಾರದ ಸಾರ್ವಜನಿಕ ಆಡಿಟ್ ಮಾಡಲು ಆಹ್ವಾನಿಸಲಾಗುವುದು. ನಮ್ಮ ಹಿತೈಷಿಗಳು ಮಾತ್ರವಲ್ಲದೇ ಯಾರೇ ಸಾರ್ವಜನಿಕರೂ ಅದನ್ನು ಪರಿಶೀಲಿಸಲು ಮುಕ್ತ ಆಹ್ವಾನ ನೀಡಲಾಗುತ್ತದೆ. ಆದರೆ ದುರಂತವೆಂದರೆ, ಗೌರಿ ಲಂಕೇಶ್‌ರವರ ಉನ್ನತ ಆದರ್ಶಗಳ ವಿರುದ್ಧವೇ ಬದುಕುತ್ತಿರುವ ವ್ಯಕ್ತಿಯು ಈಗ ಅವರ ಕುರಿತು ಮಾತನಾಡುತ್ತಿದ್ದಾರೆ. ಅವರ ಮೇಲೆ ಮತ್ತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಲಾಗಿದೆ. ಹಣಕಾಸಿನ ಕುರಿತ ಆರೋಪಗಳಲ್ಲದೇ ಇತರೆಲ್ಲಾ ಸುಳ್ಳು ಆರೋಪಗಳಿಗೂ ಸಂಬಂಧಪಟ್ಟವರು ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಗೌರಿ ಸ್ಮಾರಕ ಟ್ರಸ್ಟ್‌ನ ಅಧ್ಯಕ್ಷರಾದ ಮತ್ತು ಸಾರ್ವಜನಿಕ ಬದುಕಿನಲ್ಲಿ ಕಟು ಪ್ರಾಮಾಣಿಕತೆಯನ್ನು ಪಾಲಿಸಿಕೊಂಡು ಬಂದಿರುವವರಾದ ಎಚ್.ಎಸ್.ದೊರೆಸ್ವಾಮಿಯವರ ಮಡದಿಯು ತೀರಿಕೊಂಡ ದಿನವೇ ಇಂತಹ ಹೇಳಿಕೆಯನ್ನು ನೀಡಿರುವ ವಿಷಾದಕರ ಘಟನೆ ನಡೆದಿದೆ. ಸ್ವತಃ ತನ್ನ ಅಕ್ಕ ಗೌರಿ ಲಂಕೇಶ್‌ರವರಿಗೆ ಬಂದೂಕು ತೋರಿಸಿದ ವ್ಯಕ್ತಿಯಿಂದ ಇದಕ್ಕಿಂತ ಹೆಚ್ಚಿನ ನಿರೀಕ್ಷೆ ಮಾಡುವುದೂ ಕಷ್ಟವೇ ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪತ್ರಿಕೆಗೆ ಶುಭವಾಗಲಿ…ಕೇಸರಿ ಕ್ರಿಮಿಗಳ ಪಿತೂರಿಯನ್ನು ಬಯಲಿಗೆಳೆದು ಸಮಾಜಕ್ಕೆ ತೋರಿಸಲಿ…

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...