Homeಮುಖಪುಟಹಲಾಲ್ ಮಾಡದಿದ್ದಕ್ಕೆ ಮುಸ್ಲಿಮರಿಂದ ಹಲ್ಲೆ ಎಂಬ ಸುಳ್ಳು ಆರೋಪ: ರೆಸ್ಟೋರೆಂಟ್‌ ಮಾಲೀಕರ ಬಂಧನ

ಹಲಾಲ್ ಮಾಡದಿದ್ದಕ್ಕೆ ಮುಸ್ಲಿಮರಿಂದ ಹಲ್ಲೆ ಎಂಬ ಸುಳ್ಳು ಆರೋಪ: ರೆಸ್ಟೋರೆಂಟ್‌ ಮಾಲೀಕರ ಬಂಧನ

- Advertisement -
- Advertisement -

ತನ್ನ ರೆಸ್ಟೋರೆಂಟ್‌ ಮುಂದೆ ‘ಹಲಾಲ್‌ ಇಲ್ಲ’ ಎಂಬ ಬೋರ್ಡ್‌ ಹಾಕಿದ್ದಕ್ಕೆ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಸುಳ್ಳು ಆರೋಪ ಮಾಡಿದ್ದ ತುಷಾರ ಅಜಿತ್‌ ಮತ್ತು ಅವರ ಸಹಚರರನ್ನು ಪೊಲೀಸರು ಬಂಧಿದ್ದಾರೆ. ರೆಸ್ಟೋರೆಂಟ್‌ ಮಾಲಿಕತ್ವದ ವಿಚಾರವಾಗಿ ನಡೆದ ಘರ್ಷಣೆಯಲ್ಲಿ ಇಬ್ಬರು ವ್ಯಕ್ತಿಗಳ ಮೇಲೆ ತುಷಾರ ಹಾಗೂ ಸಹಚರರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಪರಾರಿಯಾಗಿದ್ದ ತುಷಾರ, ಆಕೆಯ ಪತಿ ಅಜಿತ್ ಮತ್ತು ಆಕೆಯ ಸಹೋದ್ಯೋಗಿ ಅಪ್ಪು ಎಂಬುವವರನ್ನು ಕೊಲೆ ಯತ್ನ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಕೊಚ್ಚಿ ನಗರ ಪೊಲೀಸ್ ಆಯುಕ್ತ ಸಿ ಎಚ್ ನಾಗರಾಜು ಮಂಗಳವಾರ ಖಚಿತಪಡಿಸಿದ್ದಾರೆ. ಈ ಪ್ರಕರಣದಲ್ಲಿ ಆಕೆಯ ಇಬ್ಬರು ಸಹಚರರಾದ ಅಬಿನ್ ಬೆನ್ಸಸ್ ಆಂಟೋನಿ (22) ಮತ್ತು ವಿಷ್ಣು ಶಿವದಾಸ್ (26) ಅವರನ್ನು ಪೊಲೀಸರು ಭಾನುವಾರ ಬಂಧಿಸಿದ್ದರು.

ಕೇರಳದ ಕೊಚ್ಚಿಯಲ್ಲಿ ಹಲಾಲ್‌ ಮಾಡದ ಆಹಾರ ಪೂರೈಸುವ ರೆಸ್ಟೋರೆಂಟ್‌ ಅನ್ನು ಪ್ರಾರಂಭಿಸಲು ಪ್ರಯತ್ನಿಸಿದ ತುಷರಾ ಅಜಿತ್‌ ಅವರ ಮೇಲೆ ಮುಸ್ಲಿಂ ಸಮುದಾಯದವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ  ಕೆಲವು ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು.

ವರದಿಗಳ ಪ್ರಕಾರ ಧಾರ್ಮಿಕ ಕಾರಣಗಳಿಂದ ಯಾವುದೇ ಘರ್ಷಣೆ ನಡೆದಿಲ್ಲ. ಯಾವುದೋ ವಿಷಯವಾಗಿ ವಾದ ವಿವಾದಗಳು ನಡೆದಿದ್ದು ಹೋರಾಟ ಭುಗಿಲೆದ್ದಿದೆ. ಈ ಜಗಳದಲ್ಲಿ ಭಾಗಿಯಾದವರಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದವರು ಯಾರು ಇಲ್ಲ ಎನ್ನಲಾಗಿದೆ.

ಅಲ್ಲದೇ, ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಕೋಮುದ್ವೇಷ ಹರಡಿದ ಆರೋದ ಮೇಲೆ ತುಷಾರ ವಿರುದ್ಧ ಇನ್ಫೋಪಾರ್ಕ್‌ ಪೊಲೀಸರು ಭಾನುವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತುಷಾರ ಅಜಿತ್‌ ಕಲ್ಲಾಯಿಲ್‌ ಎಂಬುವವರ ಫೇಸ್‌ಬುಕ್‌ ಖಾತೆಯಲ್ಲಿ ‘ಕೋಮು ದ್ವೇಷವನ್ನು ಕೆರಳಿಸುವ ಉದ್ದೇಶದಿಂದ ವೀಡಿಯೋ ಪೋಸ್ಟ್‌ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ: ದೆಹಲಿ: ಸ್ಥಳೀಯರ ವಿರೋಧದಿಂದ ನಮಾಜ್‌ಗೆ ನಿಗದಿಪಡಿಸಿದ್ದ 8 ಸ್ಥಳಗಳ ಅನುಮತಿ ವಾಪಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...