Homeಫ್ಯಾಕ್ಟ್‌ಚೆಕ್ಅಂತ್ಯಕ್ರಿಯೆಗೆ ಸೇರಿದ್ದ ಕೂಟವನ್ನು ‘ರಂಝಾನ್‌‌’ ಆಚರಣೆ ಎಂದು ತಪ್ಪಾಗಿ ಪ್ರತಿಪಾದನೆ

ಅಂತ್ಯಕ್ರಿಯೆಗೆ ಸೇರಿದ್ದ ಕೂಟವನ್ನು ‘ರಂಝಾನ್‌‌’ ಆಚರಣೆ ಎಂದು ತಪ್ಪಾಗಿ ಪ್ರತಿಪಾದನೆ

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಕಿಕ್ಕಿರಿದು ಸೇರಿರುವ ದೊಡ್ಡ ಕೂಟವೊಂದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಲಪಂಥೀಯ ಟ್ವಿಟರ್ ಬಳಕೆದಾರರು ಕೊರೊನಾ ಮಾರ್ಗಸೂಚಿಗಳನ್ನು ಮೀರಿ ರಂಝಾನ್‌ ಆಚರಣೆಗೆ ಜನರು ಸೇರಿದ್ದಾರೆ ಎಂದು ತಪ್ಪಾಗಿ ಪ್ರತಿಪಾದಿಸುತ್ತಿದ್ದಾರೆ.

2021 ರ ಏಪ್ರಿಲ್ 16 ರಂದು ನಿಧನರಾದ ಸ್ಥಳೀಯ ಧರ್ಮಗುರು ಮೌಲಾನಾ ಅಬ್ದುಲ್ ಮೊಮಿನ್ ನದ್ವಿ ಅವರ ಅಂತ್ಯಕ್ರಿಯೆಯ ಮೆರವಣಿಗೆ ಸಂಭಾಲ್‌ನ ಮದರಸಾ ಅಂಜುಮಾನ್ ಮುಯಿನುಲ್ ಇಸ್ಲಾಂನಲ್ಲಿ ಜನರು ನೆರೆದಿರುವುದನ್ನು ತೋರಿಸುವ ವಿಡಿಯೊ ಇದಾಗಿದೆ.

ಮದರಸ ಮತ್ತು ಅದರ ಸುತ್ತಲೂ ಚಿತ್ರೀಕರಿಸಿದ ವಿಡಿಯೋವನ್ನು, ಹರಿದ್ವಾರದ ಕುಂಭಮೇಳಕ್ಕೆ ಹೋಲಿಕೆ ಮಾಡಿರುವ ನೆಟ್ಟಿಗರು, ಕೊರೊನಾ ಎರಡನೇ ಅಲೆಯ ಕಾರಣಕ್ಕೆ ದೇಶವು ತೀವ್ರ ಹಿನ್ನಡೆ ಅನುಭವಿಸುತ್ತಿರುವ ಸಂದರ್ಭದಲ್ಲಿ ಧಾರ್ಮಿಕ ಸಭೆ ನಡೆಸಲು ಅವಕಾಶ ನೀಡಿದ್ದಕ್ಕಾಗಿ ಸರ್ಕಾರವನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

ಉತ್ತರ ಪ್ರದೇಶ ಸರ್ಕಾರವು ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಕಾರಣಕ್ಕೆ ಘೋಷಿಸಿದ ಇತ್ತೀಚಿನ ನಿರ್ಬಂಧಗಳ ಪ್ರಕಾರ, ಶವಸಂಸ್ಕಾರ ಅಥವಾ ಸಮಾಧಿ ಸ್ಥಳಗಳಲ್ಲಿ ಅಂತ್ಯಕ್ರಿಯೆಯ ಸಮಯದಲ್ಲಿ 20 ಕ್ಕಿಂತ ಹೆಚ್ಚು ವ್ಯಕ್ತಿಗಳು ಸೇರುವಂತಿಲ್ಲ.

ಇದೇ ವಿಡಿಯೊ ಕ್ಲಿಪ್ ಅನ್ನು ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಾಣಾವತ್‌, “ಕುಂಭಮೇಳದ ನಂತರ ….ಗೌರವಾನ್ವಿತ ಪ್ರಧಾನಿಯವರೆ, ದಯವಿಟ್ಟು ರಂಜಾನ್ ಸಭೆಯನ್ನು ಕೂಡಾ ನಿಲ್ಲಿಸುವಂತೆ ವಿನಂತಿಸುತ್ತೇನೆ” ಎಂದು ಬರೆದು ಕೊಂಡಿದ್ದಾರೆ. ಆದರೆ ಈ ಟ್ವೀಟನ್ನು ಅವರು ಡಿಲಿಟ್ ಮಾಡಿದ್ದಾರೆ. ಅವರ ಟ್ವೀಟ್‌ನ ಆರ್ಕೈವ್‌ ಅನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ: ಅರ್ಹರಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹ

“ವೈರಲ್‌ ವೀಡಿಯೊದಲ್ಲಿ ನೋಡಿದ ಜನಸಮೂಹವು, ಸಂಭಾಲ್‌ನ ನಖಾಸ್ ಪ್ರದೇಶದಲ್ಲಿನ ಅಂಜುಮಾನ್ ಮುಯಿನುಲ್ ಇಸ್ಲಾಂ ಮದ್ರಸದಲ್ಲಿ ಸೇರಿದ ಜನ ಸಮೂಹವಾಗಿದೆ” ಎಂದು ಸಂಭಾಲ್ ನಿವಾಸಿ ಶಾನ್ ಅವರು ತಿಳಿಸಿದ್ದಾರೆಂದು ಭೂಮ್‌ಲೈವ್‌ ವರದಿ ಮಾಡಿದೆ. ಮೌಲಾನಾ ಅಬ್ದುಲ್ ಮೊಮಿನ್ ನದ್ವಿ ಅವರು ಸಂಭಾಲ್‌ನಲ್ಲಿ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯ ಪ್ರಾರ್ಥನೆಗಾಗಿ ಈ ಜನರು ಸೇರಿದ್ದರು ಎಂದು ಅವರು ತಿಳಿಸಿದ್ದಾರೆ.

ಈ ಮೆರವಣಿಗೆಯ ಇತರ ತುಣುಕುಗಳು ಫೇಸ್‌ಬುಕ್‌ನಲ್ಲಿ ನೋಡಬಹುದಾಗಿದೆ. ವಿಡಿಯೊದಲ್ಲಿ ಅಂಜುಮಾನ್ ಮುಯಿನುಲ್ ಇಸ್ಲಾಂ ಮದರಸಾದ ಹಿನ್ನಲೆಯನ್ನು ಕೂಡಾ ನೋಡಬಹುದಾಗಿದೆ.

“ಮೌಲಾನಾ ನದ್ವಿ ಬಹಳ ಪ್ರಭಾವಿತ ವ್ಯಕ್ತಿ. ಅನೇಕ ಜನರು ಅವರ ಅಭಿಮಾನಿಗಳಾಗಿದ್ದರು. ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಜನರು ದೂರದಿಂದ ಬಂದಿದ್ದರು. ದೈಹಿಕ ಅಂತರವನ್ನು ಕಾಪಾಡಿಕೊಳ್ಳಲು ನಾವು ನಿರಂತರವಾಗಿ ಜನರಿಗೆ ಮನವಿ ಮಾಡುತ್ತಿದ್ದೆವು. ಜೊತೆಗೆ ನಾವು ಪ್ರದೇಶವನ್ನು ಸ್ಯಾನಿಟೈಝ್ ಕೂಡಾ ಮಾಡುತ್ತಿದ್ದೆವು” ಎಂದು ಮದರಸಾ ಸಂಬಂಧಿತ ವ್ಯಕ್ತಿಯಾದ ಜೈದ್ ನೋಮಾನಿ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಶಾದ್ಯಂತ ಆಕ್ಸಿಜನ್ ಪ್ಲಾಂಟ್‌ ಸ್ಥಾಪನೆ ವಿಳಂಬಕ್ಕೆ ಮೋದಿ ಸರ್ಕಾರವೇ ಕಾರಣ ಹೊರತು ರಾಜ್ಯಗಳಲ್ಲ

“ಆದರೆ ಅಂತಹ ಜನಸಮೂಹವನ್ನು ನಿರ್ವಹಿಸುವುದು ಮತ್ತು ನಿಯಂತ್ರಿಸುವುದು ನಮಗೆ ತುಂಬಾ ಕಷ್ಟಕರವಾಗಿತ್ತು. ಆದಾಗ್ಯೂ, ದಫನ ಭೂಮಿಯನ್ನು ತಲುಪಲು ಮತ್ತು ಅಂತ್ಯಕ್ರಿಯೆಯನ್ನು ಪೂರೈಸಲು ನಾವು ಸರಪಣಿಯನ್ನು ಮಾಡಿಕೊಂಡೆವು. ಅಲ್ಲದೆ ಪೊಲೀಸ್ ಆಡಳಿತದ ಕಡೆಯಿಂದ ನಮಗೆ ಯಾವುದೇ ನಿರ್ದಿಷ್ಟ ಸೂಚನೆಗಳು ಸಿಗಲಿಲ್ಲ. ನಾವು ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಲು ಪ್ರಯತ್ನಿಸಿದ್ದೇವೆ ಆದರೆ ಜನಸಂದಣಿಯನ್ನು ನಿಯಂತ್ರಿಸುವುದು ಸುಲಭವಲ್ಲ” ಎಂದು ಅವರು ಹೇಳಿದ್ದಾರೆ.

ಮೌಲಾನಾ ನಿಧನರಾಗಿದ್ದಾರೆ ಎಂದು ಅವರ ಹೆಸರಲ್ಲಿ ಇರುವ ಫೇಸ್‌ಬುಕ್ ಪೇಜೊಂದು, ಏಪ್ರಿಲ್ 16, 2021 ರಂದು ಘೋಷಿಸಿತ್ತು.

ವಿಡಿಯೊದಲ್ಲಿ ಇರುವುದು ಅಂತ್ಯಕ್ರಿಯೆಯ ಮೆರವಣಿಗೆ ಎಂದು ಸಂಭಾಲ್ ಪೊಲೀಸರು ದೃಡಪಡಿಸಿದ್ದಾರೆ. ಆದರೆ ಸಭೆ ಸೇರಲು ಅನುಮತಿ ಇರಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಂಕೇಶ್ವರರ ‘ನಿಂಬೆ’ ಸಲಹೆ ಪಾಲಿಸಿ ಎಂದ ಬಿಜೆಪಿ ಸಂಸದ; ಅವೈಜ್ಞಾನಿಕತೆ ಹರಡುತ್ತಿದ್ದಾರೆಂದು ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...