Homeಮುಖಪುಟಕುಟುಂಬದಿಂದಲೇ ಅತ್ಯಾಚಾರ ಸಂತ್ರಸ್ತೆಯ ಹತ್ಯೆ : ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ವಿರುದ್ದ ದೂರು

ಕುಟುಂಬದಿಂದಲೇ ಅತ್ಯಾಚಾರ ಸಂತ್ರಸ್ತೆಯ ಹತ್ಯೆ : ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ವಿರುದ್ದ ದೂರು

ಹೆತ್ತ ತಾಯಿಯೇ ಮುಂದೆ ನಿಂತು ಕೊಲೆ ಮಾಡಿಸಿದ್ದಾರೆ ಎಂದ ಪೊಲೀಸರು!

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್‌ ಜಿಲ್ಲೆಯಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದ ಅತ್ಯಾಚಾರ ಆರೋಪಿ ಅಪ್ರಾಪ್ತ ಸಂತ್ರಸ್ತೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ ಎಂದು ಕಳೆದ ವಾರ ವರದಿಯಾಗಿತ್ತು. ಆದರೆ, ಈಗ ಈ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ.

ಪೊಲೀಸರು ಪ್ರಕರಣದ ಕುರಿತು ಅಳವಾದ ತನಿಖೆ ನಡೆಸಿದಾಗ, ಕುಟುಂಬಸ್ಥರೇ (ಹೆತ್ತ ತಾಯಿಯೇ) ಸಂತ್ರಸ್ತ ಬಾಕಿಯನ್ನು ಹತ್ಯೆ ಮಾಡಿರುವುದು ಬಯಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ತಾಯಿ, ಇಬ್ಬರು ಸಹೋದರರು ಮತ್ತು ಮಾವ ಸಂಚು ರೂಪಿಸಿ ಗುಂಡಿಕ್ಕಿ ಬಾಲಕಿಯನ್ನು ಹತ್ಯೆ ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

ಕಳೆದ ವಾರ ಬಾಲಕಿಯ ಕೊಲೆ ನಡೆದ ಸಂದರ್ಭ, ಆಕೆಯ ತಾಯಿ ಮತ್ತು ಸಹೋದರ ಜೊತೆಗಿದ್ದರು. ಆದರೆ, ಅವರಿಗೆ ಯಾವುದೇ ಗಾಯಗಳಾಗಿರಲಿಲ್ಲ. ಕೊಲೆಗಾರ ಬಾಲಕಿಯನ್ನೇ ಗುರಿಯಾಗಿಸಿದ್ದ ಎಂದು ವರದಿಗಳು ಹೇಳಿತ್ತು. ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಪೊಲೀಸರು ತನಿಖೆ ನಡೆಸುವುದಾಗಿ ತಿಳಿಸಿದ್ದರು. ಇದೀಗ ತನಿಖೆಯಿಂದ ಸತ್ಯ ಬಯಲಾಗಿದೆ.

ಬಾಲಕಿಯ ಅತ್ಯಾಚಾರ ಆರೋಪಿ ರಿಂಕು ಕುಮಾರ್ ಎಂಬಾತ ಹತ್ಯೆ ಮಾಡಿದ್ದ ಎಂದು ಆರಂಭದಲ್ಲಿ ಹೇಳಲಾಗಿತ್ತು. ಆದರೆ, ಕೊಲೆ ನಡೆದಾಗ ಆತ ಆಸ್ಪತ್ರೆಯಲ್ಲಿರುವ ತನ್ನ ತಂದೆಯ ಜೊತೆಗಿದ್ದ ಸಿಸಿಟಿವಿ ವಿಡಿಯೋಗಳು ಹರಿದಾಡಿದ್ದವು. ಇದು ತನಿಖೆಯ ದಿಕ್ಕನ್ನೇ ಬದಲಿಸಿತ್ತು.

ತನಿಖೆ ಮುಂದುವರೆಸಿದ ಪೊಲೀಸರು, ಸಂತ್ರಸ್ತೆಯ ಕುಟುಂಬದವರನ್ನೇ ವಿಚಾರಣೆಗೆ ಒಳಪಡಿಸಿದ್ದರು. ಆಗ ತಾಯಿಯೇ ಮಗಳ ಹತ್ಯೆಗೆ ಸಂಚು ರೂಪಿಸಿದ ವಿಷಯ ಬೆಳಕಿಗೆ ಬಂದಿದೆ. ಈ ಮೊದಲು ರಿಂಕು ಜೊತೆ ಮಗಳು ತೆರಳಿದ್ದಳು, ಹಾಗಾಗಿ, ಆಕೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಆತನ ವಿರುದ್ಧ ಸಾಕ್ಷ್ಯ ಹೇಳಲಾರಳಲು ಎಂಬ ಭೀತಿಯಿಂದ ಈ ಕೃತ್ಯ ಎಸಗಿದ್ದಾಗಿ ವಿಚಾರಣೆಯಿಂದ ಗೊತ್ತಾಗಿದೆ.

ತಾಯಿ ತನ್ನ ಮಗಳನ್ನು ಇತ್ತೀಚೆಗೆ ಗಾಝಿಯಾಬಾದ್‌ನಿಂದ ಕರೆ ತಂದಿದ್ದಳು. ಸಂಭಾಲ್‌ನ ಮನೆಗೆ ವಾಪಸ್ಸಾದಾಗ, ಸಂಬಂಧಿಕರ ಮನೆಗೆ ಹೋಗುವಂತೆ ಮನವೊಲಿಸಿ ಸಹೋದರನ ಜೊತೆ ಬೈಕ್‌ನಲ್ಲಿ ಕರೆದೊಯ್ದಿದ್ದಳು. ಮಾವ ದಾರಿಯಲ್ಲಿ ಬಂದೂಕು ಹಿಡಿದು ನಿಂತಿದ್ದಾನೆ ಎನ್ನುವ ಅರಿವು ಇಲ್ಲದೇ ಹೋಗುತ್ತಿದ್ದ ಬಾಲಕಿಯ ಮೇಲೆ ಮೂರು ಸುತ್ತು ಗುಂಡು ಹಾರಿಸಿದ ಚಿಕ್ಕಪ್ಪ, ಸಾಯಿಸಿದ್ದ ಎನ್ನುವುದು ತನಿಖೆಯಿಂದ ದೃಢಪಟ್ಟಿದೆ ಎಂದು ಪೊಲೀಸರು ವಿವರಿಸಿದ್ದಾರೆ.

ಮಗಳು ಕುಟುಂಬಕ್ಕೆ ಅವಮಾನ ತರಬಹುದು ಎಂದು ಹೆತ್ತ ತಾಯಿಯೇ ಮುಂದೆ ನಿಂತು ಕೊಲೆ ಮಾಡಿಸಿದ್ದಾರೆ. ದುಷ್ಕೃತ್ಯಕ್ಕೆ ಆಕೆಯ ಮಾವ ಮತ್ತು ಇಬ್ಬರು ಸಹೋದರರು ಸಹಕರಿಸಿದ್ದಾರೆ ಎಂದು ಸಂಭಾಲ್ ಎಸ್ಪಿ ಕ್ರಿಶನ್ ಕುಮಾರ್ ಹೇಳಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ಹೇಳಿದೆ.

ಬಾಲಕಿಯ ಕೊಲೆ ನಡೆದ ಕೆಲವೇ ದಿನಗಳಲ್ಲಿ, ಆಕೆಯ ಅತ್ಯಾಚಾರ ಆರೋಪಿ ರಿಂಕು ಕುಮಾರ್‌ನ ತಂದೆ ಸಾವನ್ನಪ್ಪಿದ್ದಾರೆ. ನಾವು ಆಸ್ಪತ್ರೆಯ ಸಿಸಿಟಿವಿ ಪರಿಶೀಲಿಸಿದಾಗ, ಕೊಲೆ ನಡೆದ ಸಂದರ್ಭ ರಿಂಕು ಕುಮಾರ್ ತಂದೆಯ ಜೊತೆಗಿದ್ದ. ಇದು ನಮ್ಮ ತನಿಖೆಯ ದಿಕ್ಕನ್ನು ಬದಲಿಸಿತು. ಕುಟುಂಬದ ಗೌರವಕ್ಕಾಗಿ ಬಾಲಕಿಯನ್ನು ಕೊಲೆ ಮಾಡಿರುವುದಾಗಿ ಆರೋಪಿಗಳು ಹೇಳಿದ್ದಾರೆ. ಬಂಧನದ ಬಳಿಕ ಅವರಲ್ಲಿ ಕೊಲೆ ಬಗ್ಗೆ ಯಾವುದೇ ಪಶ್ಚಾತಾಪ ಕಂಡು ಬಂದಿಲ್ಲ ಎಂದು ಎಸ್ಪಿ ಕ್ರಿಶನ್ ಕುಮಾರ್ ತಿಳಿಸಿದ್ದಾರೆ ಎಂದು ವರದಿ ವಿವರಿಸಿದೆ.

ಬಾಲಕಿಯ ಹತ್ಯೆಯ ಕುರಿತ ವರದಿ ಕೆಳಗಿದೆ 

ಜಾಮೀನಿನ ಮೇಲೆ ಹೊರ ಬಂದಿದ್ದ ಅತ್ಯಾಚಾರ ಆರೋಪಿಯಿಂದ ಸಂತ್ರಸ್ತೆಯ ಗುಂಡಿಕ್ಕಿ ಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...