Homeಕರೋನಾ ತಲ್ಲಣಕೊರೊನಾ ಭಯ:15 ತಿಂಗಳಿಂದ ಗುಡಿಸಿಲಿನಲ್ಲೇ ಸ್ವಯಂ ಕ್ವಾರಂಟೈನ್ ಆದ ಕುಟುಂಬ!

ಕೊರೊನಾ ಭಯ:15 ತಿಂಗಳಿಂದ ಗುಡಿಸಿಲಿನಲ್ಲೇ ಸ್ವಯಂ ಕ್ವಾರಂಟೈನ್ ಆದ ಕುಟುಂಬ!

- Advertisement -
- Advertisement -

ಐದು ಸದಸ್ಯರ ಕುಟುಂಬವೊಂದು ತಮಗೆ ಕೊರೊನಾ ಸೋಂಕು ಬರಬಹುದು ಎಂಬ ಭಯದಿಂದ 15 ತಿಂಗಳುಗಳಿಂದ ಗುಡಿಸಿಲಿನಲ್ಲೇ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದ ಘಟನೆ ಆಂಧ್ರಪ್ರದೇಶದ ಕಡಾಲಿ ಗ್ರಾಮದಲ್ಲಿ ನಡೆದಿದೆ.

ಕಡಾಲಿ ಗ್ರಾಮದಲ್ಲಿ 15 ತಿಂಗಳ ಹಿಂದೆ ಒಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದರು. ಹೀಗಾಗಿ ಭಯಗೊಂಡ ಐದು ಸದಸ್ಯರ ಕುಟಂಬದ ಮೂವರು ಮಹಿಳೆಯರು ಅಂದಿನಿಂದಲೂ ಸ್ವಯಂ ಪ್ರೇರಿತರಾಗಿ ತಮ್ಮನ್ನು ಗೃಹಬಂಧನಕ್ಕೆ ಒಳಪಡಿಸಿಕೊಂಡಿದ್ದರು ಎಂದು ತಿಳಿದು ಬಂದಿದೆ.

ಕುಟುಂಬದ ಇಬ್ಬರು ಪುರುಷರು ಕೆಲವೊಮ್ಮೆ ಕೆಲಸಕ್ಕಾಗಿ ಗುಡಿಸಲಿನಿಂದ ಹೊರ ಬಂದಿದ್ದಾರೆ. ಆದರೆ ಮೂವರು ಮಹಿಳೆಯರು ಮಾತ್ರ ಕಳೆದ 15 ತಿಂಗಳುಗಳಿಂದ ಹೊರ ಬಂದಿಲ್ಲ. ಕೇವಲ ಗುಡಿಸಲಿಗೆ ಸೀಮಿತರಾಗಿದ್ದರು ಎಂದು ಮಾಹಿತಿ ದೊರೆತಿದೆ.

ಇದನ್ನೂ ಓದಿ: ಹುತಾತ್ಮರ ದಿನಾಚರಣೆ: ಬಂಡಾಯದ ನೆಲ ನರಗುಂದದಲ್ಲಿ ಹೋರಾಟದ ಕಿಚ್ಚು ಹೆಚ್ಚಿಸಿದ ರೈತರು

ಕಡಾಲಿ ಗ್ರಾಮದಲ್ಲಿ ವಾಸಿಸುತ್ತಿರುವ ಈ ಕುಟುಂಬದಲ್ಲಿ 50 ವರ್ಷದ ಜಾನ್ ಬೆನ್ನಿ ಮತ್ತು ಅವರ 29 ವರ್ಷದ ಮಗ ಚೀನಾಬಾಬು ಹಳ್ಳಿಯಲ್ಲಿ ಸೈಕಲ್ ದುರಸ್ತಿ ಅಂಗಡಿಯೊಂದನ್ನು ನಡೆಸುತ್ತಿದ್ದಾರೆ. ಬೆನ್ನಿಯ ಪತ್ನಿ ಋಥಮ್ಮ (45), ಮತ್ತು ಇಬ್ಬರು ಹೆಣ್ಣುಮಕ್ಕಳು, 30 ವರ್ಷದ ಕಾಂತಮಣಿ, ಮತ್ತು 32 ವರ್ಷದ ರಾಣಿ ಇದ್ದಾರೆ. ಜಾನ್ ಬೆನ್ನಿನ ಮತ್ತು ಮಗ ಚೀನಾಬಾಬು ಕೆಲವೊಮ್ಮೆ ಹೊರಗಡೆ ಹೋಗಿದ್ದಾರೆ. ಆದರೆ ಮೂವರು ಮಹಿಳೆಯರು ಗುಡಿಸಿಲಿನಲ್ಲೇ ಬಂಧಿಯಾಗಿದ್ದಾರೆ.

ಈ ಕುಟುಂಬಕ್ಕೆ ಸರ್ಕಾರಿ ಯೋಜನೆಯಡಿಯಲ್ಲಿ ವಸತಿಗಾಗಿ ಜಮೀನು ಮಂಜೂರು ಮಾಡಲಾಗಿತ್ತು. ಅದಕ್ಕಾಗಿ ಹಳ್ಳಿಯ ಸ್ವಯಂಸೇವಕರೊಬ್ಬರು ಅವರ ಹೆಬ್ಬೆಟ್ಟು (ಸಹಿ) ತೆಗೆದುಕೊಳ್ಳು ಹೋಗಿದ್ದ ಸಂದರ್ಭದಲ್ಲಿ ಅವರು ಸ್ವಯಂ ಗೃಹಬಂಧಿಯಾಗಿರುವುದು ಗೊತ್ತಾಗಿದೆ ಎಂದು ಗ್ರಾಮದ ಸರಪಂಚ್‌ ತಿಳಿಸಿದ್ದಾರೆ.

ವಿಷಯ ತಿಳಿದ ಬಳಿಕ ನಾವು ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಆ ಕುಟುಂಬದ ಆರೋಗ್ಯ ಸ್ಥಿತಿಹದಗೆಟ್ಟಿದೆ. ಅವರು ಹಲವಾರು ದಿನಗಳಿಂದ ಸ್ಥಾನವನ್ನೂ ಮಾಡಿಲ್ಲ. ಅವರು ಸಾಯುವ ಪರಿಸ್ಥಿತಿಗೆ ತಲುಪಿದ್ದರು. ಗ್ರಾಮಕ್ಕೆ ಬಂದ ಪೊಲೀಸರ ತಂಡವು ಅವರನ್ನು ರಕ್ಷಿಸಿದೆ. ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸರಪಂಚ್‌ ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಯ ಅಧೀಕ್ಷಕ ಡಾ.ಪ್ರಭಾಕರ್ ರಾವ್ ಅವರು ಮಹಿಳೆಯರು ಅಪೌಷ್ಠಿಕತೆಯಿಂದ ಬಳಲುತ್ತಿದ್ದರು, ಅವರಿಗೆ ವಿಟಮಿನ್ ಕೊರತೆಯಿದೆ ಎಂದು ಹೇಳಿದ್ದಾರೆ.

ಮುಖ್ಯವಾಗಿ ವಿಟಮಿನ್ ಡಿ (ಸೂರ್ಯನ ಬಿಸಿಲಿಗೆ ಬಾರದ ಕಾರಣ) ಮತ್ತು ಬಿ-ಕಾಂಪ್ಲೆಕ್ಸ್ ಕಡಿಮೆಯಿದೆ. ಮಹಿಳೆಯರ ಹಿಮೋಗ್ಲೋಬಿನ್ ಮಟ್ಟವು 4 ಗ್ರಾಂಗಳಷ್ಟಾಗಿತ್ತು(ಮಹಿಳೆಯರಲ್ಲಿ 12.3-15.3 ಗ್ರಾಂ ಅನ್ನು ಸಾಮಾನ್ಯವೆಂದು ಪರಿಗಣಿಸಲಾಗುತ್ತದೆ). ಅವರು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎಂದು ಡಾ.ಪ್ರಭಾಕರ್ ರಾವ್ ಹೇಳಿದ್ದಾರೆ.


ಇದನ್ನೂ ಓದಿ: ದಲಿತ ಮಹಿಳೆಯ ಲಾಕಪ್‌ ಡೆತ್: ಮೂವರು ಪೊಲೀಸರು ಸೇವೆಯಿಂದ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...