Homeಮುಖಪುಟದಲಿತ ವ್ಯಕ್ತಿಯ ಹತ್ಯೆ: ಪ್ರಕರಣ ಹಿಂಪಡೆಯುವಂತೆ ಕುಟುಂಬಕ್ಕೆ ಒತ್ತಡ

ದಲಿತ ವ್ಯಕ್ತಿಯ ಹತ್ಯೆ: ಪ್ರಕರಣ ಹಿಂಪಡೆಯುವಂತೆ ಕುಟುಂಬಕ್ಕೆ ಒತ್ತಡ

- Advertisement -
- Advertisement -

ತಮಿಳುನಾಡಿನ ಉದುಮಲ್‌ಪೇಟ್ ಜಿಲ್ಲೆಯಲ್ಲಿ ದಲಿತ ವ್ಯಕ್ತಿಯೋರ್ವನ ಕೊಲೆ ಪ್ರಕರಣದ ಆರೋಪಿಗಳು ಸಂತ್ರಸ್ತನ ಕುಟುಂಬಕ್ಕೆ ಪ್ರಕರಣವನ್ನು ಕೈಬಿಡುವಂತೆ ಹಣದ ಆಮಿಷ ಮತ್ತು ಬೆದರಿಕೆಯನ್ನು ಹಾಕಿದ್ದಾರೆ. ಈ ಕುರಿತು ಸಂತ್ರಸ್ತನ ಕುಟುಂಬವೇ ಹೇಳಿಕೆಯನ್ನು ನೀಡಿದ್ದು, ಪ್ರಕರಣದಲ್ಲಿ ಪೊಲೀಸರ ಹಸ್ತಕ್ಷೇಪದ ಆರೋಪವನ್ನು ಮಾಡಿದ್ದಾರೆ.

2023ರ ನ.27ರಂದು ಪರಿಶಿಷ್ಟ ಪಂಗಡದ ನರಿಕುರವರ್ ಸಮುದಾಯಕ್ಕೆ ಸೇರಿದ ಸೆಂಕೋಟ್ಟೈ (55) ಅವರನ್ನು ಉದುಮಲಪೇಟೆಯ ತಾಂಥೋಣಿಯಲ್ಲಿ ಥಳಿಸಿ ಹತ್ಯೆ ಮಾಡಲಾಗಿತ್ತು. ಉದುಮಲಪೇಟೆ ಪೊಲೀಸರು ದುಷ್ಕರ್ಮಿಗಳ ಪರವಾಗಿ ನಿಂತಿದ್ದಾರೆ ಮತ್ತು ವೀಡಿಯೊ ಸಾಕ್ಷ್ಯವನ್ನು ನಾಶಪಡಿಸಿದ್ದಾರೆ ಎಂದು ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಆರ್ ಥಾನರಾಜ್ ಆರೋಪಿಸಿದ್ದಾರೆ.

ಏನಿದು ಘಟನೆ?

2023ರ ನ.27ರಂದು ಸೆಂಕೋಟ್ಟೈ ತನ್ನ ಸೋದರಳಿಯ ಕುಮಾರ್ (25) ಜೊತೆಗೆ ತಾಂಥೋನಿಯಲ್ಲಿ  ಪಕ್ಷಿಗಳನ್ನು ಬೇಟೆಯಾಡುತ್ತಿದ್ದರು ಎನ್ನಲಾಗಿದೆ. ಎಫ್‌ಐಆರ್‌ನಲ್ಲಿ ಕುಮಾರ್ ಉಲ್ಲೇಖದ ಪ್ರಕಾರ, ಅವರು ಬೇಟೆಯಾಡಲು ಬಳಸಿದ ಕಲ್ಲು ಸೆಲ್ವಕುಮಾರ್ ಎಂಬವರ ಮನೆಯ ಮೇಲ್ಛಾವಣಿಗೆ ಬಿದ್ದಿದೆ. ಇದೇ ಕಾರಣಕ್ಕೆ  ಆರೋಪಿಗಳು ಆತನ ವಿರುದ್ಧ ಕೋಳಿ ಕಳ್ಳತನಕ್ಕೆ ಯತ್ನಿಸಿದ್ದಾನೆಂದು ನಿಂದಿಸುತ್ತಾರೆ. ಬಳಿಕ ಇತರರನ್ನು ಗುಂಪು ಸೇರಿಸಿ ಕುಮಾರ್ ಮತ್ತು ಸೆಂಕೋಟ್ಟೈ ಅವರನ್ನು ಎರಡು ಮರಗಳಿಗೆ ಕಟ್ಟಿಹಾಕಿ ಥಳಿಸಿದ್ದಾರೆ. ಈ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಸೆಂಕೋಟ್ಟೈ ಅವರನ್ನು ಉದುಮಲ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು, ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಹಲ್ಲೆಯಿಂದ ಕುಮಾರ್‌ಗೆ ತೀವ್ರ ಗಾಯಗಳಾಗಿದ್ದವು. ಕುಮಾರ್ ಅದೇ ದಿನ ಪೊಲೀಸ್ ದೂರು ನೀಡಿದ್ದಾರೆ ಮತ್ತು ಸೆಲ್ವಕುಮಾರ್ ಮತ್ತು ಇತರ ಮೂವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಪ್ರಕಾರಣವನ್ನು ಕೈಬಿಡಲು ಆಮಿಷ

ಇದೀಗ ಸೆಂಕೋಟ್ಟೈ ಅವರ ಕುಟುಂಬ ಪ್ರಕಾರಣವನ್ನು ಕೈಬಿಡಲು ನಮಗೆ ಆರೋಪಿಗಳು ಹಣದ ಆಮಿಷ ನೀಡುತ್ತಿದ್ದಾರೆ, ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಆರ್ ಥಾನರಾಜ್, ದುಷ್ಕರ್ಮಿಗಳ ಬಳಿ ಇರುವ ವಿಡಿಯೋ ಸಾಕ್ಷ್ಯವನ್ನು ಸಂಗ್ರಹಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ಸಂತ್ರಸ್ತ ಕುಟುಂಬ ಆರೋಪಿಸಿದೆ. ಇಬ್ಬರು ವ್ಯಕ್ತಿಗಳು ಕುಮಾರ್ ಮತ್ತು ಸೆಂಕೋಟ್ಟೈ ದೈಹಿಕವಾಗಿ ಹಲ್ಲೆ ಮಾಡಿದ ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದಾರೆ. ಆ ವೀಡಿಯೊಗಳನ್ನು ಅಳಿಸಲು ಪೊಲೀಸರು ಅವರನ್ನು ಕೇಳಿದ್ದಾರೆ ಎಂದು ನಾವು ಅನುಮಾನಿಸುತ್ತೇವೆ. ಗ್ರಾಮದಲ್ಲಿ ಪ್ರಬಲ ಬಹುಸಂಖ್ಯಾತರಾಗಿರುವ ಗೌಂಡರ್ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಪೊಲೀಸರು ಅವರ ಪರ ನಿಂತಿದ್ದಾರೆ ಎಂದು ಥಾನರಾಜ್ ಅವರು ಹೇಳಿದ್ದಾರೆ.

ತಮಿಳುನಾಡು ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗವು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ವಿಚಾರಣೆ ನಡೆಸಬೇಕು. ಆರೋಪಿಗಳಿಗೆ ಶಿಕ್ಷಿಯನ್ನು ಕೊಡಿಸಿದರೆ ಅದು ಬುಡಕಟ್ಟು ಸಮುದಾಯಕ್ಕೆ ಭಯ ಮುಕ್ತವಾಗಿ ಬದುಕಲು ಸಹಾಯ ಮಾಡುತ್ತದೆ. ಸೆಂಕೋಟ್ಟೈ ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು ಮತ್ತು ಅವರ ಮಕ್ಕಳಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಥಾನರಾಜ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಪೊಲೀಸ್‌ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಅವರು ಸಾಕ್ಷ್ಯಗಳನ್ನು ನಾಶಪಡಿಸಿದ್ದಾರೆ ಅಥವಾ ಆರೋಪಿ ಸೆಲ್ವಕುಮಾರ್ ಪರ ನಿಂತಿದ್ದಾರೆ ಎಂಬ ಆರೋಪವನ್ನು ನಿರಾಕರಿಸಿದ್ದು, ನಮಗೆ ತಿಳಿದಿರುವಂತೆ ಯಾವುದೇ ವೀಡಿಯೊಗಳಿಲ್ಲ ಮತ್ತು ಪ್ರಕರಣದಲ್ಲಿ ಹೆಸರಿಸಲಾದವರ ಆರೋಪಿಗಳ ಫೋನ್‌ಗಳನ್ನು ನಾವು ಪರಿಶೀಲಿಸಿದ್ದೇವೆ ಎಂದು ಹೇಳಿದ್ದಾರೆ.

ಎಫ್‌ಐಆರ್‌ನಲ್ಲಿ ಸೆಲ್ವಕುಮಾರ್ ಸೇರಿದಂತೆ ನಾಲ್ವರನ್ನು ಮಾತ್ರ ಕುಮಾರ್ ಉಲ್ಲೇಖಿಸಿದ್ದರು. ಅವರಿಗೆ ಇತರ ಆರೋಪಿಗಳ ಹೆಸರುಗಳು ತಿಳಿದಿರಲಿಲ್ಲ. ನಾವು ತನಿಖೆಯ ವೇಳೆ ಹೆಚ್ಚಿನ ವ್ಯಕ್ತಿಗಳು ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಕಂಡುಕೊಂಡಿದ್ದೇವೆ. ಈವರೆಗೆ ಆರು ಮಂದಿಯನ್ನು ರಿಮಾಂಡ್ ಮಾಡಿದ್ದೇವೆ. ಉದುಮಲ್‌ಪೇಟೆಯ ಉಪ ಪೊಲೀಸ್ ಆಯುಕ್ತ ಜೆ ಸುಕುಮಾರನ್ ಅವರು ತನಿಖೆಯ ನೇತೃತ್ವವನ್ನು ವಹಿಸಿಕೊಂಡಿದ್ದಾರೆ. ಪೊಲೀಸ್ ತನಿಖೆಯ ವೇಳೆ ಹೆಚ್ಚಿನ ಆರೋಪಿಗಳು ಶಾಮೀಲಾಗಿರುವುದು ಕಂಡು ಬಂದರೆ ಹೆಚ್ಚಿನ ಜನರನ್ನು ಬಂಧಿಸಲಾಗುವುದು ಎಂದು ಪೊಲೀಸ್‌ ಅಧಿಕಾರಿಯೋರ್ವರು ಹೇಳಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 294 (b), 342, 324, 506, 302 ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನು ಓದಿ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್‌ ಸರಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...