Homeದಲಿತ್ ಫೈಲ್ಸ್ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

- Advertisement -
- Advertisement -

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್ ರೈಟ್ಸ್ ಫೋರಮ್ ಮತ್ತು ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್ ಒಳಗೊಂಡ ಸತ್ಯಶೋಧನಾ ತಂಡವು ಶನಿವಾರ ಒತ್ತಾಯಿಸಿದೆ. ಈ ಪ್ರಕರಣದಲ್ಲಿ ಈಗಾಗಲೇ ಆರು ಜನರನ್ನು ಬಂಧಿಸಲಾಗಿದೆ ಎಂದು ತಂಡ ತಿಳಿಸಿದೆ.

ಮಾದಿಗ ಸಮುದಾಯದ ಯುವಕನೊಬ್ಬ ಬೋಯ ಸಮುದಾಯದ ಯುವತಿಯನ್ನು ಸೆಪ್ಟೆಂಬರ್ 9 ರಂದು ಹೈದರಾಬಾದ್‌ನ ಆರ್ಯ ಸಮಾಜದಲ್ಲಿ ವಿವಾಹವಾಗಿದ್ದು, ನಂತರ ಮಸಾಬ್ ಟ್ಯಾಂಕ್ ಪೊಲೀಸರಿಂದ ರಕ್ಷಣೆ ಕೋರಿದ್ದರು. ಸತ್ಯಶೋಧನಾ ತಂಡದ ಪ್ರಕಾರ, ಸೆಪ್ಟೆಂಬರ್ 10 ರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸುಮಾರು 15 ಜನ ಯುವತಿ ಕುಟುಂಬದ ಸದಸ್ಯರು ರೆಪಲ್ಲೆ ಗ್ರಾಮಕ್ಕೆ ತಲುಪಿ, ಸಲಿಕೆಗಳು, ಟ್ರ್ಯಾಕ್ಟರ್ ಮತ್ತು ಇತರೆ ಉಪಕರಣಗಳನ್ನು ಬಳಸಿ ಮನೆಯನ್ನು ಧ್ವಂಸಗೊಳಿಸಿದ್ದಾರೆ. ಅಂದೇ ಎಫ್‌ಐಆರ್ ದಾಖಲಿಸಲಾಗಿದೆ.

“ದಲಿತರ ಮನೆಯನ್ನು ಧ್ವಂಸಗೊಳಿಸಿರುವ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ತಂಡ ಒತ್ತಾಯಿಸಿದೆ.

ಡಿಬಿಎಫ್ ರಾಷ್ಟ್ರೀಯ ಕಾರ್ಯದರ್ಶಿ ಪಿ. ಶಂಕರ್, ಎಚ್‌ಆರ್‌ಎಫ್ ಕಾರ್ಯಕರ್ತ ಸಂಜೀವ್, ಎಎಸ್‌ಎ ವಕ್ತಾರ ಹಾಗೂ ಹೈಕೋರ್ಟ್ ವಕೀಲ ಎದ್ದು ದಿವಾಕರ್ ಮತ್ತು ಸಾಮಾಜಿಕ ಕಾರ್ಯಕರ್ತ ಭಾಸ್ಕರ್ ಅವರು ಗ್ರಾಮಕ್ಕೆ ಭೇಟಿ ನೀಡಿದ್ದರು. ಶನಿವಾರ ಡಿಎಸ್‌ಪಿ ಮೊಗುಲಯ್ಯ ಕೂಡ ಸ್ಥಳ ಪರಿಶೀಲನೆ ನಡೆಸಿದರು.

ಘಟನೆಯಲ್ಲಿ ಭಾಗಿಯಾದ ಎಲ್ಲರನ್ನೂ ಹಾಗೂ ಪ್ರಚೋದನೆ ನೀಡಿದವರನ್ನು ಬಂಧಿಸಬೇಕು, ಎಫ್‌ಐಆರ್‌ನಲ್ಲಿ ಆಸ್ತಿ ಹಾನಿ ವಿಧಿಗಳನ್ನು ಸೇರಿಸಬೇಕು. ಮನೆಯನ್ನು ಪುನರ್ನಿರ್ಮಿಸಲು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪರಿಹಾರ ನೀಡಬೇಕು ಎಂದು ತಂಡ ಒತ್ತಾಯಿಸಿದೆ. ಅಲ್ಲದೆ, ಆರೋಪಿಗಳನ್ನು ಗ್ರಾಮದಿಂದ ದೂರವಿಡಬೇಕು, ಜಿಲ್ಲಾಧಿಕಾರಿ ಹಾಗೂ ಎಸ್‌ಪಿ ಅವರು ಗ್ರಾಮಕ್ಕೆ ಭೇಟಿ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...