Homeಕರ್ನಾಟಕಕುಟುಂಬ ರಾಜಕಾರಣ ಪೋಷಿಸುತ್ತ ಇತರರ ಕಡೆ ಕಲ್ಲು‌ ಎಸೆಯುವ ಬಿಜೆಪಿ : ಕಾಂಗ್ರೆಸ್

ಕುಟುಂಬ ರಾಜಕಾರಣ ಪೋಷಿಸುತ್ತ ಇತರರ ಕಡೆ ಕಲ್ಲು‌ ಎಸೆಯುವ ಬಿಜೆಪಿ : ಕಾಂಗ್ರೆಸ್

- Advertisement -
- Advertisement -

ಕುಟುಂಬ ರಾಜಕಾರಣವನ್ನ ಪೋಷಿಸುತ್ತಾ ಇನ್ನೊಬ್ಬರತ್ತ ಕಲ್ಲೆಸೆಯುವ ಬಿಜೆಪಿಗೆ ತಮ್ಮ ಮಾತುಗಳಿಗಾಗಲಿ ಬದ್ಧತೆ ಪ್ರದರ್ಶಿಸಬೇಕೆನ್ನುವ ಕನಿಷ್ಠ ಪ್ರಜ್ಞೆ ಇಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

ರಾಜ್ಯಕ್ಕೆ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿದೆ. ಬಿಜೆಪಿ ಅದನ್ನು ಪೋಷಿಸುತ್ತಾ ಇತರರ ಕಡೆ ಕಲ್ಲು ಎಸೆಯುತ್ತಿದೆ ಎಂದಿದೆ.

ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ತಂದೆ ಎಸ್.ಅರ್. ಬೊಮ್ಮಾಯಿಯವರು 1988 ರಿಂದ 1989 ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಹೀಗಾಗಿ ಕುಟುಂಬ ರಾಜಕಾರಣದ ಕುರಿತು ಕಾಂಗ್ರೆಸ್ ಬಿಜೆಪಿಯನ್ನು ಕುಟುಕಿದೆ.

ಇದನ್ನೂ ಓದಿ: ಒಬ್ಬ ಭ್ರಷ್ಟನ ಬದಲು ಮತ್ತೊಬ್ಬ ಭ್ರಷ್ಟ: ಸಿಎಂ ಬದಲಾವಣೆ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ

“ತಾನೇ “ಕುಟುಂಬ ರಾಜಕಾರಣ” ಎಂಬ ಗಾಜಿನ ಮನೆಯಲ್ಲಿ ಕುಳಿತು ಇತರರತ್ತ ಕಲ್ಲು ಎಸೆಯುವ ಕರ್ನಾಟಕ ಬಿಜೆಪಿ ನಡೆ ಬಂಡತನದ್ದು!. ಪುಂಖಾನುಪುಂಖವಾಗಿ ಭಾಷಣ ಬಿಗಿಯುವ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯದ ಸಿಎಂ ಆಯ್ಕೆಯಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿದ್ದೇಕೆ!?. ಮಾಜಿ ಸಿಎಂ ಪುತ್ರನನ್ನು ಸಿಎಂ ಮಾಡುವಾಗ ತಮ್ಮ ಮಾತು ನೆನಪಾಗಲಿಲ್ಲವೇ ಮೋದಿಯವರಿಗೆ!?” ಎಂದು ಪ್ರಶ್ನಿಸಿದೆ.

“ಕುಟುಂಬ ರಾಜಕಾರಣವನ್ನ ಪೋಷಿಸುತ್ತಾ ಇನ್ನೊಬ್ಬರತ್ತ ಕಲ್ಲೆಸೆಯುವ ಬಿಜೆಪಿಗೆ ತಮ್ಮ ಮಾತುಗಳಿಗಾಗಲಿ ಬದ್ಧತೆ ಪ್ರದರ್ಶಿಸಬೇಕೆನ್ನುವ ಕನಿಷ್ಠ ಪ್ರಜ್ಞೆ ಇಲ್ಲ. ಒಬ್ಬ ಮಾಜಿ ಸಿಎಂ ಪುತ್ರನನ್ನು ಪಕ್ಷದ ಉಪಾಧ್ಯಕ್ಷರನ್ನಾಗಿ ಮಾಡಿ, ಇನ್ನೊಬ್ಬ ಮಾಜಿ ಸಿಎಂ ಪುತ್ರನನ್ನು ಸಿಎಂ ಮಾಡಿದ್ದೀರಿ! ಬಿಜೆಪಿ = ಫ್ಯಾಮಿಲಿ ಪಾರ್ಟಿ ಅಲ್ಲವೇ!?” ಎಂದು ಬಿಜೆಪಿ ವಿರುದ್ಧ ವ್ಯಂಗ್ಯವಾಡಿದೆ.

ಇನ್ನೂ,”ಜನತಾ ಪರಿವಾರದಿಂದ ವಲಸೆ ಬಂದ ಬಸವರಾಜ್ ಬೊಮ್ಮಾಯಿ ಅವರನ್ನು ಸಿಎಂ ಮಾಡಿರುವ ಬಿಜೆಪಿ ತನ್ನದೇ ಕಾರ್ಯಕರ್ತರನ್ನು ಸಿಎಂ ಆಗಬಲ್ಲಂತಹ ನಾಯಕರನ್ನಾಗಿ ಬೆಳೆಸಲಿಲ್ಲವೇ!? ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡುತ್ತಿದ್ದ ಕರ್ನಾಟಕ ಬಿಜೆಪಿ, ಈಗ ತಾವು ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ ಎಂಬಂತೆ ನಡೆದುಕೊಂಡಿದ್ದರ ಬಗ್ಗೆ ಚರ್ಚೆಗೆ ಸಿದ್ಧವೇ..?” ಎಂದು ಬಹಿರಂಗ ಚರ್ಚೆಗೆ ಕಾಂಗ್ರೆಸ್ ಆಹ್ವಾನಿಸಿದೆ.

“ವಿಫಲ ಹಾಗೂ ಪಕ್ಷಪಾತಿ ಗೃಹಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿ ಅವರ ಕೈಯ್ಯಲ್ಲಿ ರಾಜ್ಯ ಅಧೋಗತಿಗೆ ಇಳಿಯಲಿದೆ ಎಂಬುದಕ್ಕೆ ಕೆಲವು ಸಾಕ್ಷಿಗಳು.

1. ಮಂಗಳೂರು ಗಲಭೆ ನಿಯಂತ್ರಣದಲ್ಲಿ ವೈಫಲ್ಯ,

2.ದಲಿತ ಯುವಕನಿಗೆ ಮೂತ್ರ ಕುಡಿಸಿದ ಪೊಲೀಸರು

3. ಅತ್ಯಾಚಾರ ಆರೋಪಿ ಜಾರಕಿಹೊಳಿ ರಕ್ಷಣೆ

4. ಹಲ್ಲೆ ಆರೋಪಿ ಸಿದ್ದು ಸವದಿ ರಕ್ಷಣೆ

5. ಗಲಭೆಕೋರರ ಕೇಸ್ ಹಿಂತೆಗೆತ

ಎಂದು ಪ್ರಕರಣಗಳನ್ನು ಪಟ್ಟಿ ಮಾಡಿ, ಬಸವರಾಜ್ ಬೊಮ್ಮಾಯಿ ಆಡಳಿತದಲ್ಲಿ ರಾಜ್ಯ ಅಧೋಗತಿಗೆ ಇಳಿಯಲಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.


ಇದನ್ನೂ ಓದಿ: ಪ್ರಜೆಗಳ ಖಾಸಗಿ ಬದುಕಿನೊಳಗೆ ಇಣುಕಿ ನೋಡುವ ಚಟ ಸಂವಿಧಾನ ವಿರೋಧಿ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...