Homeಕರ್ನಾಟಕಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

- Advertisement -
- Advertisement -

ಕರ್ನಾಟಕ ಸುಗಮ ಸಂಗೀತದ ಪ್ರಸಿದ್ದ ಗಾಯಕ ಶಿವಮೊಗ್ಗ ಸುಬ್ಬಣ್ಣ (83) ಅವರು ಹೃದಯಾಘಾತದಿಂದಾಗಿ ಗುರುವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಅವರನ್ನು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಸುಬ್ಬಣ್ಣ ಅವರು ಶಿವಮೊಗ್ಗ ಜಿಲ್ಲೆಯ ನಗರ ಎಂಬ ಗ್ರಾಮದಲ್ಲಿ 1938ರ ಡಿಸೆಂಬರ್ 14ರಂದು ಜನಿಸಿದರು. ತಂದೆ ಗಣೇಶರಾಯರು, ತಾಯಿ ರಂಗನಾಯಕಿ. ತಾತ ಶಾಮಣ್ಣ, ನಂತರ ಎಂ. ಪ್ರಭಾಕರ್ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಅಭ್ಯಾಸ ಮಾಡಿದರು. ಕುವೆಂಪು, ಬೇಂದ್ರೆ ಹಾಗೂ ನಾಡಿನ ಇನ್ನಿತರ ಮೇರು ಕವಿಗಳ ರಚನೆಗಳಿಗೆ ರಾಗ ಸಂಯೋಜಿಸಿ ಸಂಗೀತ ಕ್ಷೇತ್ರದಲ್ಲಿ ವಿಶಿಷ್ಟ ಛಾಪು ಮೂಡಿಸಿದರು.

ಬಿ.ಎ, ಬಿ.ಕಾಂ ಮತ್ತು ಎಲ್‌ಎಲ್‌ಬಿ ಪದವೀಧರಾದ ಶಿವಮೊಗ್ಗ ಸುಬ್ಬಣ್ಣ ಅವರು 1982ರಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ ಬಂದು ನೆಲೆಸಿದರು. 1979ರಲ್ಲಿ ‘ಕಾಡುಕುದುರೆ’ ಚಲನಚಿತ್ರದಲ್ಲಿ ಅವರು ಹಾಡಿದ ‘ಕಾಡು ಕುದುರೆ ಓಡಿ ಬಂದಿತ್ತಾ’ ಹಾಡಿಗೆ ಅತ್ಯುತ್ತಮ ಹಿನ್ನೆಲೆ ಗಾಯನಕ್ಕಾಗಿ ರಜತ ಕಮಲ ರಾಷ್ಟ್ರಪ್ರಶಸ್ತಿ ಪಡೆದರು. ಈ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ ಎಂಬ ಗೌರವಕ್ಕೂ ಪಾತ್ರರಾದರು.

ಇದನ್ನೂ ಓದಿರಿ: ಕೊಪ್ಪಳದಲ್ಲಿ ಜಾತಿ ಘರ್ಷಣೆ: ಹುಲಿಹೈದರ್‌ನಲ್ಲಿ ಇಬ್ಬರ ಕೊಲೆಗೆ ನೈಜ ಕಾರಣವಿದು

ಆಕಾಶವಾಣಿ ಮತ್ತು ದೂರದರ್ಶನದ ‘ಎ’ ಟಾಪ್ ಶ್ರೇಣಿಯ ಗಾಯಕರಾಗಿದ್ದ ಸುಬ್ಬಣ್ಣ, ಆಕಾಶವಾಣಿ ಎಂ.ಎಸ್.ಐ.ಎಲ್. ಪ್ರಾಯೋಜಕತ್ವದಲ್ಲಿ ಪ್ರಸಾರ ಮಾಡಿದ ಜನಪ್ರಿಯ ಕಾರ‍್ಯಕ್ರಮದಲ್ಲಿ ‘ಕೋಡಗನ ಕೋಳಿ ನುಂಗಿತ್ತಾ..’, ‘ಅಳಬೇಡಾ ತಂಗಿ ಅಳಬೇಡ…’ ‘ಬಿದ್ದೀಯಬ್ಬೇ ಮುದುಕಿ..’ ಮೊದಲಾದ ಶಿಶುನಾಳ ಷರೀಫರ ಗೀತೆಗಳನ್ನು ಹಾಡಿ ಮಾತಾದರು.

ಸುಬ್ಬಣ್ಣ ಅವರಿಗೆ 1985ರಲ್ಲಿ ರಾಜ್ಯೋತ್ಸವ ಪುರಸ್ಕಾರ, 1988ರಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಪುರಸ್ಕಾರ, 1999ರಲ್ಲಿ ಸಂತ ಶಿಶುನಾಳ ಷರೀಫ ಪ್ರಶಸ್ತಿ, 2008ರಲ್ಲಿ ಕುವೆಂಪು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ, 2003ರಲ್ಲಿ ಬೆಂಗಳೂರು ಗಾಯನ ಸಮಾಜದಿಂದ ‘ವರ್ಷದ ಕಲಾವಿದ’ ಗೌರವ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಲಭಿಸಿವೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರತಿಭಟನೆ ಪರಿಣಾಮ: ಗೋವು ನಿಯಂತ್ರಣ ಮಸೂದೆಯನ್ನು ಹಿಂಪಡೆದ ಗುಜರಾತ್ ಸರ್ಕಾರ | Naanu Gauri

ಪ್ರತಿಭಟನೆ ಪರಿಣಾಮ: ಗೋವು ನಿಯಂತ್ರಣ ಮಸೂದೆಯನ್ನು ಹಿಂಪಡೆದ ಗುಜರಾತ್ ಸರ್ಕಾರ

0
ಗುಜರಾತ್‌ನಾದ್ಯಂತ ನಡೆದ ಹೈನುಗಾರಿಕೆ ನಡೆಸುವ ಸಮುದಾಯದ ಪ್ರತಿಭಟನೆಯ ನಂತರ ರಾಜ್ಯ ವಿಧಾನಸಭೆಯು ಗೋವು ನಿಯಂತ್ರಣ ಮಸೂದೆಯನ್ನು ಸರ್ವಾನುಮತದಿಂದ ಹಿಂಪಡೆದಿದೆ. ಸುಮಾರು ಐದು ತಿಂಗಳ ಹಿಂದೆ ರಾಜ್ಯದ ನಗರ ಪ್ರದೇಶಗಳ ರಸ್ತೆಗಳು ಮತ್ತು ಸಾರ್ವಜನಿಕ...