Homeಮುಖಪುಟಕಾರ್ಯಕ್ರಮದ ವೇಳೆ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರಿಗೆ ಚಾಕುವಿನಿಂದ ಇರಿತ

ಕಾರ್ಯಕ್ರಮದ ವೇಳೆ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರಿಗೆ ಚಾಕುವಿನಿಂದ ಇರಿತ

‘ದಿ ಸಟಾನಿಕ್ ವರ್ಸಸ್’ ಕೃತಿ ಬರೆದ ಬಳಿಕ ಜೀವ ಬೆದರಿಕೆಯನ್ನು ಎದುರಿಸಿದ ಸಲ್ಮಾನ್ ಅವರು ದಶಕ ಕಾಲ ತಲೆಮರೆಸಿಕೊಂಡು ಬದುಕಿದ್ದರು.

- Advertisement -
- Advertisement -

ಕೊಲೆ ಭೀತಿಯ ಬಳಿಕ ದಶಕಗಳ ಕಾಲ ತಲೆ ಮರೆಸಿಕೊಂಡಿದ್ದು, ಬಳಿಕ ಸಾರ್ವಜನಿಕ ಜೀವನಕ್ಕೆ ಮರಳಿದ್ದ ಭಾರತೀಯ ಮೂಲದ ಕಾದಂಬರಿಕಾರ ಸಲ್ಮಾನ್ ರಶ್ದಿ ಅವರ ಮೇಲೆ ನ್ಯೂಯಾರ್ಕ್‌ನಲ್ಲಿ ಚಾಕುವಿನಿಂದ ಇರಿಯಲಾಗಿದೆ.

ಶುಕ್ರವಾರ ರಾತ್ರಿ ನ್ಯೂಯಾರ್ಕ್‌‌ನಲ್ಲಿ ಆಯೋಜಿಸಲಾಗಿದ್ದ ಉಪನ್ಯಾಸ ಕಾರ್ಯಕ್ರಮದ ವೇಳೆ ಯುವಕನೊಬ್ಬ ವೇದಿಕೆಗೆ ನುಗ್ಗಿ ಚಾಕುವಿನಿಂದ ಹತ್ತರಿಂದ ಹದಿನೈದು ಬಾರಿ ಇರಿದಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಶ್ದಿ ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ. ಪ್ರಪಂಚದಾದ್ಯಂತದ ಬರಹಗಾರರು ಮತ್ತು ರಾಜಕಾರಣಿಗಳು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಆಕ್ರಮಣ ಇದೆಂದು ಖಂಡನೆ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ನ್ಯೂಯಾರ್ಕ್‌ನ ಚೌಟಕ್ವಾ ಇನ್‌ಸ್ಟಿಟ್ಯೂಷನ್‌ನಲ್ಲಿ ಕಲಾತ್ಮಕ ಸ್ವಾತಂತ್ರ್ಯದ ಕುರಿತು ಭಾಷಣ ಮಾಡಲು 75 ವರ್ಷ ವಯಸ್ಸಿನ ರಶ್ದಿ ಅವರನ್ನು ಆಹ್ವಾನಿಸಲಾಗಿತ್ತು. ಆ ವೇಳೆ ಯುವಕನೊಬ್ಬ ವೇದಿಕೆಗೆ ನುಗ್ಗಿದ್ದಾನೆ. ನ್ಯೂಯಾರ್ಕ್ ಸ್ಟೇಟ್ ಪೊಲೀಸ್ ಪಡೆ ದಾಳಿಕೋರನನ್ನು ಬಂಧಿಸಿದೆ.

“ಸಲ್ಮಾನ್ ಒಂದು ಕಣ್ಣನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ; ಅವರ ತೋಳಿನ ನರಗಳು ಕತ್ತರಿಸಲ್ಪಟ್ಟಿವೆ. ಅವರ ಲಿವರ್‌ಗೆ ಹಾನಿಯಾಗಿದೆ” ಎಂದು ರಶ್ದಿಯವರ ಪುಸ್ತಕ ಏಜೆಂಟ್ ಆಂಡ್ರ್ಯೂ ವೈಲಿ ಹೇಳಿದ್ದಾರೆ.

ಬಾಂಬೆಯಲ್ಲಿ ಮುಸ್ಲಿಂ ಕಾಶ್ಮೀರಿ ಕುಟುಂಬದಲ್ಲಿ ಜನಿಸಿದ ರಶ್ದಿ, ತಮ್ಮ ನಾಲ್ಕನೇ ಕಾದಂಬರಿ “ದಿ ಸೈಟಾನಿಕ್ ವರ್ಸಸ್”ನಿಂದಾಗಿ ಜೀವ ಬೆದರಿಕೆಗಳನ್ನು ಎದುರಿಸಿದರು. ಕೆಲವು ಮುಸ್ಲಿಮರು ಪುಸ್ತಕದಲ್ಲಿ ಧರ್ಮನಿಂದೆಯ ಭಾಗಗಳಿವೆ ಎಂದು ದೂರಿದರು. ಮುಸ್ಲಿಂ ಹೆಚ್ಚಿರುವ ಅನೇಕ ದೇಶಗಳಲ್ಲಿ ಈ ಕೃತಿಯನ್ನು ನಿಷೇಧಿಸಲಾಯಿತು. ನಿಷೇಧಿಸಲಾಯಿತು.

1981ರಲ್ಲಿ ರಶ್ದಿ ಅವರು ಬರೆದ ‘ಮಿಡ್‌ನೈಟ್ಸ್ ಚಿಲ್ಡ್ರನ್’ ಜನಮನ್ನಣೆ ಪಡೆಯಿತು. ಸ್ವಾತಂತ್ರ್ಯಾ ನಂತರದ ಭಾರತದ ಚಿತ್ರಣವನ್ನು ಕಟ್ಟಿಕೊಟ್ಟಿದ್ದ ಕೃತಿಯು, ಬ್ರಿಟನ್‌ನ ಪ್ರತಿಷ್ಠಿತ ಬೂಕರ್ ಪ್ರಶಸ್ತಿಗೂ ಭಾಜನವಾಗಿತ್ತು. ಆದರೆ 1988ರಲ್ಲಿ ಬಿಡುಗಡೆಯಾದ ‘ದಿ ಸಟಾನಿಕ್ ವರ್ಸಸ್’ ವಿವಾದಕ್ಕೆ ಈಡಾಯಿತು.

ಇರಾನ್ ಕ್ರಾಂತಿಕಾರಿ ನಾಯಕ ಅಯತೊಲ್ಲಾ ರುಹೊಲ್ಲಾ ಖೊಮೇನಿ ಅವರು ಸಲ್ಮಾನ್ ರಶ್ದಿ ಅವರ ಹತ್ಯೆಗೆ ಕರೆ ನೀಡಿದ್ದರು. ಈ ಕೃತಿಯಲ್ಲಿ ಪ್ರವಾದಿ ಮಹಮ್ಮದ್‌ಗೆ ಅಗೌರವ ತೋರಲಾಗಿದೆ ಎಂದು ಹಲವು ಮುಸ್ಲಿಂ ನಾಯಕರು ವಿರೋಧ ವ್ಯಕ್ತಪಡಿಸಿದರು.

ಧರ್ಮ ಆಚರಣೆ ಮಾಡದ ಭಾರತದ ಮುಸ್ಲಿಂ ದಂಪತಿಯ ಪುತ್ರನಾಗಿದ್ದ ರಶ್ದಿ, ನಾಸ್ತಿಕನಾಗಿದ್ದರು. ರಶ್ದಿಯವರನ್ನು ಕೊಂದವರಿಗೆ ಬಹುಮಾನ ನೀಡುವುದಾಗಿ ಫತ್ವಾ ಹೊರಡಿಸಿದ್ದರಿಂದ ಅವರು ತಲೆಮರೆಸಿಕೊಂಡು ಬದುಕಬೇಕಾಯಿತು.

ಇದನ್ನೂ ಓದಿರಿ: ಕೊನೆಗೂ ರಾಷ್ಟ್ರಧ್ವಜದ ಚಿತ್ರವನ್ನು ಪ್ರೊಫೈಲ್‌ಗೆ ಹಾಕಿಕೊಂಡ ಆರ್‌ಎಸ್‌ಎಸ್‌

ರಶ್ದಿಯವರು ತಮ್ಮ ಕಾದಂಬರಿಯನ್ನು ‘ಸುಂದರ ಸೌಮ್ಯ’ ಎಂದು ಕರೆದಿದ್ದರು. ಕಾದಂಬರಿಯ ಜಪಾನೀ ಭಾಷಾಂತರಕಾರ ಹಿತೋಷಿ ಇಗರಾಶಿ 1991 ರಲ್ಲಿ ಕೊಲ್ಲಲ್ಪಟ್ಟಿದ್ದರು.

ಅವರ ಭಾಷಾಂತರಕಾರರು ಮತ್ತು ಪ್ರಕಾಶಕರ ಮೇಲೆ ಹತ್ಯೆಯ ಪ್ರಯತ್ನದ ನಂತರ ಅವರಿಗೆ ಬ್ರಿಟನ್‌ ಸರ್ಕಾರದಿಂದ ಪೊಲೀಸ್ ರಕ್ಷಣೆಯನ್ನು ನೀಡಲಾಗಿತ್ತು. ರಶ್ದಿ ಅವರು ಸುಮಾರು ಒಂದು ದಶಕ ಕಾಲ ತಲೆಮರೆಸಿಕೊಂಡೇ ಬದುಕಿದರು. ಪದೇ ಪದೇ ಮನೆಗಳನ್ನು ಬದಲಿಸುವುದು ಅನಿವಾರ್ಯವಾಗಿತ್ತು.

1998ರಲ್ಲಿ ಇರಾನ್ ಸರ್ಕಾರವು ರಶ್ದಿ ಹತ್ಯೆ ಆದೇಶವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ ನಂತರ ಸಾರ್ವಜನಿಕ ಜೀವನಕ್ಕೆ ಅವರು ಮರಳಿದ್ದರು. ‘ಬ್ರಿಡ್ಜೆಟ್ ಜೋನ್ಸ್ ಡೈರಿ’ಸಿನಿಮಾ ಮತ್ತು ಅಮೆರಿಕದ ದೂರದರ್ಶನ ಕಾರ್ಯಕ್ರಮ ‘ಸೈನ್ಫೆಲ್ಡ್’ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಂತರರಾಷ್ಟ್ರೀಯ ವಲಯದಲ್ಲಿ ಅವರು ಗುರುತಿಸಿಕೊಂಡಿದ್ದರು. ನಾಲ್ಕು ಬಾರಿ ಮದುವೆಯಾಗಿರುವ ಅವರಿಗೆ ಇಬ್ಬರು ಮಕ್ಕಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...