Homeಮುಖಪುಟಡ್ರಗ್ಸ್‌ ವಿರುದ್ಧ ಸಮರಕ್ಕಿಳಿದ 'ಫರೀಷಾ ಆಬಿದ್': ಪಂಚಾಯತ್ ಅಧ್ಯಕ್ಷೆಯ ಬೆನ್ನಿಗೆ ನಿಂತ ಜನತೆ

ಡ್ರಗ್ಸ್‌ ವಿರುದ್ಧ ಸಮರಕ್ಕಿಳಿದ ‘ಫರೀಷಾ ಆಬಿದ್’: ಪಂಚಾಯತ್ ಅಧ್ಯಕ್ಷೆಯ ಬೆನ್ನಿಗೆ ನಿಂತ ಜನತೆ

- Advertisement -
- Advertisement -

‘ಮಾದಕ ವಸ್ತು’ ಯಾವುದೋ ವಿದೇಶಿ ವಿಷಯ ಎನ್ನುವ ಕಾಲವೊಂದಿತ್ತು. ಆದರೆ, ಈಗ ಭಾರತದ ಮಟ್ಟಿಗೆ ಮಾದಕ ವಸ್ತು ದೊಡ್ಡ ಸಾಮಾಜಿಕ ಪಿಡುಗಾಗಿ ಮಾರ್ಪಟ್ಟಿದೆ. ನಮ್ಮ ಊರುಗಳ ಗಲ್ಲಿ ಗಲ್ಲಿಗೂ ಮಾದಕ ವಸ್ತುಗಳು ಕಾಲಿಟ್ಟಿದೆ. ಯುವಜನರು ಅವುಗಳಿಗೆ ದಾಸರಾಗಿ ಜೀವನ, ಜೀವ ಕಳೆದುಕೊಳ್ಳುತ್ತಿದ್ದಾರೆ.

ಕೇರಳದಲ್ಲಿ ಮಾದಕ ವಸ್ತುಗಳು ಮಕ್ಕಳ ಪೋಷಕರಿಂದ ಹಿಡಿದು ಸರ್ಕಾರದವರೆಗೆ ಎಲ್ಲರಿಗೂ ದೊಡ್ಡ ತಲೆನೋವಾಗಿ ಮಾರ್ಪಟ್ಟಿದೆ. ಯುವಜನರು ಮಾದಕ ವಸ್ತುಗಳಿಗೆ ದಾಸರಾಗಿ ಹೆತ್ತ ತಂದೆ-ತಾಯಿಯನ್ನು ಕೊಲೆ ಮಾಡುವಂತಹ ಪ್ರಕರಣಗಳು ವರದಿಯಾಗುತ್ತಿವೆ.

ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕಣ್ಣೂರು ಜಿಲ್ಲೆಯ ಮಾಟೂಲ್ ಗ್ರಾಮ ಪಂಚಾಯತ್‌ನ ಅಧ್ಯಕ್ಷೆ ಫರೀಷಾ ಆಬಿದ್ ಅವರು ಪ್ರಾರಂಭಿಸಿದ ಕಾರ್ಯಕ್ರಮವೊಂದು ದೊಡ್ಡ ಅಭಿಯಾನವಾಗಿ ಮಾರ್ಪಟ್ಟಿದೆ. ಎಲ್ಲಾ ವರ್ಗದ ಜನ ಸಮೂಹ ಫರೀಷಾ ಅವರ ಬೆನ್ನಿಗೆ ನಿಂತಿದ್ದಾರೆ.

ಈ ಹಿಂದೆ ಶಿಕ್ಷಕಿಯಾಗಿದ್ದ ಈಗ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿರುವ ಫರೀಷಾ ಆಬಿದ್ ಅವರು, ಕಳೆದ ಎರಡು ತಿಂಗಳ ಹಿಂದೆ ಮಾದಕ ವಸ್ತುಗಳ ವಿರುದ್ದ ‘ಧೀರ’ ಎಂಬ ಹೆಸರಿನ ಕಾರ್ಯಕ್ರಮ ಆರಂಭಿಸಿದ್ದಾರೆ. ಆರಂಭದಲ್ಲಿ ಕೆಲ ಯುವಕರನ್ನು ಸೇರಿಸಿ ವಾಟ್ಸಾಪ್‌ ಗ್ರೂಪ್‌ ಮೂಲಕ ಆರಂಭವಾದ ಈ ಕಾರ್ಯಕ್ರಮ ಈಗ ದೊಡ್ಡ ಅಭಿಯಾನವಾಗಿ ಮಾರ್ಪಟ್ಟಿದೆ. ಜನ ಸಮುದಾಯ ಈ ಅಭಿಯಾನಕ್ಕೆ ಅಪೂರ್ವ ಬೆಂಬಲ ವ್ಯಕ್ತಪಡಿಸಿದ್ದು, ಮಾಟೂಲ್‌ನ ಪಕ್ಕದ ಮಾಡಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯವರೂ ಸೇರಿದಂತೆ 800 ಸ್ವಯಂ ಸೇವಕರ ಪಡೆ ರಚನೆಯಾಗಿದೆ.

ಈ ಸ್ವಯಂ ಸೇವಕರು ಮಾದಕ ವಸ್ತುಗಳ ಸಾಗಣೆ ಮತ್ತು ಸೇವನೆಯ ಬಗ್ಗೆ ಗುಪ್ತವಾಗಿ ಮಾಹಿತಿ ಸಂಗ್ರಹಿಸಿ ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸುವ ಕೆಲಸ ಮಾಡುತ್ತಿದ್ದಾರೆ. ಫರೀಷಾ ಅವರ ತಂಡ ಮುಂದಿನ ದಿನಗಳಲ್ಲಿ ಗುಪ್ತ ಮಾದಕವಸ್ತು ಚಟುವಟಿಕೆಗಳನ್ನು ಪತ್ತೆಹಚ್ಚಲು ಥರ್ಮಲ್ ಸ್ಕ್ಯಾನಿಂಗ್‌ನೊಂದಿಗೆ ಡ್ರೋನ್ ಕಣ್ಗಾವಲು ಪರಿಚಯಿಸುವ ಯೋಚನೆಯಲ್ಲಿದೆ.

ಶಿಕ್ಷಕರು, ವಿದ್ಯಾರ್ಥಿಗಳು, ಉದ್ಯಮಿಗಳು, ವ್ಯಾಪಾರಸ್ಥರು, ವಕೀಲರು, ಪೊಲೀಸ್ ಅಧಿಕಾರಿಗಳು ಮತ್ತು ಇತರ ನಾಗರಿಕರು ಫರೀಷಾ ಅವರ ‘ಧೀರ’ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ. ಪರಿಣಾಮ ಮಾದಕವಸ್ತು ಪ್ರಕರಣಗಳಲ್ಲಿ ಭಾಗಿಯಾಗಿರುವ ಕನಿಷ್ಠ 13 ಜನರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ ಮತ್ತು ವ್ಯಸನದಿಂದ ಬಳಲುತ್ತಿರುವ ಹಲವಾರು ಜನರನ್ನು ಗುರುತಿಸಿ ಅವರನ್ನು ವೈದ್ಯಕೀಯ ಚಿಕಿತ್ಸೆಗೆ ಕಳುಹಿಸಲಾಗಿದೆ.

ಯಾವುದೇ ಗಂಡು-ಹೆಣ್ಣಿನ ಮದುವೆಗೂ ಮುನ್ನ ಅವರನ್ನು ಮಾದಕ ವಸ್ತು ಪರೀಕ್ಷೆಗೆ ಒಳಪಡಿಸಬೇಕು ಎಂದು ಧಾರ್ಮಿಕ ಸಂಸ್ಥೆಗಳು, ನಾಯಕರ ಮೂಲಕ ಸಾರ್ವಜನಿಕರಿಗೆ ಧೀರ ಅಭಿಯಾನ ಸಲಹೆ ನೀಡಿದೆ. ಈ ಮೂಲಕ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ಕೌಟುಂಬಿಕ ಕಲಹಗಳನ್ನು ತಪ್ಪಿಸುವ ಪ್ರಯತ್ನದಲ್ಲಿದೆ.

ಆರಂಭದಲ್ಲಿ ಮಾಟೂಲ್‌ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಪ್ರಾರಂಭಗೊಂಡ ಧೀರ ಅಭಿಯಾನದೊಂದಿಗೆ ಈಗ ಪಕ್ಕದ ಮಾಡಾಯಿ ಗ್ರಾಮಸ್ಥರು ಕೈ ಜೋಡಿಸಿದ್ದಾರೆ. ಹಾಗಾಗಿ, ಧೀರ ತಂಡದ ಹೆಸರನ್ನು ಈಗ “ಧೀರ : ಮಾಟ್ಟೂಲ್-ಮಾಡಾಯಿ ಕೂಟಾಯಿಮ” (Dheera: Mattool-Madayi Collective) ಎಂದು ಬದಲಾಯಿಸಲಾಗಿದೆ.

“ಮಾದಕ ವಸ್ತುಗಳ ಸಾಗಣೆ ಮತ್ತು ಸೇವನೆ ಬಗ್ಗೆ ಮಾಹಿತಿಯಿದ್ದರೂ ಅದರ ಬಗ್ಗೆ ಮಾತನಾಡಲು ಜನರು ಹೆದರುತ್ತಿದ್ದರು. ನಮ್ಮ ಅಭಿಯಾನ, ಜನರು ಮುಂದೆ ಬಂದು ಮಾತನಾಡಲು ಪ್ರೋತ್ಸಾಹಿಸಿದೆ. ಮಾದಕವಸ್ತು ವಲಯಗಳು, ಮಾರಾಟಗಾರರು ಮತ್ತು ಬಳಕೆದಾರರ ಬಗ್ಗೆ ಪ್ರಮುಖ ಮಾಹಿತಿಯನ್ನು ಒದಗಿಸುತ್ತಿದ್ದಾರೆ” ಫರೀಷಾ ಹೇಳುತ್ತಾರೆ.

ಧೀರ ಅಭಿಯಾನ ಕೇವಲ ಮಾದಕ ವಸ್ತು ಪೂರೈಕೆ ಮಾಡುವವರನ್ನು ಹಿಡಿದು ಕೊಡುವ ಕೆಲಸ ಮಾತ್ರ ಮಾಡುತ್ತಿಲ್ಲ. ಅಭಿಯಾನದ ಭಾಗವಾಗಿ ಶಾಲೆ, ಪಂಚಾಯತ್ ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕರಪತ್ರಗಳನ್ನು ವಿತರಿಸಿ ಜನರಿಗೆ ವಿಷಯದ ಗಂಭೀರತೆ ಅರ್ಥ ಮಾಡಿಸಲಾಗುತ್ತಿದೆ. ಇತ್ತೀಚೆಗೆ ವಲಸೆ ಕಾರ್ಮಿಕರು ಮಾದಕ ವಸ್ತು ಪೂರೈಕೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಬಂದ ಕಾರಣ, ಹಿಂದಿಯಲ್ಲಿ ಕರಪತ್ರ ಮುದ್ರಿಸಿ ವಲಸೆ ಕಾರ್ಮಿಕರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗಿದೆ.

ಮಾದಕವಸ್ತು ಸೇವನೆ ಮಾಡುವವರಿಗೆ ಜಾಗದ ವ್ಯವಸ್ಥೆ ಮಾಡಿಕೊಡುವ ಕೆಲ ಆಸ್ತಿ ಮಾಲೀಕರಿಗೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದಂತೆ ಧೀರ ತಂಡ ಎಚ್ಚರಿಕೆ ನೀಡಿದೆ. ಮಾದಕವಸ್ತು ವ್ಯಾಪಾರದ ಮೇಲೆ ಸಂಘಟಿತ ಕ್ರಮ ಕೈಗೊಳ್ಳಲು ಧೀರ ತಂಡ ಪಳಯಂಗಡಿ ಪೊಲೀಸರು ಮತ್ತು ಜಿಲ್ಲಾ ಅಬಕಾರಿ ತಂಡದೊಂದಿಗೆ ನಿಕಟವಾಗಿ ಸಹಕರಿಸುತ್ತಿದೆ.

ಮಾದಕವಸ್ತು ವಿರುದ್ದ ಬೀದಿಗಳಿದ ಬಳಿಕ ಫರೀಷಾ ಅವರಿಗೆ ಹಲವಾರು ಬೆದರಿಕೆ ಕರೆಗಳು ಬಂದಿವೆಯಂತೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕಿ ಅವರ ಮಾನಹಾನಿ ಮಾಡುವ ಪ್ರಯತ್ನಗಳು ಆಗಿವೆ. ಕೆಲವರು ಫರೀಷಾ ಅವರ ಮಕ್ಕಳು ಮತ್ತು ಕುಟುಂಬಸ್ಥರ ಮೇಲೆ ದಾಳಿ ಮಾಡುವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಫರೀಷಾ ಈಗಾಗಲೇ ಪಳಯಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹೊಸ ಗಾಜಾ ಕದನ ವಿರಾಮ ಪ್ರಸ್ತಾವನೆಗೆ ಒಪ್ಪಿದ ಹಮಾಸ್: ಪ್ರತಿ-ಪ್ರಸ್ತಾಪ ಸಲ್ಲಿಸಿದ ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...