Homeಮುಖಪುಟಮಧ್ಯಪ್ರದೇಶದಲ್ಲಿ ಕೃಷಿ ಕಾಯ್ದೆಗಳ ಜಾರಿ: ವರ್ತಕರಿಂದ ಸುಮಾರು 5 ಕೋಟಿ ರೂ ವಂಚನೆಯಾಗಿದೆ ಎಂದು ರೈತರ...

ಮಧ್ಯಪ್ರದೇಶದಲ್ಲಿ ಕೃಷಿ ಕಾಯ್ದೆಗಳ ಜಾರಿ: ವರ್ತಕರಿಂದ ಸುಮಾರು 5 ಕೋಟಿ ರೂ ವಂಚನೆಯಾಗಿದೆ ಎಂದು ರೈತರ ಆರೋಪ

ಸೆಪ್ಟಂಬರ್ ತಿಂಗಳಿನಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳ ಜಾರಿಯಾದಾಗಿನಿಂದ ರಾಜ್ಯ ಸರ್ಕಾರವು ಮಂಡಿಗಳ ಹೊರಗೆ ಹೋಲ್‌ಸೇಲ್‌ನಲ್ಲಿ ಬೆಳೆಗಳನ್ನು ಮಾರಾಟ ಮಾಡಲು ಅವಕಾಶ ನೀಡಿದೆ.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ಸೇರಿದಂತೆ ದೇಶಾದ್ಯಂತ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಬೃಹತ್ ರೈತ ಹೋರಾಟ ನಡೆಯುತ್ತಿದೆ. ಈ ಬೆನ್ನಲ್ಲೆ ಆ ಕಾಯ್ದೆಗಳನ್ನು ಈಗಾಗಲೇ ಜಾರಿಗೊಳಿಸುತ್ತಿರುವ ಮಧ್ಯಪ್ರದೇಶ ಬಿಜೆಪಿ ಸರ್ಕಾರಕ್ಕೆ ಮುಖಭಂಗವಾಗುವ ಬೆಳವಣಿಗೆಯೊಂದು ನಡೆದಿದೆ. ಅಲ್ಲಿನ 250ಕ್ಕೂ ಹೆಚ್ಚು ರೈತರಿಂದ ವರ್ತಕರು 2600 ಕ್ವಿಂಟಾಲ್ ಬೆಳಗಳನ್ನು ಕೊಂಡು ಹಣ ನೀಡದೇ ಸುಮಾರು 5 ಕೋಟಿ ರೂ ವಂಚಿಸಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಸೆಪ್ಟಂಬರ್ ತಿಂಗಳಿನಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳ ಜಾರಿಯಾದಾಗಿನಿಂದ ರಾಜ್ಯ ಸರ್ಕಾರವು ಮಂಡಿಗಳ ಹೊರಗೆ ಹೋಲ್‌ಸೇಲ್‌ನಲ್ಲಿ ಬೆಳೆಗಳನ್ನು ಮಾರಾಟ ಮಾಡಲು ಅವಕಾಶ ನೀಡಿದೆ. ಆದರೆ ಈ ರೀತಿಯಾಗಿ ಮಂಡಿಯಿಂದ ಹೊರಗೆ ಮಾರಾಟ ಮಾಡಿದ್ದ ರೈತರಿಗೆ ವರ್ತಕರು ಹಣ ನೀಡದೇ ವಂಚಿಸಿದ್ದಾರೆ ಎಂದು ಹಲವು ರೈತರು ದಿವಾಸ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಕುರಿತು ರೈತರು ತಮಗೆ ವಂಚನೆಯಾಗಿದೆ ಎಂದು ದೂರು ಸಲ್ಲಿಸಿದ್ದಾರೆ. ಅದರ ಪ್ರಕಾರ ರಾಜ್ಯದ ಮುಖ್ಯಮಂತ್ರಿ ಮತ್ತು ಕೃಷಿ ಸಚಿವರ ತವರು ಜಿಲ್ಲೆಗಳ ರೈತರಿಂದ ವರ್ತಕರು ಬೆಳೆಗಳನ್ನು ಖರೀದಿಸಿ ಚೆಕ್ ನೀಡಿದ್ದಾರೆ. ಆದರೆ ಆ ಚೆಕ್‌ಗಳೆಲ್ಲವೂ ಬೌನ್ಸ್ ಆಗಿವೆ. ದಿವಾಸ್‌ನ ಮಂಡಿಗಳಿಂದ ಅವರಿಗೆ ಅವಧಿ ಮೀರಿದ ಲೈಸೆನ್ಸ್‌ ನೀಡಿದ್ದಾರೆ ಎಂದು ಆರೋಪಿಸಿ ರೈತರು ಮಂಡಿಗೆ ಹೋಗಿ ವಿಚಾರಿಸಿದರೆ ಅಲ್ಲಿಂದ ಅವರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ.

ನಾವು ಮಾತುಕತೆಯಾದ ದರಕ್ಕೆ ನಮ್ಮ ಬೆಳೆಗಳನ್ನು ಮಾರಿದ್ದೇವೆ. ಶೆಹೋರ್, ಹರ್ಡಾ, ಹೋಶಾಂಗ್‌ಬಾದ್‌ನ ಹಲವು ರೈತರು ಸಹ ಮಾರಿದ್ದಾರೆ. ಆದರೆ ನಮ್ಮಿಂದ ಬೆಳೆ ಪಡೆದವರು ಹಣ ನೀಡದೆ ಪರಾರಿಯಾಗಿದ್ದಾರೆ. ಹಾಗಾಗಿ ಮುಖ್ಯಮಂತ್ರಿಗಳು ಕೂಡಲೇ ಆರೋಪಿಗಳನ್ನು ಬಂಧಿಸಿ, ಅವರ ಆಸ್ತಿ ಮುಟ್ಟುಗೋಲು ಹಾಕಿಕೊಂಡು ನಮ್ಮ ಹಣ ನೀಡಬೇಕೆಂದು ರೈತರೊಬ್ಬರು ಒತ್ತಾಯಿಸಿದ್ದಾರೆ.

ಹಾರ್ಡಾ, ಗ್ವಾಲಿಯರ್, ಬಮೋರಿ ಸೇರಿದಂತೆ ಹಲವೆಡೆ ನೂರಾರು ರೈತರು ಇದೇ ರೀತಿಯ ದೂರುಗಳನ್ನು ಸಲ್ಲಿಸಿದ್ದಾರೆ.

“ಈಗ ಮೋಸ ಮಾಡಿರುವ ಹಲವು ಕಂಪನಿಗಳು ಈ ಹಿಂದೆ ಮಂಡಿಗಳಲ್ಲಿ ನಮ್ಮಿಂದ ಖರೀದಿಸುತ್ತಿದ್ದರು. ಆದರೆ ಅಲ್ಲಿ ನಮಗೆ ಪಾವತಿಯ ಗ್ಯಾರಂಟಿಯಿತ್ತು. ಆದರೆ ಹೊಸ ಮಾದರಿ ಮಂಡಿ ಕಾಯ್ದೆಗಳಿಂದ ಆ ಗ್ಯಾರಂಟಿ ಇಲ್ಲವಾಗಿದೆ” ಎಂದು ರೈತರು ದೂರಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕೃಷಿ ಸಚಿವ ಕಮಲ್ ಪಟೇಲ್ “ಈ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲಾಗುತ್ತದೆ ಮತ್ತು ರೈತರಿಗೆ ಅವರ ಹಣವನ್ನು ಮರಳಿ ಕೊಡಿಸಲಾಗುತ್ತದೆ. ಇನ್ನು ಮುಂದೆ ರೈತರು ಕೇವಲ ನಗದು ವ್ಯವಹಾರದಲ್ಲಿ ಮಾತ್ರ ತಮ್ಮ ಬೆಳೆಗಳನ್ನು ಮಾರಬೇಕು. ಅದು ಕಷ್ಟವಾದರೂ ಸಾಧ್ಯ” ಎಂದಿದ್ದಾರೆ.

ಈ ಪ್ರಕರಣದಲ್ಲಿ ನ್ಯಾಯಾಲಯ ನಮ್ಮ ಪರವಿರುತ್ತದೆ ಎಂದು ಹೇಳಲು ಬರುವುದಿಲ್ಲ. ಸರ್ಕಾರ ರಚಿಸುವ ಸಮಿತಿಯು ನೀಡುವ ಪರಿಹಾರವನ್ನು ಸ್ವೀಕರಿಸುವುದನ್ನು ಬಿಟ್ಟು ನಮಗೆ ಬೇರೆ ದಾರಿಗಳಿಲ್ಲ ಎಂದು ರೈತರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಈ ಕೃಷಿ ಕಾಯ್ದೆಗಳಿಂದ ನಿಧಾನವಾಗಿ ಮಂಡಿಗಳು ನಶಿಸುವುದರಿಂದ ರೈತರು ವರ್ತಕರು ಕೇಳಿದ ಬೆಲೆಗೆ, ಅವರು ಕೊಡುವ ಚೆಕ್ ಅಥವಾ ಮತ್ತಿತರ ವಿಧಾನಗಳ ಮೂಲಕವೇ ಮಾರಬೇಕಾದ ಪರಿಸ್ಥಿತಿ ರೈತರಿಗೆ ಬರುತ್ತದೆ ಎಂಬುದನ್ನು ಈ ಮೇಲಿನ ಪ್ರಕರಣಗಳು ಸೂಚಿಸುತ್ತವೆ. ಏಕೆಂದರೆ ರೈತರ ಬಳಿ ಬೆಳೆಗಳನ್ನು ಹಲವು ದಿನ ಇಟ್ಟುಕೊಳ್ಳುವ ವ್ಯವಸ್ಥೆ ಇಲ್ಲ. ಇದು ದೊಡ್ಡ ದೊಡ್ಡ ಕಾರ್ಪೊರೇಟ್‌ಗಳಿಗಷ್ಟೇ ಲಾಭ ತಂದುಕೊಡುತ್ತದೆ ಎಂಬುದು ರೈತರ ಆರೋಪ.


ಇದನ್ನೂ ಓದಿ: ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...