Homeಚಳವಳಿಸೆ.28ಕ್ಕೆ ಕರ್ನಾಟಕ ಬಂದ್: ಪಂಜಾಬ್‌ನಲ್ಲಿ ಸೆ. 29ರವರೆಗೆ ’ರೈಲ್ ರೋಕೋ’

ಸೆ.28ಕ್ಕೆ ಕರ್ನಾಟಕ ಬಂದ್: ಪಂಜಾಬ್‌ನಲ್ಲಿ ಸೆ. 29ರವರೆಗೆ ’ರೈಲ್ ರೋಕೋ’

ರೈಲ್​ ರೋಕೋ ಚಳುವಳಿಯನ್ನು ಸೆ.29ರವರೆಗೂ ಮುಂದುವರೆಸುತ್ತೇವೆ ಎಂದು ರೈತ ಸಂಘದ ಮುಖಂಡರು ತಿಳಿಸಿದ್ದಾರೆ. ಈಗಾಗಲೇ ಉತ್ತರ ರೈಲ್ವೇ ವಿಭಾಗ ಈ ಭಾಗದಲ್ಲಿ ಸಂಚರಿಸುವ ಕೆಲವು ರೈಲುಗಳನ್ನ ರದ್ದುಗೊಳಿಸಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಅಂಗೀಕರಿಸಿರುವ ಮೂರು ಕೃಷಿ ಮಸೂದೆಗಳ ವಿರುದ್ದ ದೇಶಾದ್ಯಂತ ಭಾರತ್ ಬಂದ್‌ಗೆ ಕರೆ ನೀಡಲಾಗಿತ್ತು. ರಾಜ್ಯದಲ್ಲೂ ಕೃಷಿ ಮಸೂದೆಗಳು ಮತ್ತು ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ರೈತರು ಬೀದಿಗಿಳಿದಿದ್ದಾರೆ. ಪಂಜಾಬ್‌ನಲ್ಲಿ ‘ರೈಲ್ ರೋಕೋ’ ಚಳುವಳಿ ನಡೆಸುತ್ತಿದ್ದಾರೆ.

ಇಂದು ಸಂಜೆ ಮುಖ್ಯಮಂತ್ರಿಗಳು ಮತ್ತು ರೈತ ಮುಖಂಡರ ಸಭೆ ನಡೆದಿದ್ದು, ರೈತರ ಮನವೊಲಿಸುವಲ್ಲಿ ಸಿಎಂ ವಿಫಲರಾಗಿದ್ದಾರೆ. ಹಾಗಾಗಿ ರೈತನಾಯಕರು ಎಪಿಎಂಸಿ, ಭೂಸುಧಾರಣಾ ಕಾಯ್ದೆ ತಿದ್ದುಪಡಿ, ವಿದ್ಯುತ್ ಕಾಯ್ದೆಗಳನ್ನು ಹಿಂಪಡೆಯುವಂತೆ ಪಟ್ಟು ಹಿಡಿದಿದ್ದು, ಸೆ.28ರಂದು ಕರ್ನಾಟಕ ಬಂದ್ ನಡೆಸಲು ನಿರ್ಧಾರ ಕೈಗೊಂಡಿದ್ದಾರೆ. ಯಡಿಯೂರಪ್ಪ ಅವರು ಬಿಲ್​ಗಳನ್ನು ವಾಪಸ್ ಪಡೆಯುವ ಬಗ್ಗೆ ಯಾವುದೇ ಭರವಸೆ ನೀಡಲಿಲ್ಲ. ಅವರು ಪ್ರಧಾನಿ ಮೋದಿ ಮಾತು ಮೀರಲು ಸಿದ್ಧರಿಲ್ಲ. ಹಾಗಾಗಿ ನಾವು ಸೋಮವಾರ ಬಂದ್​ ನಡೆಸುತ್ತೇವೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಇದನ್ನೂ ಓದಿ: ಸೆ.27 ರಂದು ಉಡುಪಿಯಲ್ಲಿ ‘ಪೂನಾ ಒಪ್ಪಂದ ದಿನ’ದ ನೆನಪಿನ ಕಾರ್ಯಕ್ರಮ

ಇತ್ತ ಮಸೂದೆಗಳಿಗೆ ತೀವ್ರ ವಿರೋಧ ಮತ್ತು ತೀವ್ರ ಸ್ವರೂಪದ ಪ್ರತಿಭಟನೆಗಳು ನಡೆಸುತ್ತಿರುವ ಪಂಜಾಬ್‌ನಲ್ಲಿ ರೈಲು ಹಳಿಗಳ ಮೇಲೆ ಕುಳಿತು ರೈಲ್​ ರೋಕೋ ಚಳವಳಿ ನಡೆಸುತ್ತಿದ್ದಾರೆ. ಈ ಚಳುವಳಿಯನ್ನು ಸೆ.29ರವರೆಗೂ ಮುಂದುವರೆಸುತ್ತೇವೆ ಎಂದು ರೈತ ಸಂಘದ ಮುಖಂಡರು ತಿಳಿಸಿದ್ದಾರೆ. ಈಗಾಗಲೇ ಉತ್ತರ ರೈಲ್ವೇ ವಿಭಾಗ ಈ ಭಾಗದಲ್ಲಿ ಸಂಚರಿಸುವ ಕೆಲವು ರೈಲುಗಳನ್ನ ರದ್ದುಗೊಳಿಸಿದೆ. ಪಂಜಾಂಬ್​ ಸಿಎಂ ಅಮರೀಂದರ್​ ಸಿಂಗ್​ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಪ್ರತಿಭಟನಾಕಾರಲ್ಲಿ ಮನವಿ ಮಾಡಿದ್ದಾರೆ.

ಕೃಷಿ ಮಸೂದೆಗಳನ್ನು ರೈತರು ವಿರೋಧಿಸುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಮಾತ್ರ ವಿರೋಧ ಪಕ್ಷಗಳು ಮಸೂದೆಗಳ ವಿರುದ್ಧ ಸುಳ್ಳು ವದಂತಿ ಹರಡುತ್ತಿವೆ ಎನ್ನುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ರೈತರಿಗೆ ಈ ಕಾಯ್ದೆಗಳ ಮಹತ್ವ ತಿಳಿಸಿ ಎಂದು ಸಲಹೆ ನೀಡುತ್ತಿದ್ದಾರೆ.

ಮೋದಿ ಸರ್ಕಾರದ ತಪ್ಪಾದ ಜಿಎಸ್‌ಟಿಯು ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು (ಎಂಎಸ್ಎಂಇ) ನಾಶಪಡಿಸಿತು. ಈಗ ಹೊಸ ಕೃಷಿ ಕಾನೂನುಗಳು ನಮ್ಮ ರೈತರನ್ನು ಗುಲಾಮರನ್ನಾಗಿ ಮಾಡುತ್ತವೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.


ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ”ಅನ್ನದಾತ’ರ ಪ್ರತಿಭಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...