Homeಮುಖಪುಟಮುಖ್ಯಮಂತ್ರಿಯನ್ನು ಕಂಡಕಂಡಲ್ಲಿ ಘೇರಾವ್ ಮಾಡಿ: ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ಕರೆ

ಮುಖ್ಯಮಂತ್ರಿಯನ್ನು ಕಂಡಕಂಡಲ್ಲಿ ಘೇರಾವ್ ಮಾಡಿ: ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ಕರೆ

ರೈತರ ಹೆಸರಿನಲ್ಲಿ ಪ್ರಮಾಣ ಮಾಡಿ ಅಧಿಕಾರ ಹಿಡಿದ ಯಡಿಯೂರಪ್ಪನವರು ಇಂದು ರೈತರ ಎದೆಗೆ ನೇರಾನೇರಾ ಚೂರಿ ಹಾಕಿ ತಾನು ರೈತರ ಪರ ಅಲ್ಲ, ಕಾರ್ಪೊರೇಟ್ ಪರ ಎಂಬುದನ್ನು ರುಜುವಾತು ಪಡಿಸಿಕೊಂಡಿದ್ದಾರೆ ಎಂದು ರೈತ ಮುಖಂಡರು ಕಿಡಿಕಾರಿದ್ದಾರೆ.

- Advertisement -
- Advertisement -

ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟಕ್ಕೆ ಕಿವಿಗೊಡದೆ, ಕನಿಷ್ಟ ಪ್ರಜಾತಾಂತ್ರಿಕ ವಿಧಾನವನ್ನು ಅನುಸರಿಸದೆ, ಸರ್ವಾಧಿಕಾರಿ ವಿಧಾನದಲ್ಲಿ ಈ ಸರ್ಕಾರ ಬಡಜನರ ಮರಣ ಶಾಸನಗಳನ್ನು ಅನುಮೋದಿಸಿದೆ. ಆ ಮೂಲಕ ಕೊನೆಗೂ ಯಡಿಯೂರಪ್ಪ ಸರ್ಕಾರ ಜನತೆಯ ವಿಶ್ವಾಸಕ್ಕೆ ದ್ರೋಹ ಬಗೆದಿದೆ. ಹಾಗಾಗಿ ಈ ಜನದ್ರೋಹಿ ಮುಖ್ಯಮಂತ್ರಿಯನ್ನು ಕಂಡಕಂಡಲ್ಲಿ ಘೇರಾವ್ ಮಾಡಲು ಎಂದು ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ನಿರ್ಧರಿಸಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಐಕ್ಯಹೋರಾಟ ಸಮಿತಿಯ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ, ರೈತರ ಹೆಸರಿನಲ್ಲಿ ಪ್ರಮಾಣ ಮಾಡಿ ಅಧಿಕಾರ ಹಿಡಿದ ಯಡಿಯೂರಪ್ಪನವರು ಇಂದು ರೈತರ ಎದೆಗೆ ನೇರಾನೇರಾ ಚೂರಿ ಹಾಕಿ ತಾನು ರೈತರ ಪರ ಅಲ್ಲ, ಕಾರ್ಪೊರೇಟ್ ಪರ ಎಂಬುದನ್ನು ರುಜುವಾತು ಪಡಿಸಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

“ಉಳುವವರಿಗೇ ಭೂಮಿ” ಎಂಬ ಸಮಾಜವಾದಿ ಆಶಯದ ಕೊಲೆಗೈದು ” ಉಳ್ಳವರದೇ ಎಲ್ಲಾ ಭೂಮಿ” ಎಂಬ ಬಲಾಢ್ಯ ಹಿತಾಸಕ್ತಿಯನ್ನು ಎತ್ತಿಹಿಡಿದಿದ್ದಾರೆ. ಕಾರ್ಪೋರೇಟ್ ಮತ್ತು ರಿಯಲ್ ಎಸ್ಟೇಟ್ ಲಾಭಿಗೆ ನಮ್ಮ ಬಡಜನರ ಬದುಕನ್ನು ಬಲಿ ಕೊಟ್ಟಿದ್ದಾರೆ ಎಂದು ರೈತ ಮುಖಂಡರು ದೂರಿದ್ದಾರೆ.

ಪತ್ರಿಕಾಗೋಷ್ಟಿಯ ಲೈವ್ ನೋಡಿ

ಐಕ್ಯ ಹೋರಾಟ ಸಮಿತಿ ವತಿಯಿಂದ ಪತ್ರಿಕಾಗೋಷ್ಠಿ ನಡಸಿಲಾಯಿತು….

Posted by Naanu Gauri on Saturday, September 26, 2020

ಎಪಿಎಂಸಿ ಮಾರುಕಟ್ಟೆಯನ್ನು ನಿರ್ನಾಮ ಮಾಡಿ ಕಾರ್ಪೊರೇಟ್ ಮಾರುಕಟ್ಟೆಗೆ ರತ್ನಗಂಬಳಿ ಹಾಸಲಾಗಿದೆ. ರೈತರನ್ನು ಕಾರ್ಪೊರೇಟ್ ಕಣ್ಕಟ್ಟಿನ ಜಾಲಕ್ಕೆ ಸಿಲುಕಿಸಲಾಗಿದೆ. ಸ್ಥಳೀಯ ವರ್ತಕರನ್ನು ದಿವಾಳಿ ಮಾಡಲಾಗುತ್ತದೆ ಮತ್ತು ಸಹಸ್ರಾರು ಹಮಾಲಿ ಮತ್ತು ಇತರೆ ಉದ್ಯೋಗಿಗಳನ್ನು ಬೀದಿಪಾಲು ಮಾಡಲಾಗುತ್ತಿದೆ. ಇದಲ್ಲದೆ, ಕೈಗಾರಿಕಾ ಸ್ನೇಹಿ ವಾತಾವರಣ ಸೃಷ್ಟಿಸುವ ಹೆಸರಿನಲ್ಲಿ ಕಾರ್ಮಿಕ ಅನೇಕ ನ್ಯಾಯಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ ಎಂದು ಸಮಿತಿಯ ಮುಖಂಡರು ಆರೋಪಿಸಿದ್ದಾರೆ.

ಲಕ್ಷಾಂತರ ಜನರ ಹೋರಾಟದ ನಡುವೆಯೂ ಈ ಮಸೂದೆಗಳಿಗೆ ವಿಧಾನಸಭಾ ಒಪ್ಪಿಗೆ ಪಡೆದಿದ್ದರೂ ಅದನ್ನು ಜಾರಿಯಾಗಲು ಬಿಡುವುದಿಲ್ಲ. ಇದುವರೆಗೆ ನಡೆಸಿದ ಅನಿರ್ದಿಷ್ಟ ಧರಣಿ ಸತ್ಯಾಗ್ರಹವನ್ನು ದುಡಿಯುವ ಜನರ ಜನ ಸಂಗ್ರಾಮವನ್ನಾಗಿ ಪರಿವರ್ತಿಸುತ್ತದೆ. ನಿಮ್ಮ ಜನದ್ರೋಹದ ಹಿಂದಿರುವ ಹುನ್ನಾರವನ್ನು ಹಳ್ಳಿಹಳ್ಳಿಗೆ ತಲುಪಿಸುತ್ತೇವೆ. ಈ ದುಷ್ಟ ಮಸೂದೆಗಳ ಹಿಂದಿರುವ ಒಂದು ಲಕ್ಷ ಕೋಟಿಯ ಹಗರಣವನ್ನು ಜನರ ಎದುರು ಬಯಲುಗೊಳಿಸುತ್ತೇವೆ ಎಂದು ಮುಖಂಡರು ಪಣ ತೊಟ್ಟಿದ್ದಾರೆ.

 

ಸೆಪ್ಟಂಬರ್ 28ರ ಬಂದ್‌ ಅನ್ನು ಯಶಸ್ವಿಗೊಳಿಸುತ್ತೇವೆ. ಜೊತೆಗೆ ಮುಖ್ಯಮಂತ್ರಿಗಳನ್ನು ಕಂಡ ಕಂಡಲ್ಲಿ ಘೇರಾವ್ ಮಾಡಿ ಮಸೂದೆಗಳ ವಿರುದ್ಧದ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷರಾದ ಗುರುಪ್ರಸಾದ್ ಕೆರಗೋಡು, ಕರ್ನಾಟಕ ರಾಜ್ಯರೈತ ಸಂಘದ ರಾಜ್ಯಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷರಾದ ಕುರುಬೂರು ಶಾಂತಕುಮಾರ್, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಸಿರಿಮನೆ ನಾಗರಾಜ್, ಸಿಐಟಿಯು ರಾಜ್ಯಾ‍ಧ್ಯಕ್ಷೆ ವರಲಕ್ಷ್ಮಿ, ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಡಾ. ಪ್ರಕಾಶ್ ಕಮ್ಮರಡಿ ಮುಂತಾದವರು ಭಾಗವಹಿಸಿದ್ದರು.


ಇದನ್ನೂ ಓದಿ: Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...