Homeಮುಖಪುಟಕೃಷಿ ಮಸೂದೆಗಳು: ಪಂಜಾಬ್‌ ’ರಾಷ್ಟ್ರ ವಿರೋಧಿ’ ಎಂದವರ ವಿರುದ್ಧ ಅಮರಿಂದರ್ ಸಿಂಗ್‌ ವಾಗ್ದಾಳಿ

ಕೃಷಿ ಮಸೂದೆಗಳು: ಪಂಜಾಬ್‌ ’ರಾಷ್ಟ್ರ ವಿರೋಧಿ’ ಎಂದವರ ವಿರುದ್ಧ ಅಮರಿಂದರ್ ಸಿಂಗ್‌ ವಾಗ್ದಾಳಿ

ಕೇಂದ್ರದ ಕೃಷಿ ಕಾಯ್ದೆಗಳಿಗೆ ಸೆಡ್ಡು ಹೊಡೆದು ಪಂಜಾಬ್‌ನಲ್ಲಿ ಹೊಸ ಕಾನೂನುಗಳನ್ನು ಅಮರಿಂದರ್ ಸಿಂಗ್ ಅಂಗೀಕರಿಸಿದ್ದರು.

- Advertisement -
- Advertisement -

ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ತಮ್ಮ ರಾಜ್ಯವನ್ನು “ರಾಷ್ಟ್ರ ವಿರೋಧಿ” ಎಂದು ಕರೆದವರ ಮೇಲೆ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ದೇಶದ ಶಾಂತಿಯನ್ನು ಕಾಪಾಡಲು, ದೇಶ ರಕ್ಷಣೆಗಾಗಿ ಚೀನಾ ಮತ್ತು ಪಾಕಿಸ್ತಾನದ ಗಡಿಗಳಲ್ಲಿ ಸಾವಿರಾರು ಪಂಜಾಬಿ ಸೈನಿಕರು ಸೇವೆ ಸಲ್ಲಿಸುತ್ತಿದ್ದಾರೆ ಎಂದಿದ್ದಾರೆ.

ಕೇಂದ್ರ ಸರ್ಕಾರವು ಇತ್ತೀಚೆಗೆ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ, ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದಲ್ಲಿ ಪಂಜಾಬ್‌ನ ಶಾಸಕರು ಪ್ರಾರಂಭಿಸಿರುವ ಪ್ರತಿಭಟನೆಯಲ್ಲಿ ಅವರು ಮಾತನಾಡಿದ್ದಾರೆ.

“ದಯವಿಟ್ಟು, ದೇಶದ ಶಾಂತಿಯನ್ನು ಭಂಗಗೊಳಿಸಲು ಪಂಜಾಬ್ ಹೊರಟಿದೆ ಎಂದು ಭಾವಿಸಬೇಡಿ. ಅದು ನಿಜವಲ್ಲ. ದೇಶದ ಶಾಂತಿಯನ್ನು ಕಾಪಾಡಲು ನಾವಿದ್ದೇವೆ. ನಾವು ಈ ಹಿಂದೆ ಹಲವು ಬಾರಿ ದೇಶಕ್ಕಾಗಿ ರಕ್ತ ಹರಿಸಿದ್ದೇವೆ ಮತ್ತು ಭವಿಷ್ಯದಲ್ಲಿ ಕೂಡ ನಾವು ದೇಶಕ್ಕಾಗಿ ರಕ್ತ ಹರಿಸಲು, ಜೀವ ನೀಡಲು ಎಂದಿಗೂ ನಾಚಿಕೆಪಡಿಸುವುದಿಲ್ಲ ’ಎಂದು ಅಮರಿಂದರ್ ಸಿಂಗ್ ಹೇಳಿದರು.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಕುರಿತು ಚರ್ಚೆಗೆ ನಿರಾಕರಣೆ: ರಾಷ್ಟ್ರಪತಿಗಳ ವಿರುದ್ಧ ಪ್ರತಿಭಟನೆಗೆ ಮುಂದಾದ ಪಂಜಾಬ್ ಸಿಎಂ ಅಮರಿಂದರ್ ಸಿಂಗ್

ಕೇಂದ್ರದ ಕೃಷಿ ಕಾಯ್ದೆಗಳಿಗೆ ಸೆಡ್ಡು ಹೊಡೆದು ಪಂಜಾಬ್‌ನಲ್ಲಿ ಹೊಸ ಕಾನೂನುಗಳನ್ನು ಅಮರಿಂದರ್ ಸಿಂಗ್ ಅಂಗೀಕರಿಸಿದ್ದರು. ವಿವಾದಿತ ಮೂರು ಕೃಷಿ ಕಾಯ್ದೆಗಳ ಕುರಿತು ಚರ್ಚೆಗೆ ಅವಕಾಶ ನೀಡದೆ, ರಾಜ್ಯ ವಿಧಾನಸಭೆ ಅಂಗೀಕರಿಸಿದ ಮೂರು ಕೃಷಿ ಮಸೂದೆಗಳ ಕುರಿತು ಸಿಎಂ ನೇತೃತ್ವದ ರಾಜ್ಯದ ನಿಯೋಗವನ್ನು ಭೇಟಿ ಮಾಡಲು ರಾಷ್ಟ್ರಪತಿ ರಾಮ‌ನಾಥ್ ಕೋವಿಂದ್ ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ  ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದಲ್ಲಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

“ಪಂಜಾಬ್ ರಾಷ್ಟ್ರ ವಿರೋಧಿ ಚಟುವಟಿಕೆ ಮಾಡುತ್ತದೆ ಎಂದು ಎಂದಿಗೂ ಯೋಚಿಸಬೇಡಿ. ನಮ್ಮ ನೆರೆಯ ರಾಷ್ಟ್ರ ಪಾಕಿಸ್ತಾನ, ಮೂರು ಡ್ರೋನ್‌ಗಳ ಮೂಲಕ ಮದ್ದುಗುಂಡುಗಳನ್ನು ಹಾಕಿ, ನಮ್ಮನ್ನು ಪ್ರಚೋದಿಸಲು ನಿರಂತರವಾಗಿ ಪ್ರಯತ್ನಿಸುತ್ತಿದೆ. ಈ ಶಸ್ತ್ರಾಸ್ತ್ರಗಳು ಅಪರಾಧಿಗಳು ಮತ್ತು ರಾಷ್ಟ್ರ ವಿರೋಧಿಗಳ ಕೈಗೆ ಹೋಗುವ ಸಾಧ್ಯತೆಯಿದೆ. ನಾವು ಈ ವಿಷಯಗಳನ್ನು ಮತ್ತು ನಮ್ಮ ಆತಂಕವನ್ನು ಕೇಂದ್ರ ಸರ್ಕಾರದೊಂದಿಗೆ ಹಂಚಿಕೊಂಡಿದ್ದೇವೆ. ನಮ್ಮದು ಗಡಿ ರಾಜ್ಯವಾದ್ದರಿಂದ ಪಂಜಾಬ್‌ನಲ್ಲಿ ನಾವು ಯಾವುದೇ ತೊಂದರೆ ಬಯಸುವುದಿಲ್ಲ. ಪಂಜಾಬ್‌ನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದು ದೇಶದ ಭದ್ರತೆಯ ಮೇಲೆ ಪರಿಣಾಮ ಬೀರುತ್ತದೆ ”ಎಂದು ಅಮರಿಂದರ್ ಸಿಂಗ್ ಹೇಳಿದರು.

“ಮಸೂದೆಗಳು ರಾಜಭವನ ತಲುಪಿವೆ. ಈ ಮಸೂದೆಗಳನ್ನು ರಾಜ್ಯಪಾಲರು ಏಕೆ ತಡೆಹಿಡಿಯುತ್ತಿದ್ದಾರೆಂದು ನನಗೆ ತಿಳಿದಿಲ್ಲ. ಅವರಿಗೆ ಇದರಲ್ಲಿ ಯಾವುದೇ ಪಾತ್ರವಿಲ್ಲ. ರಾಜ್ಯಪಾಲರು ಕೇವಲ ಪೋಸ್ಟ್ ಬಾಕ್ಸ್ ಆಗಿದ್ದು, ಮಸೂದೆಯನ್ನು ರಾಷ್ಟ್ರಪತಿಗೆ ರವಾನಿಸುವುದು ಮಾತ್ರ ಅವರ ಕರ್ತವ್ಯವಾಗಿದೆ. ಅವರು ಯಾವುದೇ ಪ್ರತಿಕ್ರಿಯೆಗಳನ್ನು ನೀಡಬೇಕಾಗಿಲ್ಲ”ಎಂದು ಸಿಎಂ ಹೇಳಿದರು.

ಇತ್ತೀಚಿನ ಕೃಷಿ ಮಸೂದೆಗಳ ವಿರುದ್ಧ ಕಾಂಗ್ರೆಸ್ ಸೇರಿದಂತೆ ಇತರ ಹಲವು ವಿರೋಧ ಪಕ್ಷಗಳು, ಹಲವಾರು ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಇವು ರೈತರ ಹಿತಾಸಕ್ತಿಗೆ ಧಕ್ಕೆ ತರುತ್ತವೆ ಮತ್ತು ಕಾರ್ಪೊರೇಟ್ ಸಂಸ್ಥೆಗಳಿಗೆ ಪ್ರಯೋಜನ ನೀಡುತ್ತವೆ ಎಂದು ಆರೋಪಿಸಿದ್ದಾರೆ. ಈ ಆರೋಪವನ್ನು ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರ ನಿರಾಕರಿಸಿದೆ.


ಇದನ್ನೂ ಓದಿ: MSP ಉಲ್ಲಂಘಿಸಿದರೆ ಜೈಲು; ಹೊಸ ಪರ್ಯಾಯ ಮಸೂದೆ ಅಂಗೀಕರಿಸಿದ ಪಂಜಾಬ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...