ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ಪರ-ವಿರೋಧದ ಕುರಿತು ಜನವರಿ 16 ರಂದು ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ‘ಐಕ್ಯ ಹೋರಾಟ ಸಮಿತಿ’ಯ ವತಿಯಿಂದ ಬಹಿರಂಗ ಸಂವಾದ ಹಮ್ಮಿಕೊಳ್ಳಲಾಗಿದ್ದು, ಕೃಷಿ ಕಾಯ್ದೆಗಳ ಪರವಾಗಿ ಮಾತನಾಡುವವರೂ ಈ ಬಹಿರಂಗ ಸಂವಾದದಲ್ಲಿ ಮುಕ್ತವಾಗಿ ಭಾಗವಹಿಸಬಹುದು.
ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್, AIKSCC ಸದಸ್ಯರಾದ ಜಗಮೋಹನ್ ಸಿಂಗ್, AIBKUನ ಸಂಯೋಜಕ ಯದುವೀರ್ ಸಿಂಗ್ ಸೇರಿದಂತೆ ಹಲವು ರೈತ ಮುಖಂಡರು ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ: ಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ ಲಕ್ಷಾಂತರ ರೈತರು ಕಳೆದ 2 ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಕಾಯ್ದೆಗಳ ಕುರಿತು ಪರ-ವಿರೋಧದ ಚರ್ಚೆಗಳ ನಡುವೆಯೂ ಹೋರಾಟ ಮುಂದುವರೆದಿದೆ.
ಕೇಂದ್ರ ಬಿಜೆಪಿ ಸರ್ಕಾರ ಮತ್ತು ಅದರ ನಾಯಕರು ಕೃಷಿ ಕಾನೂನುಗಳ ಪರ ಪ್ರಚಾರ ಮಾಡುತ್ತಿದ್ದರೆ, ಹೋರಾಟ ನಿರತ ರೈತರು ಸೇರಿದಂತೆ ವಿರೋಧ ಪಕ್ಷಗಳು ಇದರ ವಿರುದ್ಧ ಪ್ರಚಾರ ಮಾಡುತ್ತಿದ್ದಾರೆ.
ಈ ಕಾಯ್ದೆಗಳು ರೈತರ ಬದುಕನ್ನು ಬೀದಿಗಿಡಲಿದ್ದು, ಕನಿಷ್ಟ ಬೆಂಬಲ ಬೆಲೆಯನ್ನು ಕಸಿದುಕೊಳ್ಳಲಿದೆ. ಜೊತೆಗೆ ಇದು ಕಾರ್ಪೊರೇಟ್ ಪರ ಕಾನೂನುಗಳಾಗಿವೆ ಎಂದು ಹಲವರು ಆರೋಪಿಸಿದ್ದಾರೆ.
ಇದನ್ನೂ ಓದಿ: ಉತ್ತರ ಪ್ರದೇಶ: ಈ ಗ್ರಾಮಕ್ಕೆ ರೈತ ಹೋರಾಟ ಬೆಂಬಲಿಸದ ರಾಜಕಾರಣಿಗಳಿಗೆ ಪ್ರವೇಶವಿಲ್ಲ!
ಇತ್ತ ಬಿಜೆಪಿಗರು, ಇದು ರೈತರು ಬೆಳೆದ ಬೆಳೆಗೆ ಸ್ಪರ್ಧಾತ್ಮಕ ಬೆಲೆಯನ್ನು ಒದಗಿಸಲಿದೆ. ಇದರಿಂದ ಕನಿಷ್ಟ ಬೆಂಬಲ ಬೆಲೆ ರದ್ದಾಗುವುದಿಲ್ಲ ಎಂದು ಹೇಳುತ್ತಿದ್ದಾರೆ.
ಈ ಪರ-ವಿರೋಧ ಚರ್ಚೆಗಳಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ರಾಜ್ಯ ರೈತ ಸಂಘದ ಮುಖಂಡರಾದ ಬಡಗಲಪುರ ನಾಗೇಂದ್ರ ಈ ಹಿಂದೆ ಹೇಳಿದ್ದರು.
ಇದನ್ನೂ ಓದಿ: ದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!