Homeಚಳವಳಿರೈತ ಹೋರಾಟ ಬೆಂಬಲಿಸಿದ್ದ ಟ್ರೂಡೊ: ಭಾರತ-ಕೆನಡಾ ರಾಜಕೀಯ ಸಂಬಂಧದಲ್ಲಿ ಬಿರುಕು!

ರೈತ ಹೋರಾಟ ಬೆಂಬಲಿಸಿದ್ದ ಟ್ರೂಡೊ: ಭಾರತ-ಕೆನಡಾ ರಾಜಕೀಯ ಸಂಬಂಧದಲ್ಲಿ ಬಿರುಕು!

"ಪ್ರಪಂಚದ ಎಲ್ಲಾ ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಎಂದಿಗೂ ಬೆಂಬಲಿಸುತ್ತದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಪುನರುಚ್ಚರಿಸಿದ್ದರು.

- Advertisement -
- Advertisement -

ಭಾರತ ಮತ್ತೆ ಕೆನಡಾ ಉಭಯ ದೇಶಗಳ ಉನ್ನತ ರಾಜತಾಂತ್ರಿಕರ ನಡುವಿನ ವಿದೇಶಾಂಗ ಕಚೇರಿ ಸಮಾಲೋಚನೆಗಳನ್ನು ಮುಂದೂಡುವಂತೆ ಭಾರತ ಸರ್ಕಾರ ಕೆನಡಾವನ್ನು ಕೋರಿದೆ. ದೇಶದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಕುರಿತು ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಅವರ ಟೀಕೆಗಳ ನಂತರ ಎರಡು ದೇಶಗಳ ನಡುವಿನ ರಾಜಕೀಯ ಸಂಬಂಧದಲ್ಲಿ ಬಿರುಕು ಮೂಡಿರುವ ಮುನ್ಸೂಚನೆ ಇದಾಗಿದೆ.

ಇಂದು (ಡಿ.15) ನಡೆಯಲಿದೆ ಎಂದು ನಿರೀಕ್ಷಿಸಲಾಗಿದ್ದ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ (ಪೂರ್ವ), ರಿವಾ ಗಂಗೂಲಿ ದಾಸ್ ಮತ್ತು ಅವರ ಕೆನಡಾದ ಅಧಿಕಾರಿಯೊಂದಿಗೆ ವಿದೇಶಾಂಗ ಕಚೇರಿ ಸಮಾಲೋಚನೆಗಳನ್ನು ಮುಂದೂಡಲಾಗಿದೆ. ಸಮಾಲೋಚನೆ ನಡೆಸಲು ದಿನಾಂಕ ಅನಾನುಕೂಲವಾಗಿದೆ ಎಂದು ನವದೆಹಲಿ ಒಟ್ಟಾವಾಕ್ಕೆ ತಿಳಿಸಿದೆ.

ದಿನಾಂಕ ಅನಾನುಕೂಲವಾಗಿದೆ ಎಂಬ ಕಾರಣವಿಟ್ಟುಕೊಂಡು ಕೆನಡಾದ ವಿದೇಶಾಂಗ ಸಚಿವ ಫ್ರಾಂಕೋಯಿಸ್-ಫಿಲಿಪ್ ಷಾಂಪೇನ್ ಆಯೋಜಿಸಿದ್ದ ಕೋವಿಡ್ -19 ಮಂತ್ರಿ ಸಮನ್ವಯ ಗುಂಪಿನ ಸಭೆಗೂ ವಿದೇಶಾಂಗ ಸಚಿವ ಎಸ್.ಜೈಶಂಕರ್ ಗೈರಾಗಿದ್ದರು. ಇದರ ಹಿಂದಿನ ಮಂತ್ರಿ ಸಮನ್ವಯ ಗುಂಪಿನ ಸಭೆಯಲ್ಲಿ ಭಾಗವಹಿಸಿದ್ದ ಭಾರತ, ಡಿಸೆಂಬರ್ 7 ರ ಸಭೆಯಿಂದ ದೂರವಿರಲು ವೇಳಾಪಟ್ಟಿ ಸಮಸ್ಯೆಗಳನ್ನು ಉಲ್ಲೇಖಿಸಿತ್ತು.

ಇದನ್ನೂ ಓದಿ: ಭಾರತ ಸರ್ಕಾರದ ಆಕ್ಷೇಪ ಲೆಕ್ಕಿಸದೆ ಮತ್ತೆ ರೈತರ ಪರ ದನಿಯೆತ್ತಿದ್ದ ಕೆನಡಾ ಪ್ರಧಾನಿ!

ಗುರುನಾನಕ್ ಅವರ 551 ನೇ ಜನ್ಮ ದಿನಾಚರಣೆಯಂದು ವಿಡಿಯೋ ಸಂವಾದದಲ್ಲಿ ಮಾತನಾಡಿದ್ದ ಪ್ರಧಾನಿ ಜಸ್ಟಿನ್ ಟ್ರೂಡೊ, “ರೈತರ ಪ್ರತಿಭಟನೆಯ ಕುರಿತು ಭಾರತದಿಂದ ಬರುತ್ತಿರುವ ಸುದ್ದಿಗಳನ್ನು ನಮ್ಮನ್ನು ಆತಂಕಕ್ಕೀಡುಮಾಡಿವೆ. ಅಲ್ಲಿನ ಪರಿಸ್ಥಿತಿಯಿಂದ ನಾವೆಲ್ಲರೂ ಕುಟುಂಬ ಮತ್ತು ಸ್ನೇಹಿತರ ಬಗ್ಗೆ ಚಿಂತಿತರಾಗಿದ್ದೇವೆ. ನಿಮ್ಮಲ್ಲಿ ಅನೇಕರಿಗೆ ಇದು ನಿಜವೆಂದು ತಿಳಿದಿದೆ. ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕನ್ನು ಕೆನಡಾ ಯಾವಾಗಲೂ ಬೆಂಬಲಿಸುತ್ತದೆ ಎಂದು ಹೇಳಲು ಇಚ್ಛಿಸುತ್ತೇನೆ. ಸಂವಾದದಲ್ಲಿ ನಂಬಿಕೆಯುಳ್ಳವರು ನಾವು. ರೈತರ ಬಗೆಗಿನ ನಮ್ಮ ಕಾಳಜಿಯನ್ನು ನೇರವಾಗಿ ಎಲ್ಲಾ ಮಾರ್ಗಗಳಲ್ಲಿ ಭಾರತದ ಸರ್ಕಾರದ ಗಮನಕ್ಕೆ ತರುತ್ತೇವೆ. ಇದು ನಾವೆಲ್ಲರೂ ರೈತರೊಂದಿಗೆ ನಿಲ್ಲುವ ಸಮಯ” ಎಂದು ಹೇಳಿದ್ದರು.

ಇದಕ್ಕೆ ದೇಶದಲ್ಲಿ ಅನೇಕ ಪ್ರತಿರೋಧಗಳು ವ್ಯಕ್ತವಾಗಿದ್ದವು. ದೆಹಲಿಯಲ್ಲಿರುವ ಕೆನಡಾ ರಾಯಭಾರಿಯನ್ನ ಕರೆಸಿ ವಿದೇಶಾಂಗ ಇಲಾಖೆ ಎಚ್ಚರಿಕೆ ನೀಡಿತ್ತು. ಕೆನಡಾ ಪ್ರಧಾನಿ ನೀಡಿದಂಥ ಹೇಳಿಕೆಯಿಂದ ಭಾರತ ಮತ್ತು ಕೆನಡಾ ನಡುವಿನ ಸಂಬಂಧಕ್ಕೆ ಧಕ್ಕೆಯಾಗುತ್ತದೆ. ಇನ್ನುಮುಂದೆ ಇಂಥದಕ್ಕೆ ಆಸ್ಪದ ಕೊಡಬೇಡಿ ಎಂದು ಕೆನಡಾ ರಾಯಭಾರಿಗೆ ಸರ್ಕಾರ ಸೂಚಿಸಿತ್ತು.

ಆದರೂ ಕೂಡ ಕೆನಡಾ ಪ್ರಧಾನಿ ರೈತರಿಗೆ ಬೆಂಬಲ ನೀಡುವುದನ್ನು ನಿಲ್ಲಿಸಿರಲಿಲ್ಲ. ವಿದೇಶಾಂಗ ಇಲಾಖೆ ಎಚ್ಚರಿಕೆಗೆ ಪ್ರತಿಕ್ರಿಯಿಸಿದ್ದ ಪ್ರಧಾನಿ ಜಸ್ಟಿನ್ ಟ್ರೂಡೊ, “ಪ್ರಪಂಚದ ಎಲ್ಲಾ ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಎಂದಿಗೂ ಬೆಂಬಲಿಸುತ್ತದೆ. ಭಾರತದಲ್ಲಿ ಹೋರಾಟನಿರತ ರೈತರೊಂದಿಗೆ ಸರ್ಕಾರ ಮಾತುಕತೆ ನಡೆಸುತ್ತಿರುವುದು ಒಳ್ಳೆಯ ನಡೆ” ಎಂದಿದ್ದಾರೆ. ಭಾರತವು ನಿಮ್ಮ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದೆ ಎಂಬ ಪ್ರಶ್ನೆಗೆ ಅವರು ಪ್ರಪಂಚದ ಎಲ್ಲಾ ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಎಂದಿಗೂ ಬೆಂಬಲಿಸುತ್ತದೆ ಎಂದು ಪುನರುಚ್ಚರಿಸಿದ್ದರು. ಈ ಎಲ್ಲಾ ಬೆಳವಣಿಗೆಗಳು ಉಭಯ ದೇಶಗಳ ರಾಜಕೀಯ ಸಂಬಂಧದಲ್ಲಿ ಬಿರುಕು ಮೂಡಿಸುವ ಮುನ್ಸೂಚನೆ ನೀಡುತ್ತಿವೆ.

ಇದನ್ನೂ ಓದಿ: ಭಾರತ ಸರ್ಕಾರದ ಆಕ್ಷೇಪ ಲೆಕ್ಕಿಸದೆ ಮತ್ತೆ ರೈತರ ಪರ ದನಿಯೆತ್ತಿದ್ದ ಕೆನಡಾ ಪ್ರಧಾನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...