Homeಚಳವಳಿರೈತ ಹೋರಾಟ: ರಾಜಸ್ಥಾನ-ಹರಿಯಾಣ ಗಡಿಯಲ್ಲಿನ ಬ್ಯಾರಿಕೇಡ್‌ಗಳನ್ನು ಮುರಿದು ಮುನ್ನುಗ್ಗಿದ ರೈತರು

ರೈತ ಹೋರಾಟ: ರಾಜಸ್ಥಾನ-ಹರಿಯಾಣ ಗಡಿಯಲ್ಲಿನ ಬ್ಯಾರಿಕೇಡ್‌ಗಳನ್ನು ಮುರಿದು ಮುನ್ನುಗ್ಗಿದ ರೈತರು

"ನಾವು ಲಾಠೀ ಚಾರ್ಜ್ ಮಾಡಿಲ್ಲ. ಆದರೆ ಅವರನ್ನು ತಡೆಯಲು ಅಶ್ರುವಾಯು ಮತ್ತು ಜಲಫಿರಂಗಿಗಳನ್ನು ಸಿಡಿಸಬೇಕಾಯಿತು. ಆದರೂ ಅವರನ್ನೂ ತಡೆಯಲಾಗಲಿಲ್ಲ" ಎಂದು ಬವಾಲ್ ಡಿಎಸ್‌ಪಿ ರಾಜೇಶ್‌ ಕುಮಾರ್ ಹೇಳಿದರು.

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ರಾಜಸ್ಥಾನ-ಹರಿಯಾಣ ಗಡಿಯಲ್ಲಿ ಪೊಲೀಸರು ರಸ್ತೆಗೆ ಅಡ್ಡವಾಗಿ ಇರಿಸಿದ್ದ ಬ್ಯಾರಿಕೇಡ್‌ಗಳನ್ನು ರೈತರು ಮುರಿದು ದೆಹಲಿಯತ್ತ ಹೊರಟಿದ್ದಾರೆ.

ಪೊಲೀಸರು ಜಲಫಿರಂಗಿ ಮತ್ತು ಅಶ್ರುವಾಯು ಪ್ರಯೋಗಿಸಿ ರೈತರನ್ನು ತಡೆಯಲು ಯತ್ನಿಸಿದರು. ಆದರೂ 20-25 ಟ್ರ್ಯಾಕ್ಟರ್‌ಗಳಿಂದ ಬ್ಯಾರಿಕೇಡ್‌ಗಳನ್ನು ಮುರಿಯಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ನಾವು ಲಾಠೀ ಚಾರ್ಜ್ ಮಾಡಿಲ್ಲ. ಆದರೆ ಅವರನ್ನು ತಡೆಯಲು ಅಶ್ರುವಾಯು ಮತ್ತು ಜಲಫಿರಂಗಿಗಳನ್ನು ಸಿಡಿಸಬೇಕಾಯಿತು. ಆದರೂ ಅವರನ್ನೂ ತಡೆಯಲಾಗಲಿಲ್ಲ” ಎಂದು ಬವಾಲ್ ಡಿಎಸ್‌ಪಿ ರಾಜೇಶ್‌ ಕುಮಾರ್ ಹೇಳಿದರು.

ಇದನ್ನೂ ಓದಿ: ನಾಳೆಯೇ ಚುನಾವಣೆ ನಡೆದರೂ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರುತ್ತೇವೆ: ಸಿದ್ದರಾಮಯ್ಯ

ಕಳೆದ ಒಂದು ತಿಂಗಳಿನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಕೇಂದ್ರ ಸರ್ಕಾರದ ರೈತ ವಿರೋಧಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಜೊತೆ ಆರು ಸುತ್ತಿನ ಮಾತುಕತೆಗಳು ನಡೆದಿದ್ದು, ಅವುಗಳೆಲ್ಲವೂ ವಿಫಲವಾಗಿವೆ. ಈಗ ಜನವರಿ 4 ರಂದು ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆಯೇ ರೈತರ ಪ್ರತಿಭಟನೆಯನ್ನು ದಿಕ್ಕುತಪ್ಪಿಸಲು ಕೇಂದ್ರದ ಬಿಜೆಪಿ ಸರ್ಕಾರ ಮತ್ತು ಬಲಪಂಥೀಯ ಮಾಧ್ಯಮಗಳು ಹಾಗೂ ಬಿಜೆಪಿ ಐಟಿ ಸೆಲ್‌ಗಳು ಪ್ರಯತ್ನಿಸುತ್ತಿವೆ. ಇದರ ಭಾಗವಾಗಿ ರೈತರನ್ನು ನಕ್ಸಲರು, ಖಲೀಸ್ತಾನಿಗಳು, ಭಯೋತ್ಪಾದಕರು, ನಕಲಿ ರೈತರು ಎಂದು ಮುಂತಾದ ಅಸಾಂವಿಧಾನಿಕ ಪದಗಳನ್ನು ಪ್ರಯೋಗಿಸಿ ಜನರಲ್ಲಿ ನಕಾರಾತ್ಮಕ ಭಾವನೆಯನ್ನು ಹರಡುತ್ತಿದೆ. ಆದರೆ ಇದಾವುದಕ್ಕೂ ಅಂಜದ ರೈತರು ತಮ್ಮ ದಿಟ್ಟ ಹೋರಾಟವನ್ನು ಮುಂದುವರೆಸಿದ್ದಾರೆ.


ಇದನ್ನೂ ಓದಿ: ಗ್ರಾಮ ಪಂಚಾಯತ್‌‌‌‌ ಚುನಾವಣೆ: ಮತ ಎಣಿಕೆಯಲ್ಲಿ ಲೋಪ ಅಭ್ಯರ್ಥಿ ರಾಜಣ್ಣ ಅವರಿಂದ ಜಿಲ್ಲಾಧಿಕಾರಿಗೆ ದೂರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...