Homeಮುಖಪುಟರೈತ ಹೋರಾಟ 80ನೇ ದಿನಕ್ಕೆ: ಪ್ರೊ ಎಂ.ಡಿ ನಂಜುಂಡಸ್ವಾಮಿಯವರನ್ನು ನೆನೆದ ರೈತ ಒಕ್ಕೂಟ

ರೈತ ಹೋರಾಟ 80ನೇ ದಿನಕ್ಕೆ: ಪ್ರೊ ಎಂ.ಡಿ ನಂಜುಂಡಸ್ವಾಮಿಯವರನ್ನು ನೆನೆದ ರೈತ ಒಕ್ಕೂಟ

ಆಹಾರದ ಹೆಸರಿನಲ್ಲಿ ಮತ್ತು ರೈತರ ಹಣದಲ್ಲಿ ಕಾರ್ಪೊರೇಟ್‌ಗಳು ಲಾಭ ಗಳಿಸಲು ಅವಕಾಶ ನೀಡುವುದಿಲ್ಲ. ಹಸಿವು ವ್ಯಾಪಾರವಲ್ಲ.

- Advertisement -
- Advertisement -

“ಕರ್ನಾಟಕ ರಾಜ್ಯ ರೈತ ಸಂಘದ ಸಂಸ್ಥಾಪಕರಾದ ಪ್ರೊ.ಎಂ.ಡಿ ನಂಜುಂಡಸ್ವಾಮಿಯವರ ಜನ್ಮದಿನದ ಪ್ರಯುಕ್ತ (ಫೆಬ್ರವರಿ 13) ಅವರ ಆಶಯದಂತೆ ರೈತರ ಹಕ್ಕುಗಳನ್ನು ಎತ್ತಿಹಿಡಿದು, ಪ್ರಗತಿಪರ, ನ್ಯಾಯಸಮ್ಮತ ಮತ್ತು ನ್ಯಾಯಯುತ ಸಮಾಜದ ನಿರ್ಮಾಣಕ್ಕಾಗಿ ಈ ಹೋರಾಟವನ್ನು ಇನ್ನಷ್ಟು ಮುಂದೆ ಸಾಗಿಸುವ ಕೆಲಸವನ್ನು ಮಾಡುತ್ತೇವೆ” ಎಂದು ಸಂಯುಕ್ತ ಕಿಸಾನ್ ಮೋರ್ಚಾ (SKM) ಪುನರುಚ್ಚರಿಸಿದೆ.

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಮತ್ತು ಕನಿಷ್ಟ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ಲಕ್ಷಾಂತರ ರೈತರು ನಡೆಸುತ್ತಿರುವ ಪ್ರತಿಭಟನೆ 80ನೇ ದಿನಕ್ಕೆ ಕಾಲಿಟ್ಟಿದೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ SKM, “ದೇಶದೆಲ್ಲೆಡೆ ಪ್ರಬಲವಾಗಿ ನಡೆಯುತ್ತಿರುವ ರೈತ ಮಹಾಪಂಚಾಯತ್‌ಗಳು ರೈತರ ಹೋರಾಟಕ್ಕೆ ಭಾರೀ ಪ್ರಮಾಣದ ಬೆಂಬಲವನ್ನು ನೀಡುತ್ತಿವೆ. ಇಂದು ಬಿಲಾರಿ ಮತ್ತು ಬಹದ್ದೂರ್‌ಗಡ್‌ನಲ್ಲಿ ಸಾವಿರಾರು ರೈತರು ಭಾಗವಹಿಸಿದ್ದರು” ಎಂದು ಹೇಳಿದೆ.

ಇದನ್ನೂ ಓದಿ: ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

“ಆಹಾರದ ಹೆಸರಿನಲ್ಲಿ ಮತ್ತು ರೈತರ ಹಣದಲ್ಲಿ ಕಾರ್ಪೊರೇಟ್‌ಗಳು ಲಾಭ ಗಳಿಸಲು ಅವಕಾಶ ನೀಡುವುದಿಲ್ಲ. ಹಸಿವು ವ್ಯಾಪಾರವಲ್ಲ. ಹೀಗೆ ಯೋಚಿಸುವ ಸರ್ಕಾರಗಳು ಮತ್ತು ಕಾರ್ಪೊರೇಟ್‌ಗಳಿಗೆ ಇದು ಅವಮಾನ” ಎಂದು ಮಹಾಪಂಚಾಯತ್‌ನಲ್ಲಿ SKM ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದರು.

“ಈವರೆಗೆ 228 ಪ್ರತಿಭಟನಾಕಾರರು ತಮ್ಮ ಪ್ರಾಣ ತ್ಯಾಗ ಮಾಡಿ ಈ ಆಂದೋಲನದಲ್ಲಿ ಹುತಾತ್ಮರಾಗಿದ್ದಾರೆ. ಈ ಹುತಾತ್ಮರ ಕುಟುಂಬಗಳಿಗೆ ಬೆಂಬಲವನ್ನು ನೀಡುವ ಯಾವುದೇ ಯೋಜನೆಯೂ ಇಲ್ಲ ಎಂದು ಸರ್ಕಾರವು ಸಂಸತ್ತಿನಲ್ಲಿ ಒಪ್ಪಿಕೊಂಡಿರುವುದು ನಾಚಿಕೆಗೇಡಿನ ಸಂಗತಿ. ಹುತಾತ್ಮರಾದ ಜೀವಗಳಿಗೆ ಸರ್ಕಾರವನ್ನೇ ದೂಷಿಸಬೇಕಾಗಿದೆ. ಪ್ರತಿಭಟನಾಕಾರರ ನ್ಯಾಯಸಮ್ಮತ ಬೇಡಿಕೆಗಳಿಗೆ ಸರ್ಕಾರ ಒಪ್ಪುವುದಕ್ಕೆ ಇನ್ನೂ ಎಷ್ಟು ಜೀವಗಳನ್ನು ತ್ಯಾಗ ಮಾಡಬೇಕು. ನಾವು ಸರ್ಕಾರದ ಅಸೂಕ್ಷ್ಮತೆಯನ್ನು ಖಂಡಿಸುತ್ತೇವೆ” ಎಂದು SKM ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಬ್ಯಾರಿಕೇಡ್‌ಗಳನ್ನು ತೆಗೆಯಿರಿ, ಬಂಧಿಸಿರುವ ರೈತರನ್ನು ಬಿಡುಗಡೆಗೊಳಿಸಿ: ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗ

“ಬಲಗೊಳ್ಳುತ್ತಿರುವ ಚಳವಳಿಯನ್ನು ಕಂಡು ಸರ್ಕಾರ ಹೆದರುತ್ತಿದೆ. ಹಾಗಾಗಿ ನಾಗರೀಕರ ಮತ್ತು ಪ್ರಜಾಪ್ರಭುತ್ವದ ಧ್ವನಿಯನ್ನು ಅಡಗಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಚಳವಳಿಯ ತೀವ್ರತೆಗೆ ಬೆಂಬಲವಾಗಿ ನಿಂತಿರುವ ಮಾಧ್ಯಮಗಳ ಮೇಲೆ ಸರ್ಕಾರ ನಿರಂತರವಾಗಿ ದಾಳಿ ಮಾಡುತ್ತಿದೆ. ಇದಕ್ಕೆ ಇತ್ತೀಚಿನ ಉದಾಹರಣೆ ನ್ಯೂಸ್‌ ಕ್ಲಿಕ್ ಮೇಲೆ ನಡೆದ ದಾಳಿಯಾಗಿದೆ. ಇದನ್ನು SKM ಖಂಡಿಸುತ್ತದೆ” ಎಂದು ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

“ಬಿಜೆಪಿ ಸರ್ಕಾರದ ಹುಸಿ ರಾಷ್ಟ್ರೀಯತೆಯನ್ನು ಬಹಿರಂಗಪಡಿಸಲು ಮತ್ತು ಮಾಧ್ಯಮ ಮಿತ್ರರಿಬ್ಬರ ವಾಟ್ಸಾಪ್‌ ಚಾಟ್‌ನಿಂದ ಸೋರಿಕೆಯಾದ ರಕ್ಷಣಾ ರಹಸ್ಯಗಳ ಹಿನ್ನೆಲೆಯಲ್ಲಿ ಹಾಗೂ ಗಡಿಗಳಲ್ಲಿ ನಿಂತು ನಮ್ಮೆಲ್ಲರನ್ನೂ ರಕ್ಷಿಸುತ್ತಿರುವ ನಮ್ಮ ಸೈನಿಕರನ್ನು ನಾವು ನಿಜವಾಗಿಯೂ ಗೌರವಿಸುತ್ತೇವೆ ಎಂಬುದನ್ನು ತೋರಿಸಲು ಫೆಬ್ರವರಿ 14 ರಂದು ವಿಶಿಷ್ಟ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದ್ದೇವೆ. ಟಾರ್ಚ್ ಲೈಟ್ ಮತ್ತು ಕ್ಯಾಂಡಲ್ ಲೈಟ್ ಮೆರವಣಿಗೆಯನ್ನು ದೇಶದಾದ್ಯಂತ ಪ್ರತಿ ನಗರ ಮತ್ತು ಹಳ್ಳಿಗಳಲ್ಲಿಯೂ ಆಯೋಜಿಸಲಾಗುವುದು. ಈ ಮೂಲಕ ಚಳವಳಿಯಲ್ಲಿ ಹುತಾತ್ಮರಾದ ರೈತರಿಗೆ ಗೌರವ ಸಲ್ಲಿಸಲಾಗುವುದು. ರೈತರ ಚಳವಳಿಯ ಧ್ಯೇಯವಾಕ್ಯವಾದ ಜೈ ಜವಾನ್-ಜೈಕಿಸಾನ್ ಘೋಷಣೆಯನ್ನು ಪುನರುಚ್ಚರಿಸಲಾಗುವುದು” ಎಂದು SKM ತೀರ್ಮಾನಿಸಿದೆ.


ಇದನ್ನೂ ಓದಿ: ನಮ್ಮ ಅನ್ನದಾತರ ಹೋರಾಟಕ್ಕೆ ಜಯವಾಗಲಿ: ತಿಂಗಳ ಹಿಂದಿನ ನಾಸಿರುದ್ದೀನ್‌ ಶಾ ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...