Homeಮುಖಪುಟರೈತ ಹೋರಾಟ: ಬಾಲಿವುಡ್ ನಟ ಸಲ್ಮಾನ್ ಖಾನ್‌‌ ಹೇಳಿದ್ದೇನು?

ರೈತ ಹೋರಾಟ: ಬಾಲಿವುಡ್ ನಟ ಸಲ್ಮಾನ್ ಖಾನ್‌‌ ಹೇಳಿದ್ದೇನು?

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾನೂನನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಮೂರನೆ ತಿಂಗಳಿಗೆ ಕಾಲಿಟ್ಟಿದೆ. ಅಂತಾರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಹೋರಾಟವನ್ನು ಬೆಂಬಲಿಸಿ ಮಾತನಾಡಿದ್ದು ಕೇಂದ್ರ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ಅವರ ಒಂದು ಟ್ವೀಟ್ ರೈತ ಹೋರಾಟದ ಮನ್ನಣೆಯನ್ನು ಜಾಗತಿಕವಾಗಿ ಹೆಚ್ಚಿಸಿದೆ.

ಈ ಮಧ್ಯೆ ರೈತ ಹೋರಾಟದ ಪರವಾಗಿ ತಾಪ್ಸಿ ಪನ್ನು, ಪರಾ ಖಾನ್, ಸೋನಾಕ್ಷಿ ಸಿನ್ಹಾ, ಸ್ವರಾ ಭಾಸ್ಕರ್‌, ಮನೋಜ್ ತಿವಾರಿ, ರೋಹಿತ್ ಶರ್ಮಾ, ಇರ್ಫಾನ್ ಪಠಾಣ್, ಪ್ರಕಾಶ್ ರಾಜ್ ಸೇರಿದಂತೆ ಹಲವು ಸೆಲೆಬ್ರಿಟಿಗಳು ಧ್ವನಿ ಎತ್ತಿದ್ದಾರೆ.

ಇದೀಗ ಬಾಲಿವುಡ್ ಸೂಪರ್‌ ಸ್ಟಾರ್‌ ಸಲ್ಮಾನ್ ಖಾನ್‌ ಕೂಡಾ ರೈತರ ಪರವಾಗಿ ಮಾತನಾಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಲ್ಮಾನ್‌ ಖಾನ್‌, “ರೈತರಿಗೆ ಒಳ್ಳೆಯದಾಗುವುದನ್ನೇ ಮಾಡಬೇಕು, ಸಮರ್ಪಕ ಮತ್ತು ಉತ್ತಮವಾದುದನ್ನೇ ಮಾಡಬೇಕು. ಪ್ರತಿಯೊಬ್ಬ ರೈತನಿಗೂ ಸರಿಯಾದುದನ್ನೇ ಮಾಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಂಗನಾ ದ್ವೇಷಪೂರಿತ ಪೋಸ್ಟ್: ತನಿಖೆಯ ವರದಿ ಸಲ್ಲಿಸುವಂತೆ ಕೋರ್ಟ್ ನಿರ್ದೇಶನ

 

ಈ ನಡುವೆ ಕೆಲವು ಭಾರತೀಯ ಸೆಲೆಬ್ರಿಟಿಗಳು ಕೇಂದ್ರದ ಪರವಾಗಿ ಬ್ಯಾಟ್ ಬೀಸಿದ್ದಾರೆ. ತನಗೆ ಒದಗಿದ ಮುಜುಗರವನ್ನು ತಪ್ಪಿಸಲು ಭಾರತೀಯ ಸೆಲೆಬ್ರಿಟಿಗಳಿಗೆ ಸರ್ಕಾರದ ಪರವಾಗಿ ಟ್ವೀಟ್ ಮಾಡುವಂತೆ ಕೇಂದ್ರವು ಒತ್ತಾಯಿಸಿರಬಹುದು ಎಂದು ಆರೋಪಗಳೆದ್ದಿದೆ.

ಈ ಸೆಲೆಬ್ರಿಟಿಗಳು ಬಿಜೆಪಿಯ ಐಟಿ ಸೆಲ್ಲಿನಿಂದ ಬಂದಿರುವ ಟ್ವೀಟ್‌ಗಳನ್ನು ಕಾಪಿ ಪೇಸ್ಟ್‌‌ ಮಾಡಿ ನೆಟ್ಟಿಗರಿಂದ ಟ್ರೋಲ್‌ಗೂ ಒಳಗಾಗಿದ್ದರು. ಈ ಮಧ್ಯೆ ನಟ ಸಲ್ಮಾನ್‌ ಖಾನ್‌ ರೈತರಿಗೆ ಒಳ್ಳೆಯದ್ದೇನೆ ಮಾಡಬೇಕು ಎಂದು ರೈತ ಹೋರಾಟವನ್ನು ಬೆಂಬಲಿಸಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ನಾವು ರೈತರನ್ನು ಬೆಂಬಲಿಸಬೇಕು, ಏಕೆಂದರೆ… – ನಿರ್ದೇಶಕ ಪ. ರಂಜಿತ್ ಟ್ವೀಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

0
ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ...