Homeಮುಖಪುಟರೈತ ಹೋರಾಟ: ನಾಳೆಯ 'ಚಕ್ಕಾ ಜಾಮ್' ರಸ್ತೆ ತಡೆ ಪ್ರತಿಭಟನೆ ಹೇಗಿರಲಿದೆ?

ರೈತ ಹೋರಾಟ: ನಾಳೆಯ ‘ಚಕ್ಕಾ ಜಾಮ್’ ರಸ್ತೆ ತಡೆ ಪ್ರತಿಭಟನೆ ಹೇಗಿರಲಿದೆ?

- Advertisement -
- Advertisement -

ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯ ಭಾಗವಾಗಿ ನಾಳೆ ಶನಿವಾರ ಫೆ. 6 ರಂದು ಚಕ್ಕಾ ಜಾಮ್-ರಸ್ತೆ ತಡೆ ಪ್ರತಿಭಟನೆಗೆ ಸಂಯುಕ್ತ್ ಕಿಸಾನ್ ಮೋರ್ಚಾ ಕರೆ ನೀಡಿದೆ. ಇದರ ಸ್ವರೂಪ ಹೇಗಿರಲಿವೆ? ವಿವರಗಳು ಇಲ್ಲಿವೆ.

ಚಕ್ಕಾ ಜಾಮ್ ಏತಕ್ಕಾಗಿ?

40 ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ್ ಕಿಸಾನ್ ಮೋರ್ಚಾ ದೇಶವ್ಯಾಪಿ ರಸ್ತೆ ತಡೆಗೆ ಕರೆ ನೀಡಿದೆ. ಕೇಂದ್ರ ಬಜೆಟ್‌ನಲ್ಲಿ ರೈತರನ್ನು ನಿರ್ಲಕ್ಷಿಸಿದ್ದು ಮತ್ತು ಪ್ರತಿಭಟನೆ ನಡೆಯುತ್ತಿರುವ ಸ್ಥಳಗಳು ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಇಂಟರ್‌ನೆಟ್ ಸ್ಥಗಿತಗೊಳಿಸಿದ್ದನ್ನು ಖಂಡಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಯಾವ ಭಾಗಗಳಲ್ಲಿ ಪರಿಣಾಮ?

ದೆಹಲಿಯನ್ನು ಹೊರತುಪಡಿಸಿ, ಆದರೆ ರಾಷ್ಟ್ರ ರಾಜಧಾನಿ ವಲಯ (ಎನ್‌ಸಿಆರ್)ದಲ್ಲಿ ಬರುವ ಉತ್ತರ ಪ್ರದೇಶ, ಹರಿಯಾಣ ಮತ್ತು ರಾಜಸ್ಥಾನದ ಗಡಿಭಾಗಗಳಲ್ಲಿ ರಸ್ತೆ ತಡೆ ನಡೆಯಲಿದೆ. ಉಳಿದಂತೆ ದಕ್ಷಿಣ ರಾಜ್ಯಗಳು ಸೇರಿದಂತೆ ದೇಶಾದ್ಯಂತ ಈ ಪ್ರತಿಭಟನೆ ನಡೆಯಲಿದೆ.

ಇದನ್ನೂ ಓದಿ: ಬಾಲಿವುಡ್‌ನಲ್ಲಿರುವವರಿಗಿಂತ ಗಟ್ಟಿಯಾದ ಬೆನ್ನುಮೂಳೆಯಿದೆ – ಗ್ರೇಟಾ ಬಗ್ಗೆ ನಟಿ ರಮ್ಯಾ ಟ್ವೀಟ್

ಸುದ್ದಿಗಾರರೊಂದಿಗೆ ಮಾತನಾಡಿದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್, “ನಾವು ದೆಹಲಿಯಲ್ಲಿ ಏನನ್ನೂ ಮಾಡಲು ಹೋಗುವುದಿಲ್ಲ, ಅಲ್ಲಿನ ರಾಜ ಸ್ವಯಂ ಗೃಹಬಂಧಿಯಗಿದ್ದಾನೆ. ಈಗ ಅಲ್ಲಿ ನಾವು ದಿಗ್ಬಂಧನ ಮಾಡುವ ಅಗತ್ಯವಿಲ್ಲ” ಎಂದಿದ್ದಾರೆ.

ಎಷ್ಟು ಸಮಯದವರೆಗೆ?

ರಸ್ತೆಗಳು ಮತ್ತು ಹೆದ್ದಾರಿಗಳಲ್ಲಿ ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರ ನಡುವೆ ’ಚಕ್ಕಾ ಜಾಮ್’ ನಡೆಯಲಿದೆ. ಬಂದು ನಿಲ್ಲುವ ವಾಹನಗಳಿಗೆ ನೀರು ಮತ್ತು ಆಹಾರವನ್ನು ನೀಡಲಾಗುವುದು ಎಂದು ಟಿಕಾಯತ್ ಹೇಳಿದ್ದಾರೆ. ಈ ಜನರಿಗೆ ಸರ್ಕಾರವು ರೈತರೊಂದಿಗೆ ಹೇಗೆ ವರ್ತಿಸುತ್ತಿದೆ ಎಂಬುದರ ಕುರಿತು ತಿಳಿಸಲಾಗುವುದು ಎಂದಿದ್ದಾರೆ.

ಈ ಪ್ರತಿಭಟನೆಯನ್ನು ರೈತರ ನೇತೃತ್ವದ ’ಸೈದ್ಧಾಂತಿಕ ಕ್ರಾಂತಿ’ ಎಂದು ಅವರು ಬಣ್ಣಿಸಿದ್ದಾರೆ. ಸಿಂಘು, ಗಾಜಿಪುರ ಮತ್ತು ಟಿಕ್ರಿ ಗಡಿಗಳಲ್ಲಿನ ರೈತ ಪ್ರತಿಭಟನಾ ಸ್ಥಳಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ ಹಿನ್ನಲೆಯಲ್ಲಿ, ಈ ಪ್ರತಿಭಟನೆಗೆ ಫೋನ್‌ಗಳು ಅಥವಾ ವಾಟ್ಸಾಪ್‌ನಂತಹ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿದರು. ಇದು ಸರ್ಕಾರದ ಕ್ರಮಗಳ ವಿರುದ್ಧದ ಪ್ರತಿಭಟನೆ ಎಂದಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಬಾಲಿವುಡ್ ನಟ ಸಲ್ಮಾನ್ ಖಾನ್‌‌ ಹೇಳಿದ್ದೇನು?

ಭದ್ರತಾ ವ್ಯವಸ್ಥೆ:

ರಾಷ್ಟ್ರವ್ಯಾಪಿ ’ಚಕ್ಕಾ ಜಾಮ್’ ದೃಷ್ಟಿಯಿಂದ ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯ ಎಲ್ಲಾ ಗಡಿ ಕೇಂದ್ರಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಿದ್ದಾರೆ. ಗಾಜಿಪುರ ಗಡಿಯಲ್ಲಿ ವಾಹನಗಳ ಸಂಚಾರವನ್ನು ತಡೆಯಲು ಪೊಲೀಸರು ಬಹು-ಪದರದ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದಾರೆ. ಜನರು ಕಾಲ್ನಡಿಗೆಯಲ್ಲಿ ಬರುವುದನ್ನು ತಪ್ಪಿಸಲು ಮುಳ್ಳುತಂತಿ-ಮೊಳೆಗಳನ್ನು ಸಹ ಹಾಕಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಪ್ರಯತ್ನದಲ್ಲಿ ಹರಿಯಾಣ ಪೊಲೀಸರು ಭದ್ರತಾ ಕ್ರಮಗಳನ್ನು ಚುರುಕುಗೊಳಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪ್ರಮುಖ ಜಂಕ್ಷನ್‌ಗಳು ಮತ್ತು ರಸ್ತೆಗಳಲ್ಲಿ ಸುರಕ್ಷತೆ ಮತ್ತು ಸಂಚಾರ ವ್ಯವಸ್ಥೆಗಳನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುವಂತೆ ಹೇಳಲಾಗಿದ್ದು, ಸಮರ್ಪಕ ಸಿಬ್ಬಂದಿಯನ್ನು ನಿಯೋಜಿಸುವುದನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಗಿದೆ.

ಪ್ರತಿಭಟನೆಗಳ ಬಗ್ಗೆ:

ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಕೋರಿ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಹೆಚ್ಚಿನ ಪ್ರಮಾಣದ ರೈತರು ಸೇರಿದಂತೆ ದೇಶದ ಇತರ ಭಾಗಗಳ ರೈತರು ದೆಹಲಿಯ ಗಡಿಯಲ್ಲಿ ಬೀಡುಬಿಟ್ಟಿದ್ದಾರೆ. ಪ್ರತಿಭಟನಾ ನಿರತ ರೈತರು ಈ ಕಾನೂನುಗಳು ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ವ್ಯವಸ್ಥೆಯನ್ನು ಕಿತ್ತುಹಾಕಲು ದಾರಿ ಮಾಡಿಕೊಡುತ್ತವೆ ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: 86 ನೇ ಕನ್ನಡ ಸಾಹಿತ್ಯ ಸಮ್ಮೇಳನ ತಾತ್ಕಾಲಿಕ ಮುಂದೂಡಿದ ರಾಜ್ಯ ಸರ್ಕಾರ- ಕಾರಣವೇನು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನೀವು ಕಾನೂನಿಗಿಂತ ಮೇಲಲ್ಲ: ಜಾರಿ ನಿರ್ದೇಶನಾಲಯಕ್ಕೆ ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್‌

0
ಜಾರಿ ನಿರ್ದೇಶನಾಲಯವು (ಇಡಿ) ಕಾನೂನಿನ ಚೌಕಟ್ಟಿಗೆ ಒಳಪಟ್ಟಿದೆ ಮತ್ತು ಸಾಮಾನ್ಯ ನಾಗರಿಕರ ವಿರುದ್ಧ ಬಲಪ್ರದರ್ಶನ ಮಾಡುವಂತಿಲ್ಲ ಎಂದು ದೆಹಲಿ ಹೈಕೋರ್ಟ್‌ ಜಾರಿ ನಿರ್ದೇಶನಾಲಯಕ್ಕೆ ಹೇಳಿದ್ದು, ನೀವು ಕಾನೂನಿಗಿಂತ ಮೇಲಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಮಧ್ಯಂತರ...