Homeಕರ್ನಾಟಕರೈತ ಹೋರಾಟಗಾರ ಕೊಟ್ಟೂರು ಶ್ರೀನಿವಾಸ್ (61) ನಿಧನ

ರೈತ ಹೋರಾಟಗಾರ ಕೊಟ್ಟೂರು ಶ್ರೀನಿವಾಸ್ (61) ನಿಧನ

- Advertisement -
- Advertisement -

ರೈತ ಹೋರಾಟಗಾರ, ಕರ್ನಾಟಕ ರಾಜ್ಯ ರೈತ ಸಂಘದ ಹಾಸನ ಜಿಲ್ಲಾಧ್ಯಕ್ಷರಾದ ಕೊಟ್ಟೂರು ಶ್ರೀನಿವಾಸ್ ಸಂಜೆ 5:30 ರ ಹೊತ್ತಿಗೆ ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ನಿಧನರಾದರು.

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರು ಸ್ವಲ್ಪ ದಿನಗಳ ಕಾಲ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಇನ್ನಷ್ಟು ಹದಗೆಟ್ಟಿದ್ದರಿಂದ ಕಳೆದ ತಿಂಗಳು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು.

ವಾರಗಳ ಹಿಂದೆಯಷ್ಟೇ ತುಸು ಚೇತರಿಸಿಕೊಂಡಿದ್ದ ಅವರು, ನಿನ್ನೆ ಪುನಃ ತೀವ್ರ ಅಸ್ವಸ್ಥಗೊಂಡಿದ್ದರಿಂದ ವೆಂಟಿಲೇಟರ್‌‌ ಸಹಾಯದಲ್ಲಿ ಇಡಲಾಗಿತ್ತು. ಮೃತ ಶರೀರವನ್ನು ಹಾಸನಕ್ಕೆ ಕೊಂಡೊಯ್ಯುತ್ತಿದ್ದು, ನಾಳೆ ಮಧ್ಯಾಹ್ನ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಅವರ ಸ್ನೇಹಿತರು ತಿಳಿಸಿದ್ದಾರೆ.

ಶ್ರೀನಿವಾಸ್ ಕೊಟ್ಟೂರು ಹಲವು ದಶಕಗಳಿಂದ ಹೋರಾಟಗಳಲ್ಲಿ ತೊಡಗಿಸಿಕೊಂಡು ರೈತರ ‌ಧ್ವನಿಯಾಗಿದ್ದರು. ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆಯ ಹಾಸನ ಜಿಲ್ಲಾಧ್ಯಕ್ಷರಾಗಿದ್ದ ಇವರು ಒಬ್ಬ ಮಗಳು, ಪತ್ನಿ ಮತ್ತು ಅಪಾರ ಚಳುವಳಿಯ ಒಡನಾಡಿಗಳನ್ನು ಅಗಲಿದ್ದಾರೆ.

ಇದನ್ನೂ ಓದಿ: ಅಲ್ಪಾವದಿ ಸಾಲದ ನೀತಿಯನ್ನು ಮಾರ್ಪಾಡು ಮಾಡದಿದ್ದಲ್ಲಿ ಹೋರಾಟ: ರೈತ ಸಂಘ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ರಿಸ್‌ಮಸ್‌ ದಿನ ದೇಶದ ಹಲವು ನಗರಗಳಲ್ಲಿ ಗಿಗ್‌ ಕಾರ್ಮಿಕರಿಂದ ಪ್ರತಿಭಟನೆ : ಹೊಸ ವರ್ಷದಂದು ಮತ್ತೊಂದು ಹೋರಾಟಕ್ಕೆ ಸಿದ್ದತೆ

ವರ್ಷಾಂತ್ಯದ ಎರಡು ಪ್ರಮುಖ ದಿನಗಳಾದ ಡಿಸೆಂಬರ್ 25ರ ಕ್ರಿಸ್‌ಮಸ್‌ ಮತ್ತು ಡಿಸೆಂಬರ್ 31ರ ಹೊಸ ವರ್ಷದ ಸಂಜೆ (ಮುನ್ನಾದಿನ) ದೇಶದಾದ್ಯಂತ ಪ್ರತಿಭಟನೆ ನಡೆಸಲು ಗಿಗ್ ಕಾರ್ಮಿಕರು ನಿರ್ಧರಿಸಿದ್ದಾರೆ. ಈಗಾಗಲೇ ಡಿಸೆಂಬರ್ 25ರ ಕ್ರಿಸ್‌ಮಸ್‌ ದಿನದಂದು...

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಗುಂಪು ಹತ್ಯೆ : ಘಟನೆಗೆ ಕೋಮು ಆಯಾಮವಿಲ್ಲ ಎಂದ ಮಧ್ಯಂತರ ಸರ್ಕಾರ

ಬಾಂಗ್ಲಾದೇಶದ ರಾಜ್‌ಬರಿ ಜಿಲ್ಲೆಯಲ್ಲಿ ಸುಲಿಗೆ ಯತ್ನದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಗುಂಪೊಂದು ಥಳಿಸಿ ಕೊಂದಿದೆ. ಇದು ಇತ್ತೀಚೆಗೆ ಹಿಂದೂ ವ್ಯಕ್ತಿಯನ್ನು ಗುಂಪು ಹತ್ಯೆ ನಡೆಸಿರುವ ಎರಡನೇ ಘಟನೆಯಾಗಿದೆ. ಆದರೆ, ಅಲ್ಲಿನ ಮಧ್ಯಂತರ ಸರ್ಕಾರ...

ದೆಹಲಿ ವಾಯು ಮಾಲಿನ್ಯದಿಂದ ಸಾಂತಾ ಕ್ಲಾಸ್ ಮೂರ್ಛೆ ಹೋದ ವಿಡಿಯೋ ಹಂಚಿಕೆ : ಎಎಪಿಯ ಸೌರಭ್ ಭಾರದ್ವಾಜ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯದಿಂದ ಸಾಂತಾಕ್ಲಾಸ್ ವೇಷ ಧರಿಸಿದ ಪುರುಷರು ಮೂರ್ಛೆ ಹೋಗುತ್ತಿರುವುದನ್ನು ತೋರಿಸುವ ವಿಡಿಯೋ ಸ್ಕಿಟ್ (ಅಭಿನಯ) ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರಾದ...

ಕ್ರಿಸ್‌ಮಸ್‌ ವೇಳೆ ಶಾಲೆಗೆ ನುಗ್ಗಿ ದಾಂಧಲೆ : ವಿಹೆಚ್‌ಪಿ-ಬಜರಂಗದಳದ ನಾಲ್ವರ ಬಂಧನ

ನಲ್ಬರಿ ಜಿಲ್ಲೆಯ ಶಾಲೆಯೊಂದಕ್ಕೆ ನುಗ್ಗಿ ಕ್ರಿಸ್‌ಮಸ್ ಅಲಂಕಾರವನ್ನು ಧ್ವಂಸ ಮಾಡಿದ, ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಮತ್ತು ಬಜರಂಗದಳದ ನಾಲ್ವರನ್ನು ಅಸ್ಸಾಂ ಪೊಲೀಸರು ಗುರುವಾರ (ಡಿ.25) ಬಂಧಿಸಿದ್ದಾರೆ. ಬಂಧಿತರನ್ನು ವಿಹೆಚ್‌ಪಿ ಜಿಲ್ಲಾ ಕಾರ್ಯದರ್ಶಿ ಭಾಸ್ಕರ್...

ಅಲಿಗಢ ಮುಸ್ಲಿಂ ವಿವಿ ಆವರಣದಲ್ಲಿ ಗುಂಡಿಕ್ಕಿ ಶಿಕ್ಷಕನ ಹತ್ಯೆ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ (ಎಎಂಯು)ದ ಶಿಕ್ಷಕರೊಬ್ಬರನ್ನು ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ (ಡಿ.24) ರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಲ್ಲಿ ಭೀತಿ ಮೂಡಿಸಿದೆ. ಮೃತರನ್ನು ಎಎಂಯುನ ಎಬಿಕೆ ಯೂನಿಯನ್ ಹೈಸ್ಕೂಲ್‌ನ ಶಿಕ್ಷಕ...

ಮತ್ತೊಬ್ಬ ವಲಸೆ ಕಾರ್ಮಿಕನ ಗುಂಪು ಹತ್ಯೆ : ಆರು ಜನರ ಬಂಧನ

ಬುಧವಾರ (ಡಿ.24) ಒಡಿಶಾದ ಸಂಬಾಲ್‌ಪುರದಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ 30 ವರ್ಷದ ವಲಸೆ ಕಾರ್ಮಿಕರೊಬ್ಬರನ್ನು ಗುಂಪು ಹತ್ಯೆ ಮಾಡಲಾಗಿದೆ. ಈ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...

ಉನ್ನಾವೋ ಅತ್ಯಾಚಾರ ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಇಬ್ಬರು ಮಹಿಳಾ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು...

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಪಹಾಸ್ಯ : ಮಾಧ್ಯಮಗಳ ಮುಂದೆ ವ್ಯಂಗ್ಯವಾಗಿ ನಕ್ಕ ಯುಪಿ ಸಚಿವ

ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟಿಸಿದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಓಂ ಪ್ರಕಾಶ್ ರಾಜ್‌ಭರ್ ಅಪಹಾಸ್ಯ ಮಾಡಿದ್ದು, "ಆಕೆಯ ಮನೆ ಉನ್ನಾವೋದಲ್ಲಿರುವಾಗ ದೆಹಲಿಯಲ್ಲಿ ಏಕಿದ್ದಾಳೆ?"...

ಹತ್ಯೆಯ ಕೆಲವೇ ಗಂಟೆಗಳ ಮೊದಲು ನಾನು ಹಮಾಸ್ ಮುಖ್ಯಸ್ಥರನ್ನು ಭೇಟಿಯಾಗಿದ್ದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹತ್ಯೆಯಾಗುವ ಕೆಲವೇ ಗಂಟೆಗಳ ಮೊದಲು ಟೆಹ್ರಾನ್‌ನಲ್ಲಿ ಹಮಾಸ್‌ನ ಮಾಜಿ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಅವರನ್ನು ಭೇಟಿಯಾಗಿದ್ದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಬಹಿರಂಗಪಡಿಸಿದ್ದಾರೆ. ನವದೆಹಲಿಯಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ, ಅಧ್ಯಕ್ಷ...

ಕರ್ನಾಟಕ ಜನಶಕ್ತಿ ಸಕ್ರಿಯ ಕಾರ್ಯಕರ್ತೆ, ಹೋರಾಟದ ಒಡನಾಡಿ ಕೆ.ಪದ್ಮಾ ಇನ್ನಿಲ್ಲ

ಹಿರಿಯ ಹೋರಾಟಗಾರ್ತಿ, ಕರ್ನಾಟಕ ಜನಶಕ್ತಿ ಸಂಘಟನೆಯ ಸಕ್ರಿಯ ಕಾರ್ಯಕರ್ತೆ ಕೆ ಪದ್ಮಾ ಅವರು ಹೋರಾಟದ ಬದುಕನ್ನು ಮುಗಿಸಿದ್ದಾರೆ. ಬುಧವಾರ ರಾತ್ರಿ, ಬೆಂಗಳೂರಿನಲ್ಲಿ ಕೊನೆಯುಸಿಳೆದಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು, ತಮ್ಮನ್ನು ಬಾಧಿಸುತ್ತಿದ್ದ...