Homeಮುಖಪುಟಅನಿರ್ದಿಷ್ಟಾವಧಿ ಉಪವಾಸ ಅಂತ್ಯಗೊಳಿಸಿದ ರೈತ ನಾಯಕ ದಲ್ಲೆವಾಲ್: ಪಂಜಾಬ್ ಸರ್ಕಾರದಿಂದ ಸುಪ್ರೀಂಗೆ ಮಾಹಿತಿ

ಅನಿರ್ದಿಷ್ಟಾವಧಿ ಉಪವಾಸ ಅಂತ್ಯಗೊಳಿಸಿದ ರೈತ ನಾಯಕ ದಲ್ಲೆವಾಲ್: ಪಂಜಾಬ್ ಸರ್ಕಾರದಿಂದ ಸುಪ್ರೀಂಗೆ ಮಾಹಿತಿ

- Advertisement -
- Advertisement -

ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಶುಕ್ರವಾರ (ಮಾ.28) ಬೆಳಿಗ್ಗೆ ನೀರು ಸ್ವೀಕರಿಸಿ ಉಪವಾಸ ಅಂತ್ಯಗೊಳಿಸಿದ್ದಾರೆ ಎಂದು ಪಂಜಾಬ್ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಖಾನೌರಿ ಮತ್ತು ಶಂಭು ಗಡಿಗಳಲ್ಲಿ ಪ್ರತಿಭಟನಾ ನಿರತ ರೈತರನ್ನು ಚದುರಿಸಲಾಗಿದೆ. ಎಲ್ಲಾ ನಿರ್ಬಂಧಿತ ರಸ್ತೆಗಳು ಮತ್ತು ಹೆದ್ದಾರಿಗಳನ್ನು ತೆರೆಯಲಾಗಿದೆ ಎಂದು ಪಂಜಾಬ್ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಗುರ್ಮಿಂದರ್ ಸಿಂಗ್ ಅವರು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರ ಪೀಠಕ್ಕೆ ಮಾಹಿತಿ ನೀಡಿದ್ದಾರೆ.

ದಲ್ಲೆವಾಲ್ ಅವರ ಹೋರಾಟವನ್ನು ಶ್ಲಾಘಿಸಿದ ನ್ಯಾಯಪೀಠ, ಅವರು ಯಾವುದೇ ರಾಜಕೀಯ ಅಜೆಂಡಾ ಇಲ್ಲದ ನಿಜವಾದ ರೈತ ನಾಯಕ ಎಂದು ಶ್ಲಾಘಿಸಿರುವುದಾಗಿ ವರದಿಗಳು ಹೇಳಿವೆ.

“ರೈತರ ಸಮಸ್ಯೆಗಳನ್ನು ಪರಿಹರಿಸುವುದು ಕೆಲವು ಜನರಿಗೆ ಇಷ್ಟವಿಲ್ಲ ಎಂಬುದು ನಮಗೆ ಗೊತ್ತಿದೆ. ನಾವು ದಂತ ಗೋಪುರದಲ್ಲಿ ಕುಳಿತಿಲ್ಲ. ನಮಗೆ ಎಲ್ಲವೂ ತಿಳಿದಿದೆ” ಎಂದು ಹೇಳಿದ ಪೀಠ, ಪಂಜಾಬ್ ಮತ್ತು ಹರಿಯಾಣ ಸರ್ಕಾರಕ್ಕೆ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಸ್ಥಿತಿಗತಿ ವರದಿ ಸಲ್ಲಿಸುವಂತೆ ಸೂಚಿಸಿದೆ.

ರೈತರ ಸಮಸ್ಯೆಗಳನ್ನು ಆಲಿಸಲು ಮತ್ತು ಪೂರಕ ಸ್ಥಿತಿಗತಿ ವರದಿ ಸಲ್ಲಿಸಲು ಮಾಜಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಉನ್ನತಾಧಿಕಾರ ಸಮಿತಿಯನ್ನು ರಚಿಸುವಂತೆಯೂ ಸುಪ್ರೀಂ ಕೋರ್ಟ್ ಆದೇಶಿಸಿದೆ.

ದಲ್ಲೆವಾಲ್‌ ಅವರಿಗೆ ವೈದ್ಯಕೀಯ ನೆರವು ನೀಡುವ ಸುಪ್ರೀಂ ಕೋರ್ಟ್‌ನ ಆದೇಶವನ್ನು ಪಾಲಿಸದಿದ್ದಕ್ಕಾಗಿ ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಪ್ರಕರಣಗಳನ್ನು ಕೋರ್ಟ್ ಕೈಬಿಟ್ಟಿದೆ.

ಮಾರ್ಚ್ 19ರಂದು, ಕೇಂದ್ರ ಸರ್ಕಾರದ ನಿಯೋಗದೊಂದಿಗೆ ಸಭೆ ನಡೆಸಿ ಹಿಂತಿರುಗುತ್ತಿದ್ದಾಗ ಸರ್ವಾನ್ ಸಿಂಗ್ ಪಂಧೇರ್ ಮತ್ತು ದಲ್ಲೆವಾಲ್ ಸೇರಿದಂತೆ ಹಲವು ರೈತ ನಾಯಕರನ್ನು ಪಂಜಾಬ್‌ನ ಮೊಹಾಲಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ನಂತರ, ಪೊಲೀಸರು ಶಂಭು ಮತ್ತು ಖಾನೌರಿ ಗಡಿಗಳಿಂದ ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸಿ, ರೈತರನ್ನು ಅಲ್ಲಿಂದ ಕಳಿಸಿದ್ದಾರೆ. ಕಳೆದ ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ಶಂಭು, ಖಾನೌರಿ ಗಡಿಗಳಲ್ಲಿ ರೈತರು ಪ್ರತಿಭಟಿಸುತ್ತಿದ್ದರು.

ಕಳೆದ ವರ್ಷ ಫೆಬ್ರವರಿ 13ರಂದು ದೆಹಲಿಗೆ ರೈತರು ನಡೆಸುತ್ತಿದ್ದ ಮೆರವಣಿಗೆಯನ್ನು ಭದ್ರತಾ ಪಡೆಗಳು ತಡೆದ ನಂತರ, ಎಸ್‌ಕೆಎಂ ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ ಬ್ಯಾನರ್‌ಗಳ ಅಡಿಯಲ್ಲಿ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿ ಬಿಂದುಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರು.

ಬುಲ್ಡೋಜರ್ ನಿಂದ ರೋಶನ್ ಅಲಿ ಶಾ ಬಾಬಾ ಸಮಾಧಿ ನೆಲಸಮ ಮಾಡಿದ ಜಿಲ್ಲಾಡಳಿತ: ಇಲ್ಲಿಯವರೆಗೆ 550 ಸಮಾಧಿಗಳ ಧ್ವಂಸ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...