Homeಚಳವಳಿರೈತ ನಾಯಕ ದಲ್ಲೆವಾಲ್‌ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ - ಪಂಜಾಬ್ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್...

ರೈತ ನಾಯಕ ದಲ್ಲೆವಾಲ್‌ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ – ಪಂಜಾಬ್ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

- Advertisement -
- Advertisement -

ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಕಳವಳ ವ್ಯಕ್ತಪಡಿಸಿದೆ. ಅವರಿಗೆ ವೈದ್ಯಕೀಯ ನೆರವು ನೀಡುವುದನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪಂಜಾಬ್ ಸರ್ಕಾರಕ್ಕೆ ಸೂಚಿಸಿದೆ. ರೈತ ನಾಯಕ ದಲ್ಲೆವಾಲ್‌

ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರ ರಜಾಕಾಲದ ಪೀಠವು, ಪಂಜಾಬ್ ಸರ್ಕಾರಕ್ಕೆ ದಲ್ಲೆವಾಲ್‌ ಅವರಿಗೆ ವೈದ್ಯಕೀಯ ನೆರವು ನೀಡುವ ಕುರಿತು ಸುಪ್ರಿಂಕೋರ್ಟ್‌ನ ಆದೇಶವನ್ನು ಪಾಲಿಸದಿದ್ದಕ್ಕಾಗಿ ಅದರ ಮುಖ್ಯ ಕಾರ್ಯದರ್ಶಿ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿಯ ಕುರಿತು ನೋಟಿಸ್ ಜಾರಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

”ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಕಠಿಣವಾಗಿ ನಿಭಾಯಿಸಬೇಕಾಗುತ್ತದೆ. ಯಾರಾದಾದರೂ ಪ್ರಾಣಕ್ಕೆ ಕುತ್ತು ಬಂದರೆ ಅದನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ವೈದ್ಯಕೀಯ ನೆರವು ನೀಡಬೇಕಿದೆ. ಆದರೆ ನೀವು ಅದನ್ನು ಅನುಸರಿಸುತ್ತಿಲ್ಲ” ಎಂದು ಪೀಠ ಹೇಳಿದೆ. ಶನಿವಾರದೊಳಗೆ ಅನುಸರಣೆ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದು, ಈ ಪ್ರಕರಣವನ್ನು ಮತ್ತೊಮ್ಮೆ ವಿಚಾರಣೆ ನಡೆಸಲಿದೆ. ರೈತ ನಾಯಕ ದಲ್ಲೆವಾಲ್‌

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಕಾನೂನಾತ್ಮಕ ಖಾತರಿ ಸೇರಿದಂತೆ ರೈತರ ಬೇಡಿಕೆಗಳನ್ನು ಅಂಗೀಕರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ದಲ್ಲೆವಾಲ್ ನವೆಂಬರ್ 26 ರಿಂದ ದೆಹಲಿಯ ಖಾನೌರಿ ಗಡಿಯಲ್ಲಿ ಅನಿರ್ದಿಷ್ಟಾವಧಿ ಉಪವಾಸ ನಡೆಸುತ್ತಿದ್ದಾರೆ.

ದಲ್ಲೆವಾಲ್‌ ಅವರು ನಡೆಸುತ್ತಿರುವ ಉಪವಾಸ 31 ನೇ ದಿನಕ್ಕೆ ಕಾಲಿಟ್ಟಿದ್ದು, ರೈತರ ಮುಷ್ಕರವು ಫೆಬ್ರವರಿ 13 ರಿಂದ ಹರಿಯಾಣ ಪೊಲೀಸರೊಂದಿಗೆ ನಡೆದ ಘರ್ಷಣೆಯೊಂದಿಗೆ ಪ್ರಾರಂಭವಾಗಿತ್ತು. ಈ ವೇಳೆ 500 ಕ್ಕೂ ಹೆಚ್ಚು ರೈತರಿಗೆ ಗಾಯಗಳಾಗಿದ್ದು 34 ಜನರು ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ದಲ್ಲೆವಾಲ್‌ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಅವರ ಕೀಟೋನ್ ಮಟ್ಟಗಳು ಸಾಮಾನ್ಯಕ್ಕಿಂತ 25 ಪಟ್ಟು ಹೆಚ್ಚಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅವರು ಸುಮಾರು 15 ಕೆಜಿ ತೂಕವನ್ನು ಕಳೆದುಕೊಂಡಿದ್ದು, ಹಠಾತ್ ಹೃದಯ ಸ್ತಂಭನ ಅಥವಾ ಬಹು ಅಂಗಾಂಗ ವೈಫಲ್ಯದ ಸಾಧ್ಯತೆಯಿದೆ ಎಂದು ಎಚ್ಚರಿಸಿದ್ದಾರೆ. ಅವರ ಹದಗೆಟ್ಟ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಎಎಪಿ ನಾಯಕರು ಗುರುವಾರ ಅವರನ್ನು ಭೇಟಿಯಾಗಿ ಬೆಂಬಲ ವ್ಯಕ್ತಪಡಿಸಿದ್ದರು.

“ದಲ್ಲೆವಾಲ್ ಈ ಚಳವಳಿಯ ಪ್ರೇರಕ ಶಕ್ತಿ. ಅವರ ಹೋರಾಟ ಸರಿಯಿದ್ದು, ನಾವು ಅವರ ಬೆಂಬಲಕ್ಕೆ ನಿಲ್ಲುತ್ತೇವೆ. ಆದಾಗ್ಯೂ, ಅವರು ಉಪವಾಸ ಸತ್ಯಾಗ್ರಹವನ್ನು ಮುಂದುವರಿಸಲು ಬಯಸಿದರೆ ಕನಿಷ್ಠ ವೈದ್ಯಕೀಯ ಚಿಕಿತ್ಸೆ ಪಡೆಯುವಂತೆ ನಾವು ಅವರನ್ನು ಒತ್ತಾಯಿಸಿದ್ದೇವೆ” ಎಂದು ದೆಹಲಿ ಸಚಿವ ಅರೋರಾ ಹೇಳಿದ್ದಾರೆ.

ಇದನ್ನೂ ಓದಿ: ಬ್ರಹ್ಮಪುತ್ರ ನದಿಗೆ ವಿಶ್ವದ ಅತಿದೊಡ್ಡ ಅಣೆಕಟ್ಟು ಕಟ್ಟಲು ಮುಂದಾದ ಚೀನಾ; ಭಾರತ, ಬಾಂಗ್ಲಾದೇಶದಲ್ಲಿ ಆತಂಕ

ಬ್ರಹ್ಮಪುತ್ರ ನದಿಗೆ ವಿಶ್ವದ ಅತಿದೊಡ್ಡ ಅಣೆಕಟ್ಟು ಕಟ್ಟಲು ಮುಂದಾದ ಚೀನಾ; ಭಾರತ, ಬಾಂಗ್ಲಾದೇಶದಲ್ಲಿ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...