ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ನಡೆಸುತ್ತಿರುವ ಆಮರಣಾಂತ ಉಪವಾಸದ ಗಂಭೀರತೆಗೆ ಪಂಜಾಬ್‌ನ ಎಎಪಿ ಸರ್ಕಾರ ಎಚ್ಚೆತ್ತುಕೊಂಡಿದ್ದು, ಅವರ 30 ದಿನಗಳ ಉಪವಾಸವನ್ನು ಕೈಬಿಡುವಂತೆ ವಿನಂತಿಸಿದೆ. ಪಂಜಾನ್ ಎಎಪಿ ಅಧ್ಯಕ್ಷ ಸಚಿವ ಸಮನ್ ಅರೋರಾ ನೇತೃತ್ವದ ರಾಜ್ಯದ ಸಚಿವ ಸಂಪುಟದ ನಿಯೋಗವು, ಅವರ ಬೇಡಿಕೆಗಳು ನಿಜವಾದವು ಎಂದು ತಿಳಿಸಿದ್ದು, ರೈತರ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಮತ್ತು ಭರವಸೆಗಳನ್ನು ಈಡೇರಿಸದ ಕೇಂದ್ರ ಸರ್ಕಾರವನ್ನು ದೂಷಿಸಿದೆ. ರೈತ ಮುಖಂಡ
ಬುಧವಾರ ಸಂಜೆ ಖಾನೌರಿ ಗಡಿಗೆ ಭೇಟಿ ನೀಡಿದ ಪಕ್ಷದ ನಾಯಕರು, ಸಮಸ್ಯೆಗಳನ್ನು ಪರಿಹರಿಸಲು ಸರ್ವಪಕ್ಷ ಸಭೆಯನ್ನು ಕರೆಯಲು ಎಎಪಿ ಸರ್ಕಾರ ಮುಕ್ತವಾಗಿದೆ ಎಂದು ಹೇಳಿದ್ದಾರೆ. ಅದೇ ವೇಳೆ ಕೇಂದ್ರದ ಅಂಗಳಕ್ಕೆ ಚೆಂಡನ್ನು ಎಸೆದಿರುವ ಅವರು, ಪ್ರಸ್ತುತ ರೈತರ ಪ್ರತಿಭಟನಾ ವಿಷಯ ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದೆ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ದಲ್ಲೆವಾಲ್ ಅವರು ನಡೆಸುತ್ತಿರುವ ಉಪವಾಸ 30 ನೇ ದಿನಕ್ಕೆ ಕಾಲಿಟ್ಟಿದ್ದು, ರೈತರ ಮುಷ್ಕರವು ಫೆಬ್ರವರಿ 13 ರಿಂದ ಹರಿಯಾಣ ಪೊಲೀಸರೊಂದಿಗೆ ನಡೆದ ಘರ್ಷಣೆಯೊಂದಿಗೆ ಪ್ರಾರಂಭವಾಗಿತ್ತು. ಈ ವೇಳೆ 500 ಕ್ಕೂ ಹೆಚ್ಚು ರೈತರಿಗೆ ಗಾಯಗಳಾಗಿದ್ದು 34 ಜನರು ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.
ದಲ್ಲೆವಾಲ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಅವರ ಕೀಟೋನ್ ಮಟ್ಟಗಳು ಸಾಮಾನ್ಯಕ್ಕಿಂತ 25 ಪಟ್ಟು ಹೆಚ್ಚಾಗಿದೆ ಎಂದು ಎಎಪಿ ನಿಯೋಗಕ್ಕೆ ತಿಳಿಸಿದ್ದಾರೆ. ಅವರು ಸುಮಾರು 15 ಕೆಜಿ ತೂಕವನ್ನು ಕಳೆದುಕೊಂಡಿದ್ದು, ಹಠಾತ್ ಹೃದಯ ಸ್ತಂಭನ ಅಥವಾ ಬಹು ಅಂಗಾಂಗ ವೈಫಲ್ಯದ ಸಾಧ್ಯತೆಯಿದೆ ಎಂದು ಎಚ್ಚರಿಸಿದ್ದಾರೆ.
ಅವರ ಹದಗೆಟ್ಟ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಎಎಪಿ ನಾಯಕರು, “ದಲ್ಲೆವಾಲ್ ಈ ಚಳವಳಿಯ ಪ್ರೇರಕ ಶಕ್ತಿ. ಅವರ ಹೋರಾಟ ಸರಿಯಿದ್ದು, ನಾವು ಅವರ ಬೆಂಬಲಕ್ಕೆ ನಿಲ್ಲುತ್ತೇವೆ. ಆದಾಗ್ಯೂ, ಅವರು ಉಪವಾಸ ಸತ್ಯಾಗ್ರಹವನ್ನು ಮುಂದುವರಿಸಲು ಬಯಸಿದರೆ ಕನಿಷ್ಠ ವೈದ್ಯಕೀಯ ಚಿಕಿತ್ಸೆ ಪಡೆಯುವಂತೆ ನಾವು ಅವರನ್ನು ಒತ್ತಾಯಿಸಿದ್ದೇವೆ” ಎಂದು ಸಚಿವ ಅರೋರಾ ಹೇಳಿದ್ದಾರೆ.
ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ವಿಫಲವಾಗಿದೆ ಎಂದು ಟೀಕಿಸಿದ ಅವರು, “ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಮತ್ತು ನೀಡಿದ ಭರವಸೆಗಳನ್ನ ಈಡೇರಿಸದೆ ರೈತರನ್ನು ಇಂತಹ ಸ್ಥಿತಿಗೆ ತಳ್ಳುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಸಾಂತಾ ಕ್ಲಾಸ್ ಬಟ್ಟೆ ತೆಗೆಸಿ ಜೈಶ್ರೀರಾಮ್ ಘೋಷಣೆ ಹೇಳಿಸಿದ ಬಿಜೆಪಿ ಪರ ಸಂಘಟನೆಯ ದುಷ್ಕರ್ಮಿಗಳು
ಸಾಂತಾ ಕ್ಲಾಸ್ ಬಟ್ಟೆ ತೆಗೆಸಿ ಜೈಶ್ರೀರಾಮ್ ಘೋಷಣೆ ಹೇಳಿಸಿದ ಬಿಜೆಪಿ ಪರ ಸಂಘಟನೆಯ ದುಷ್ಕರ್ಮಿಗಳು


