Homeಚಳವಳಿಗಡಿಗಳಿಂದ ರೈತರನ್ನು ಹೊರಹಾಕಲು ಯತ್ನಿಸಿದರೆ, ಸರ್ಕಾರಿ ಕಚೇರಿಗಳು ಮಾರುಕಟ್ಟೆಗಳಾಗುತ್ತವೆ: ರಾಕೇಶ್ ಟಿಕಾಯತ್

ಗಡಿಗಳಿಂದ ರೈತರನ್ನು ಹೊರಹಾಕಲು ಯತ್ನಿಸಿದರೆ, ಸರ್ಕಾರಿ ಕಚೇರಿಗಳು ಮಾರುಕಟ್ಟೆಗಳಾಗುತ್ತವೆ: ರಾಕೇಶ್ ಟಿಕಾಯತ್

- Advertisement -
- Advertisement -

ದೆಹಲಿ ಗಡಿಗಳಿಂದ ಪ್ರತಿಭಟನಾಕಾರರನ್ನು ಬಲವಂತವಾಗಿ ಹೊರಹಾಕಲು ಪ್ರಯತ್ನಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಒಕ್ಕೂಟ ಸರ್ಕಾರಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ.

ರೈತರನ್ನು ಗಡಿಗಳಿಂದ ಹೊರ ಹಾಕಲು ಪ್ರಯತ್ನಿಸಿದರೆ, ದೇಶಾದ್ಯಂತ ಸರ್ಕಾರಿ ಕಚೇರಿಗಳನ್ನು “ಗಲ್ಲಾ ಮಂಡಿಗಳನ್ನಾಗಿ” (ಧಾನ್ಯ ಮಾರುಕಟ್ಟೆಗಳು) ಆಗಿ ಪರಿವರ್ತಿಸಬೇಕಾಗುತ್ತದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ರಾಷ್ಟ್ರೀಯ ವಕ್ತಾರ ರಾಕೇಶ್‌ ಟಿಕಾಯತ್ ಹೇಳಿದ್ದಾರೆ.

ಭಾನುವಾರ ಬೆಳಿಗ್ಗೆ ಟ್ವೀಟ್ ಮಾಡಿರುವ ರಾಕೇಶ್ ಟಿಕಾಯತ್ “ರೈತರನ್ನು ಗಡಿಯಿಂದ ಬಲವಂತವಾಗಿ ಹೊರಹಾಕಲು ಪ್ರಯತ್ನಿಸಿದರೆ, ಅವರು ದೇಶಾದ್ಯಂತ ಇರುವ ಸರ್ಕಾರಿ ಕಚೇರಿಗಳನ್ನು ಗಲ್ಲಾ ಮಂಡಿಯನ್ನಾಗಿ ಪರಿವರ್ತಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಟಿಕ್ರಿ ಗಡಿ ಬಳಿ ದುರ್ಘಟನೆ: ಲಾರಿ ಹರಿದು ಮೂವರು ರೈತ ಮಹಿಳೆಯರ ಸಾವು

ದೆಹಲಿ ಪೊಲೀಸರು ಗಾಜಿಪುರ ಮತ್ತು ಟಿಕ್ರಿ ಗಡಿಯಿಂದ ಸಿಮೆಂಟ್ ಬ್ಲಾಕ್‌ಗಳು ಮತ್ತು ಬ್ಯಾರಿಕೇಡ್‌ಗಳನ್ನು ತೆಗೆದ ಎರಡು ದಿನಗಳ ನಂತರ ಟಿಕಾಯತ್ ಅವರ ಪ್ರತಿಕ್ರಿಯೆ ಬಂದಿದೆ. ರೈತರನ್ನು ಹೊರಹಾಕಲು ಸರ್ಕಾರ ಷಡ್ಯಂತ್ರ ನಡೆಸುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ.

ರೈತರ ಆಂದೋಲನ ಪ್ರಾರಂಭವಾದಾಗಿನಿಂದ 11 ತಿಂಗಳ ಕಾಲ ಈ ಹೆದ್ದಾರಿಗಳನ್ನು ಮುಚ್ಚಲಾಗಿತ್ತು. ಇದರಿಂದ ಹಲವು ಮಂದಿ ಪ್ರಯಾಣಿಕರು ತಮ್ಮ ಪ್ರಯಾಣದ ಸಮಯದಲ್ಲಿ ಅನಾನುಕೂಲತೆಯನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅನಾನುಕೂಲತೆಗೆ ಅಧಿಕಾರಿಗಳೇ ಹೊರತು ಪ್ರತಿಭಟನಾನಿರತ ರೈತರಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ಈ ಹಿಂದೆ ಹೇಳಿತ್ತು.

ಕಳೆದ ಹಲವು ದಿನಗಳಿಂದ ಸರ್ಕಾರ ಷಡ್ಯಂತ್ರ ನಡೆಸುತ್ತಿದೆ ಎಂದು ಬಿಕೆಯು ರಾಷ್ಟ್ರೀಯ ಮಾಧ್ಯಮ ಉಸ್ತುವಾರಿ ಧರ್ಮೇಂದ್ರ ಮಲಿಕ್ ಹೇಳಿದ್ದಾರೆ. ಆದರೆ ಇಂತಹ ಷಡ್ಯಂತ್ರಗಳಿಂದ ರೈತ ಚಳವಳಿಗೆ ಪರಿಹಾರ ಸಿಗುವುದಿಲ್ಲ. ನ.6ರಂದು ಸಿಂಘು ಗಡಿ ಭಾಗದ ರೈತರ ಬೃಹತ್ ಸಮಾವೇಶದಲ್ಲಿ ಮುಂದಿನ ಕಾರ್ಯತಂತ್ರದ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ: ದೆಹಲಿ ಗಡಿಗಳಲ್ಲಿ ಬ್ಯಾರಿಕೇಡ್‌ ತೆರವುಗೊಳಿಸುತ್ತಿರುವ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಅಲಿಗಢದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...