Homeಚಳವಳಿರೈತ ನಾಯಕ ರಾಕೇಶ್ ಟಿಕಾಯತ್ ಅವರನ್ನು ವಶಕ್ಕೆ ಪಡೆದ ಉತ್ತರ ಪ್ರದೇಶ ಪೊಲೀಸ್!

ರೈತ ನಾಯಕ ರಾಕೇಶ್ ಟಿಕಾಯತ್ ಅವರನ್ನು ವಶಕ್ಕೆ ಪಡೆದ ಉತ್ತರ ಪ್ರದೇಶ ಪೊಲೀಸ್!

- Advertisement -
- Advertisement -

ದೆಹಲಿಗೆ ತೆರಳುತ್ತಿದ್ದ ಹಿರಿಯ ರೈತ ಮುಖಂಡ ರಾಕೇಶ್ ಟಿಕಾಯತ್ ಅವರನ್ನು ಬುಧವಾರ ಅಲಿಗಢದಲ್ಲಿ ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ತನ್ನನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ರಾಕೇಶ್ ಟಿಕಾಯತ್, “ನಮ್ಮನ್ನು ಅವರು ಎಲ್ಲಿಗೆ ಕರೆದೊಯ್ಯುತ್ತಿದ್ದಾರೆ ಎಂಬುದು ನಮಗೆ ತಿಳಿದಿಲ್ಲ” ಎಂದು ಹೇಳಿದ್ದಾರೆ. ರೈತ ನಾಯಕ ರಾಕೇಶ್

“ಇಂದು ಸಂಜೆಯವರೆಗೆ ಸರ್ಕಾರದ ಪ್ರತಿಕ್ರಿಯೆಗೆ ನಾವು ಕಾಯುತ್ತೇವೆ. ನಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ, ಪರಿಹಾರ ಕಂಡುಕೊಳ್ಳದಿದ್ದರೆ ನಾವು ಲಕ್ನೋನಿಂದ ಟ್ರಾಕ್ಟರ್ ರ‍್ಯಾಲಿ ನಡೆಸಲಿದ್ದೇವೆ” ಎಂದು ಅವರು ಬಂಧನದ ವೇಳೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸರ್ಕಾರ ಸ್ವಾಧೀನಪಡಿಸಿಕೊಂಡಿರುವ ಭೂಮಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ರೈತರು ಮೆರವಣಿಗೆ ನಡೆಸುತ್ತಿದ್ದಾಗ ದಲಿತ ಪ್ರೇರಣಾ ಸ್ಥಳದ ಬಳಿ ಪೊಲೀಸರು ತಡೆದಿದ್ದರಿಂದ ಧರಣಿ ಮಾಡಿದ್ದಾರೆ.

ಮಂಗಳವಾರ ಪ್ರತಿಭಟನಾ ನಿರತ 160 ರೈತರನ್ನು ಬಂಧಿಸಲಾಗಿತ್ತು. ನೋಯ್ಡಾದ ‘ದಲಿತ ಪ್ರೇರಣಾ ಸ್ಥಳ’ದಲ್ಲಿ ಧರಣಿ ನಡೆಸುತ್ತಿದ್ದ ಭಾರತೀಯ ಕಿಸಾನ್ ಪರಿಷತ್ತಿನ ಅಧ್ಯಕ್ಷ ಸುಖಬೀರ್ ಯಾದವ್ ‘ಖಲೀಫಾ’ ಸೇರಿದಂತೆ 160 ಕ್ಕೂ ಹೆಚ್ಚು ಪ್ರತಿಭಟನಾ ನಿರತ ರೈತರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ರೈತ ನಾಯಕ ರಾಕೇಶ್

 

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕರೆಯ ಮೇರೆಗೆ ಸೋಮವಾರ ಉತ್ತರ ಪ್ರದೇಶದ ವಿವಿಧ ಭಾಗಗಳಿಂದ ಗೌತಮ್ ಬುದ್ಧ ನಗರದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಒಂದು ವಾರದೊಳಗೆ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಷ್ಟ್ರ ರಾಜಧಾನಿಗೆ ತಮ್ಮ ಮೆರವಣಿಗೆಯನ್ನು ಪುನರಾರಂಭಿಸುವುದಾಗಿ ಬೆದರಿಕೆ ಹಾಕಿದರು.

ಪೊಲೀಸರ ಕ್ರಮವನ್ನು ಖಂಡಿಸಿದ ಎಸ್‌ಕೆಎಂ ಶಾಂತಿಯುತ ಪ್ರತಿಭಟನೆ ವೇಳೆ ಸಂವಿಧಾನದ ಹಕ್ಕುಗಳ ಉಲ್ಲಂಘನೆಯಾಗಿದೆ ಮತ್ತು ನ್ಯಾಯಾಂಗವು ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದೆ. ರೈತರು ನೀಡಿರುವ ಸಾಮೂಹಿಕ ಹೇಳಿಕೆಯಲ್ಲಿ, ಪೊಲೀಸರು “ನೂರಕ್ಕೂ ಹೆಚ್ಚು ಮಹಿಳೆಯರು ಸೇರಿದಂತೆ ನೂರಾರು ರೈತರನ್ನು” ಬಂಧಿಸಿದ್ದಾರೆ ಮತ್ತು ಪ್ರತಿಭಟನಾ ಸ್ಥಳದಿಂದ ಬಲವಂತವಾಗಿ ಹೊರಹಾಕಿದ್ದಾರೆ ಎಂದು ಹೇಳಿದ್ದಾರೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಸೆಕ್ಷನ್ 170 ರ ಅಡಿಯಲ್ಲಿ ಮಧ್ಯಾಹ್ನ 1.30 ರ ಸುಮಾರಿಗೆ 160 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಕಮಿಷನರ್ (ಕಾನೂನು ಮತ್ತು ಸುವ್ಯವಸ್ಥೆ) ಶಿವ ಹರಿ ಮೀನಾ ತಿಳಿಸಿದ್ದಾರೆ.

ಇದನ್ನೂ ಓದಿ: ಸಂಭಾಲ್ ನಂತರ ಮತ್ತೊಂದು ವಿವಾದ: ಜಾಮಾ ಮಸೀದಿಯ ಮಾಲೀಕತ್ವಕ್ಕಾಗಿ ನ್ಯಾಯಾಲಯದ ಮೊರೆ

ಸಂಭಾಲ್ ನಂತರ ಮತ್ತೊಂದು ವಿವಾದ: ಜಾಮಾ ಮಸೀದಿಯ ಮಾಲೀಕತ್ವಕ್ಕಾಗಿ ನ್ಯಾಯಾಲಯದ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...