Homeಚಳವಳಿಪ್ರತಿಭಟನೆಗೆ ಸಿದ್ದರಾದ ರೈತ ನಾಯಕರನ್ನು ಗೃಹಬಂಧನದಲ್ಲಿರಿಸಿದ ಪಂಜಾಬ್ ಸರ್ಕಾರ!

ಪ್ರತಿಭಟನೆಗೆ ಸಿದ್ದರಾದ ರೈತ ನಾಯಕರನ್ನು ಗೃಹಬಂಧನದಲ್ಲಿರಿಸಿದ ಪಂಜಾಬ್ ಸರ್ಕಾರ!

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ (SKM ರಾಜಕೀಯೇತರ) ಘೋಷಿಸಿದ್ದ ಶಂಭು ಪೊಲೀಸ್ ಠಾಣೆಯ ಹೊರಗೆ ಮಂಗಳವಾರ ಯೋಜಿಸಿದ ಪ್ರತಿಭಟನೆಯ ಮುನ್ನಾದಿನ ಪಂಜಾಬ್ ಪೊಲೀಸರು, ಜಗಜಿತ್ ಸಿಂಗ್ ದಲ್ಲೆವಾಲ್ ಸೇರಿದಂತೆ ಹಿರಿಯ ರೈತ ಮುಖಂಡರು ಮತ್ತು ಹೋರಾಟಗಾರರನ್ನು ಗೃಹಬಂಧನದಲ್ಲಿ ಇರಿಸಿದ್ದಾರೆ ಎಂದು TNIE ವರದಿ ಮಾಡಿದೆ. ಮಾರ್ಚ್ 19 ರಂದು ಶಂಭು ಮತ್ತು ಖಾನೌರಿ ಗಡಿಗಳಲ್ಲಿ ನಡೆದ ಪೊಲೀಸ್ ಕಾರ್ಯಾಚರಣೆಯಲ್ಲಿ ರೈತರು ಗಾಯಗೊಂಡಿದ್ದಾರೆ ಎಂದು ಆರೋಪಿಸಿ ಈ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಗೆ ಸಿದ್ದರಾದ

ಸೋಮವಾರ ಮುಂಜಾನೆ ಪೊಲೀಸ್ ತಂಡವೊಂದು ಫರೀದ್‌ಕೋಟ್‌ನಲ್ಲಿರುವ ದಲ್ಲೆವಾಲ್ ಅವರ ಗ್ರಾಮವನ್ನು ತಲುಪಿದೆ ಎಂದು ಮೂಲಗಳು ತಿಳಿಸಿವೆ. ಕನಿಷ್ಠ ಮೂರರಿಂದ ನಾಲ್ಕು ದಿನಗಳ ಕಾಲ ಮನೆಯೊಳಗೆ ಇರಲು ಅವರು ಕೇಳಿಕೊಂಡಿದ್ದಾರೆ. ಇದರ ನಂತರ, ಪೊಲೀಸ್ ಕ್ರಮವನ್ನು ಟೀಕಿಸಿ ತನ್ನ ಬಂಧನದ ಬಗ್ಗೆ ಅವರು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾರೆ.

ಖನೌರಿ ಮತ್ತು ಶಂಭುವಿನಿಂದ ಪೊಲೀಸರು ರೈತರನ್ನು ಬಲವಂತವಾಗಿ ಹೊರಹಾಕಿದಾಗ, ಅವರು ಪೊಲೀಸರಿಂದ ತೊಂದರೆಗೆ ಒಳಗಾಗಿದ್ದಾರೆ ಮತ್ತು ಟ್ರ್ಯಾಕ್ಟರ್‌ಗಳು ಸೇರಿದಂತೆ ಅವರ ಹಲವಾರು ವಸ್ತುಗಳು ಕಾಣೆಯಾಗಿವೆ ಎಂದು ದಲ್ಲೆವಾಲ್ ಆರೋಪಿಸಿದ್ದಾರೆ. ಇದರ ನಂತರ ಸರ್ಕಾರ ಪರಿಹಾರವನ್ನು ಭರವಸೆ ನೀಡಿತು.

ಕಾಣೆಯಾದ ವಸ್ತುಗಳನ್ನು ಅಂತಿಮವಾಗಿ “ಎಎಪಿ ನಾಯಕರು ಮತ್ತು ಪೊಲೀಸ್ ಸಿಬ್ಬಂದಿಯ ಆಪ್ತ ಸಹಚರರ ಬಳಿ ಪತ್ತೆಹಚ್ಚಲಾಗಿದೆ” ಎಂದು ಅವರು ಹೇಳಿದ್ದಾರೆ. “ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬದಲು, ಪೊಲೀಸರು ರೈತರ ಕಾಣೆಯಾದ ವಸ್ತುಗಳನ್ನು ಪತ್ತೆಹಚ್ಚಿದವರ ವಿರುದ್ಧವೆ ಪ್ರಕರಣ ದಾಖಲಿಸಲು ಪ್ರಾರಂಭಿಸಿದರು” ಎಂದು ಅವರು ಹೇಳಿದ್ದಾರೆ. ಅದಕ್ಕಾಗಿಯೇ “ನಾವು ಮೇ 6 ರಂದು ಪೊಲೀಸರ ವರ್ತನೆಯ ವಿರುದ್ಧ ಆಂದೋಲನವನ್ನು ಯೋಜಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಸರ್ಕಾರವು ನಮ್ಮ ಆಂದೋಲನವನ್ನು ಹಳಿತಪ್ಪಿಸಲು ಪ್ರಯತ್ನಿಸಿದೆ ಎಂದು ರೈತ ಮುಖಂಡರು ಹೇಳಿದ್ದಾರೆ. ಭಾರತೀಯ ಕಿಸಾನ್ ಯೂನಿಯನ್ (ದೋಬಾ) ಅಧ್ಯಕ್ಷ ಮಂಜಿತ್ ಸಿಂಗ್ ರೈ ಮತ್ತು ಇತರ ಪದಾಧಿಕಾರಿಗಳಾದ ದವೀಂದರ್ ಸಿಂಗ್ ಸಂಧ್ವಾನ್ ಮತ್ತು ಸತ್ನಮ್ ಸಿಂಗ್ ಸಾಹ್ನಿ ಅವರನ್ನು ಸಹ ಗೃಹಬಂಧನದಲ್ಲಿ ಇರಿಸಲಾಯಿತು ಎಂದು ವರದಿಯಾಗಿದೆ. ಬಲದೇವ್ ಸಿಂಗ್ ಸಿರ್ಸಾ ಅವರಂತಹ ನಾಯಕರೂ ಸಹ ಗೃಹಬಂಧನದಲ್ಲಿದ್ದಾರೆ ಎಂದು ಅದು ಹೇಳಿದೆ.

ರೈತ ಮುಖಂಡರ ಬಂಧನಗಳ ನಂತರ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ, “ರಸ್ತೆಗಳು ಅಥವಾ ರೈಲುಮಾರ್ಗಗಳನ್ನು ನಿರ್ಬಂಧಿಸುವುದು ಅಥವಾ ಸಾರ್ವಜನಿಕರಿಗೆ ಅನಾನುಕೂಲತೆಯನ್ನು ಉಂಟುಮಾಡುವುದು ಮತ್ತು ದೈನಂದಿನ ಜೀವನವನ್ನು ಅಸ್ತವ್ಯಸ್ತಗೊಳಿಸುವುದನ್ನು ಒಳಗೊಂಡಂತೆ ಯಾವುದೇ ಘೋಷಣೆಗಳು, ಪ್ರತಿಭಟನೆಗಳು ಅಥವಾ ಮುಷ್ಕರಗಳನ್ನು ಸಾರ್ವಜನಿಕರ ವಿರುದ್ಧದ ಕೃತ್ಯಗಳೆಂದು ಪರಿಗಣಿಸಲಾಗುತ್ತದೆ” ಎಂದು ಹೇಳಿದ್ದಾರೆ.

ಎಲ್ಲಾ ಸಂಘಟನೆಗಳು, ಒಕ್ಕೂಟಗಳು ಮತ್ತು ಗುಂಪುಗಳು ಇದನ್ನು ಪರಗಣಿಸುವಂತೆ ಸೂಚಿಸಲಾಗಿದೆ. ವಿರೋಧ ವ್ಯಕ್ತಪಡಿಸಲು ಇತರ ಮಾರ್ಗಗಳಿವೆ, ಆದರೆ ಜನರಿಗೆ ತೊಂದರೆ ಮಾಡುವುದು ಸರಿಯಲ್ಲ. ಜನರಿಗೆ ತೊಂದರೆ ಮಾಡಿದರೆ ಕಠಿಣ ಕಾನೂನು ಕ್ರಮಕ್ಕೆ ಸಿದ್ಧರಾಗಿರಿ. ಪಂಜಾಬ್‌ನ ಶ್ರಮಶೀಲ ಜನರ ಹಿತದೃಷ್ಟಿಯಿಂದ ಇದನ್ನು ಹೊರಡಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಪ್ರತಿಭಟನೆಗೆ ಸಿದ್ದರಾದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕ್ ನಟನ ‘ಅಬೀರ್ ಗುಲಾಲ್’ ಚಿತ್ರ ನಿಷೇಧ: ‘ದಿ ಕಾಶ್ಮೀರ್ ಫೈಲ್ಸ್’ ತೊಂದರೆಯಿಲ್ಲದೆ ಬಿಡುಗಡೆಯಾಗುತ್ತೆ ಎಂದ ಪ್ರಕಾಶ್ ರಾಜ್

ಪಾಕ್ ನಟನ ‘ಅಬೀರ್ ಗುಲಾಲ್’ ಚಿತ್ರ ನಿಷೇಧ: ‘ದಿ ಕಾಶ್ಮೀರ್ ಫೈಲ್ಸ್’ ತೊಂದರೆಯಿಲ್ಲದೆ ಬಿಡುಗಡೆಯಾಗುತ್ತೆ ಎಂದ ಪ್ರಕಾಶ್ ರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...