Homeಮುಖಪುಟಹೋರಾಟ ತೀವ್ರಗೊಳಿಸಲು ಉಪವಾಸ ಸತ್ಯಾಗ್ರಹ ಆರಂಭಿಸಿದ ರೈತ ಮುಖಂಡರು: 10 ಅಂಶಗಳು

ಹೋರಾಟ ತೀವ್ರಗೊಳಿಸಲು ಉಪವಾಸ ಸತ್ಯಾಗ್ರಹ ಆರಂಭಿಸಿದ ರೈತ ಮುಖಂಡರು: 10 ಅಂಶಗಳು

ದೆಹಲಿಯಲ್ಲಿ ಹೋರಾಟ ಆರಂಭವಾದಾಗಿನಿಂದ ಇದುವರೆಗೆ ರೈತ ಮುಖಂಡರು ಮತ್ತು ಕೇಂದ್ರ ಸಚಿವರೊಂದಿಗೆ 5 ಸುತ್ತಿನ ಮಾತುಕತೆ ನಡೆದಿದೆ. ಆದರೆ ಅವೆಲ್ಲವೂ ವಿಫಲವಾಗಿವೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನೂರಾರು ರೈತ ಸಂಘಟನೆಗಳು ನಡೆಸುತ್ತಿರುವ ಹೋರಾಟ 19ನೇ ದಿನಕ್ಕೆ ಕಾಲಿಟ್ಟಿದೆ. ನವೆಂಬರ್ 26-27 ರಂದು ದೆಹಲಿ ಚಲೋ ನಡೆಸುವುದಾಗಿ ರೈತರು ಘೋಷಿಸಿದ್ದರು. ಆದರೆ ಕೇಂದ್ರ ಸರ್ಕಾರದ ಅಡಿಯಲ್ಲಿರುವ ದೆಹಲಿ ಪೊಲೀಸ್ ಅವರನ್ನು ದೆಹಲಿ ಗಡಿಗಳಲ್ಲಿಯೇ ತಡೆದಿತ್ತು. ಹೋರಾಟನಿರತ ರೈತರ ಮೇಲೆ ಲಾಠೀ ಚಾರ್ಜ್ ಮಾಡಿ, ಜಲಫಿರಂಗಿ ಮತ್ತು ಅಶ್ರುವಾಯು ಸಿಡಿಸಿತ್ತು. ಇದರಿಂದ ಕ್ರೋಧಗೊಂಡ ರೈತರು ಸರ್ಕಾರ ಈ ವಿವಾದಾತ್ಮಕ ಕಾಯ್ದೆಗಳನ್ನು ವಾಪಸ್ ಪಡೆಯುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದಿದೆ. ರಸ್ತೆ ತಡೆ, ಭಾರತ್ ಬಂದ್ ನಡೆಸಿರುವ ರೈತರು ಹೋರಾಟ ತೀವ್ರಗೊಳಿಸಲು ಇಂದು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

  1. ಕೇಂದ್ರ ಸಚಿವರೊಂದಿಗೆ ಮಾತುಕತೆ ನಡೆಸುತ್ತಿರುವ 33 ಪ್ರಮುಖ ರೈತ ಸಂಘಟನೆಗಳ ಮುಖಂಡರು ಇಂದು ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ತಾವು ಹೊರಾಟ ನಡೆಸುತ್ತಿರುವ ಗಡಿಗಳಲ್ಲಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದಾರೆ.
  2. ರೈತರ ಹೋರಾಟಕ್ಕೆ ಬೆಂಬಲ ಸೂಚಿಸುವ ಸಲುವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಹ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಅಲ್ಲದೇ ತಮ್ಮ ಪಕ್ಷದ ಎಲ್ಲಾ ಕಾರ್ಯಕರ್ತರು ಸಹ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲು ಕರೆ ನೀಡಿದ್ದಾರೆ.
  3. ಈ 3 ಕೃಷಿ ಕಾಯ್ದೆಗಳು ಬೇಡ. ಬದಲಿಗೆ ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಕಾಯ್ದೆ ಬೇಕು ಎಂದು ಕೇಳುತ್ತಿದ್ದೇವೆ. ಆದರೆ ಕೇಂದ್ರ ಈ ವಿಚಾರದಲ್ಲಿ ರೈತರ ದಾರಿ ತಪ್ಪಿಸುತ್ತಿದೆ. ಡಿಸೆಂಬರ್ 8 ರಂದು ನಡೆದ ಸಭೆಯಲ್ಲಿ ಗೃಹ ಸಚಿವ ಅಮಿತ್‌ ಶಾ ‘ಎಲ್ಲಾ 23 ಬೆಳೆಗಳನ್ನು ಎಂಎಸ್‌ಪಿ ನೀಡಿ ಕೊಂಡುಕೊಳ್ಳಲು ಸಾಧ್ಯವಿಲ್ಲ, ಇದರಿಂದ ಕೇಂದ್ರಕ್ಕೆ 17 ಲಕ್ಷ ಕೋಟಿ ಹೊರೆಯಾಗುತ್ತದೆ’ ಎಂದು ಹೇಳಿದ್ದಾರೆ ಎಂದು ಹರಿಯಾಣದ ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ಗುರ್ನಮ್ ಸಿಂಗ್ ಚಾದುನಿ ಹೇಳಿದ್ದಾರೆ.
  4. ಈಗಿರುವ ಬೆಲೆಗೆ ಬೆಳೆಗಳನ್ನು ಕೊಂಡುಕೊಂಡು ಅದನ್ನು ಎಂಎಸ್‌ಪಿ ಎಂದು ಕರೆಯಲು ಕೇಂದ್ರ ಸರ್ಕಾರ ಹೊರಟಿದೆ. ಅಲ್ಲದೇ ಎಲ್ಲಾ ರಾಜ್ಯಗಳಿಂದ ಎಂಎಸ್‌ಪಿ ನೀಡಿ ಬೆಳೆಗಳನ್ನು ಕೊಂಡುಕೊಳ್ಳಲು ಕೇಂದ್ರ ಹಿಂದೇಟು ಹಾಕುತ್ತಿದೆ. ಇದು ನಮಗೆ ಒಪ್ಪಿಗೆಯಿಲ್ಲ. ಹಾಗಾಗಿ ನಾವು ಹೋರಾಟ ಮುಂದುವರೆಸುತ್ತೇವೆ ಎಂದು ಗುರ್ನಮ್ ಸಿಂಗ್ ಚಾದುನಿ ಹೇಳಿದ್ದಾರೆ.
  5. ದೆಹಲಿಯಲ್ಲಿ ಹೋರಾಟ ಆರಂಭವಾದಾಗಿನಿಂದ ಇದುವರೆಗೆ ರೈತ ಮುಖಂಡರು ಮತ್ತು ಕೇಂದ್ರ ಸಚಿವರೊಂದಿಗೆ 5 ಸುತ್ತಿನ ಮಾತುಕತೆ ನಡೆದಿದೆ. ಆದರೆ ಅವೆಲ್ಲವೂ ವಿಫಲವಾಗಿವೆ. ಡಿಸೆಂಬರ್ 9 ರಂದು 6ನೇ ಸುತ್ತಿನ ಮಾತುಕತೆ ನಡೆಯಬೇಕಿತ್ತು. ಆದರೆ ರೈತ ಮುಖಂಡರು ಅದನ್ನು ಬಾಯ್ಕಾಟ್ ಮಾಡಿದ್ದಾರೆ.
  6. ದೆಹಲಿಯ ರೈತರ ಹೋರಾಟ ಬೆಂಬಲಿಸಲು ರಾಜಸ್ಥಾನದಿಂದ ಸಾವಿರಾರು ರೈತರು ದೆಹಲಿಯತ್ತ ಹೊರಟಿದ್ದಾರೆ. ನೂರಾರು ಟ್ರಕ್‌ಗಳಲ್ಲಿ ಹೋರಾಟ ರೈತರನ್ನು ಹರಿಯಾಣದ ಹಲವೆಡೆ ತಡೆಯಲಾಗಿದೆ ಎಂದು ರೈತರು ಆರೋಪಿಸಿದ್ದಾರೆ.
  7. ರೈತರ ಹೋರಾಟದಿಂದ ಔಷಧಿ ಪೂರೈಕೆಗೆ ವ್ಯತ್ಯಯ ಉಂಟಾಗಿದೆ. ಹಾಗಾಗಿ ಹೆದ್ದಾರಿ ಬಂದ್ ಮಾಡಿರುವುದನ್ನು ನಿಲ್ಲಿಸಿ ರೈತರನ್ನು ಅಲ್ಲಿಂದ ತೆರವುಗೊಳಿಸಬೇಕೆಂದು ಸಲ್ಲಿಕೆಯಾಗಿರುವ ಪಿಐಎಲ್‌ ಅನ್ನು ಡಿಸೆಂಬರ್ 16 ರಂದು ಆಲಿಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.
  8. ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ, ರೈತರು ನಡೆಸುತ್ತಿರುವ ಪ್ರತಿಭಟನೆಯ ಲಾಭವನ್ನು “ಟುಕ್ಡೆ-ಟುಕ್ಡೆ ಗ್ಯಾಂಗ್” ಪಡೆಯಲು ಯತ್ನಿಸುತ್ತಿದೆ ಎಂದು ಕೇಂದ್ರ ಸಚಿವ ರವಿ ಶಂಕರ್‌ ಪ್ರಸಾದ್ ಹೇಳಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
  9. ದೇಶಕ್ಕೆ ಅನ್ನ ನೀಡುವ ರೈತರನ್ನು ದೇಶದ್ರೋಹಿಗಳು, ಭಯೋತ್ಪಾದಕರು ಎಂದು ಕರೆಯುವುದು ನಮ್ಮ ಸಂಸ್ಕೃತಿಯಲ್ಲ. ದೇಶವನ್ನು ತುಘಲಕ್ ರೀತಿಯಲ್ಲಿ ಆಳಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಕಿಡಿಕಾರಿದ್ದಾರೆ.
  10. ರೈತರ ದಿಟ್ಟ ಹೋರಾಟಕ್ಕೆ ದೇಶ-ವಿದೇಶಗಳಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ರೈತರ ಹೋರಾಟ ಬೆಂಬಲಿಸಿ ನಿನ್ನೆ ಪಂಜಾಬ್‌ನ ಕಾರಾಗೃಹಗಳ ಡಿಐಜಿ ಲಖ್ವಿಂದರ್ ಜಖರ್ ರಾಜೀನಾಮೆ ನೀಡಿದ್ದಾರೆ. “ನಾನು ಮೊದಲು ರೈತ, ನಂತರ ಪೊಲೀಸ್ ಅಧಿಕಾರಿ. ಇಂದು ನನಗೆ ಯಾವುದೇ ಸ್ಥಾನ ಸಿಕ್ಕಿದ್ದರೂ, ಅದಕ್ಕೆ ಕಾರಣ ನನ್ನ ತಂದೆ ಹೊಲಗಳಲ್ಲಿ ಕೃಷಿಕರಾಗಿ ಕೆಲಸ ಮಾಡಿದ್ದು” ಎಂದಿದ್ದಾರೆ. ವಿಶ್ವದ ಅತ್ಯಂತ ಕಿರಿಯ ಪರಿಸರ ಹೋರಾಟಗಾರ್ತಿ ಲಿಸಿಪ್ರಿಯಾ ಕಂಗುಜಾಮ್ ಸಹ ಬೆಂಬಲ ನೀಡಿದ್ದಾರೆ.

ಇದನ್ನೂ ಓದಿ: ರೈತರ ಪ್ರತಿಭಟನೆ ಬೆಂಬಲಿಸಲು ರಾಜೀನಾಮೆ ನೀಡಿದ ಪಂಜಾಬ್ ಡಿಐಜಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...