Homeಕರ್ನಾಟಕ'ಬೆಳೆಸಾಲಮನ್ನಾ ಸಹಾಯವಾಣಿ' ಆರಂಭಿಸಿದ್ದೇನೆ: ಎಚ್‌.ಡಿ ಕುಮಾರಸ್ವಾಮಿ

‘ಬೆಳೆಸಾಲಮನ್ನಾ ಸಹಾಯವಾಣಿ’ ಆರಂಭಿಸಿದ್ದೇನೆ: ಎಚ್‌.ಡಿ ಕುಮಾರಸ್ವಾಮಿ

9164305868 ನಂಬರ್ ಗೆ ಬೆಳಗ್ಗೆ 10 ರಿಂದ 5 ರವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡೆಯಬಹುದು ಎಂದು ಮಾಜಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರು ರೈತರ ನೆರವಿಗಾಗಿ ‘ಬೆಳೆಸಾಲಮನ್ನಾ ಸಹಾಯವಾಣಿ’ ಆರಂಭಿಸಿದ್ದಾರೆ. ಈ ಕುರಿತು ಸ್ವತಃ ಅವರೇ ಮಾಹಿತಿ ನೀಡಿದ್ದಾರೆ.

ಪ್ರತಿ ದಿನ ನೂರಾರು ರೈತರು ತಮ್ಮ ಬೆಳೆಸಾಲಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ನನ್ನ ಮನೆಗೆ ಬರುತ್ತಿದ್ದಾರೆ. ದೂರದೂರಿನಿಂದ ಬರುವ ರೈತರಿಗೆ ಕಷ್ಟವಾಗಬಾರದೆಂದು ನಾನು ರೈತರ ‘ಬೆಳೆಸಾಲಮನ್ನಾ ಸಹಾಯವಾಣಿ’ ಆರಂಭಿಸಿದ್ದೇನೆ. ರೈತರು ತಮ್ಮ ಮನೆಯಿಂದಲೇ 9164305868 ನಂಬರ್ ಗೆ ಬೆಳಗ್ಗೆ 10 ರಿಂದ 5 ರವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡೆಯಬಹುದು ಎಂದು ಮಾಜಿ ಮುಖ್ಯಮಂತ್ರಿಗಳು ತಮ್ಮ ಟ್ವಿಟ್ಟರ್‌ ಮೂಲಕ ಸ್ಪಷ್ಟಪಡಿಸಿದ್ದಾರೆ.

ಕುಮಾರಸ್ವಾಮಿಯವರ ಅವಧಿಯಲ್ಲಿ ಬೆಳೆಸಾಲಮನ್ನಾ ಘೋಷಿಸಿದ್ದರು. ಅದು ಜಾರಿಯಾಗುತ್ತಿದೆ. ಆದರೆ ಈ ವಿಚಾರದಲ್ಲಿ ಕೆಲವು ಗೊಂದಲಗಳುಂಟಾಗಿವೆ. ಹಾಗಾಗಿ ರೈತರು ನೇರವಾಗಿ ಕುಮಾರಸ್ವಾಮಿಯವರ ಮನೆಗೆ ಹೋಗಿ ಕಾಯಬೇಕಾಗಿತ್ತು. ಅದೆಲ್ಲದಕ್ಕೂ ಈಗ ಸಹಾಯವಾಣಿ ಆರಂಭವಾದ್ದರಿಂದ ಪರಿಹಾರ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್, ಕೆ. ಕವಿತಾಗೆ ನೋ ರಿಲೀಫ್‌: ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

0
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು...