Homeಕರ್ನಾಟಕರೈತ ಹುತಾತ್ಮ ದಿನ ಆಚರಣೆ: ಬೆಂಗಳೂರಿನಲ್ಲಿ ಅನ್ನದಾತರ ಮಕ್ಕಳಿಂದ ಶ್ರದ್ಧಾಂಜಲಿ

ರೈತ ಹುತಾತ್ಮ ದಿನ ಆಚರಣೆ: ಬೆಂಗಳೂರಿನಲ್ಲಿ ಅನ್ನದಾತರ ಮಕ್ಕಳಿಂದ ಶ್ರದ್ಧಾಂಜಲಿ

"ಸಿಖ್‌ ರೈತರು ವರ್ಸಸ್‌ ಹಿಂದೂಗಳು ಎಂದು ಬಿಂಬಿಸಲು ಯತ್ನಿಸಿದ ಯುಪಿ ಸರ್ಕಾರದ ಪ್ರಯತ್ನ ವಿಫಲ"

- Advertisement -
- Advertisement -

ಅಕ್ಟೋಬರ್‌‌ 3ರಂದು ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ರೈತರನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಸಂಯುಕ್ತಾ ಕಿಸಾನ್‌ ಮೋರ್ಚಾ ಕರೆ ನೀಡಿದ್ದ ‘ರೈತ ಹುತಾತ್ಮ ದಿನ ಆಚರಣೆ’ಗೆ ಅನ್ನದಾತರ ಮಕ್ಕಳು ಬೆಂಗಳೂರಿನಲ್ಲೂ ಸ್ಪಂದಿಸಿದರು.

ನಗರದ ಮೌರ್ಯ ವೃತ್ತದಲ್ಲಿ ಸೇರಿದ ರೈತ ಮಕ್ಕಳು, ಮೇಣದ ಬತ್ತಿ ಹಿಡಿದು ಹುತಾತ್ಮ ರೈತರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ಈ ಸಂದರ್ಭದಲ್ಲಿ ರೈತ ನಾಯಕಿ ಕವಿತಾ ಕುರುಗಂಟಿ  ಮಾತನಾಡಿ, “ಬಿಜೆಪಿ ಹಿಂಸಾಚಾರವನ್ನು ಸೃಷ್ಟಿಸಿ ರೈತರ ಹೋರಾಟವನ್ನು ಮುಗಿಸಲು ಯತ್ನಿಸುತ್ತಿದೆ. ಕೋಮು ಗಲಭೆಯನ್ನು ಸೃಷ್ಟಿಸಲು ಯತ್ನಿಸುತ್ತಿದೆ. ಬಿಜೆಪಿಯವರು ಸಿಖ್‌ ರೈತರು ಹಾಗೂ ಹಿಂದೂಗಳು ಎಂದು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದೆ” ಎಂದು ತಿಳಿಸಿದರು.

ಇದನ್ನೂ ಓದಿರಿ: ಲಖಿಂಪುರ್‌ ಹತ್ಯಾಕಾಂಡ: ಹುತಾತ್ಮ ರೈತರಿಗಾಗಿ ರೈತರಿಂದ ಅಂತಿಮ ನಮನ

“ಬಿಜೆಪಿಯವರ ಈ ರೀತಿಯ ಒಡೆದು ಆಳುವ ನೀತಿ, ಅವರಿಗೆ ಗೆಲುವು ತಂದುಕೊಡುವುದಿಲ್ಲ ಎಂದು ಸಂಯುಕ್ತಾ ಕಿಸಾನ್‌ ಮೋರ್ಚಾ ಎಚ್ಚರಿಸಿದೆ. ರೈತರ ಹೋರಾಟವನ್ನು ಬಿಜೆಪಿ ಹೇಗೆ ನೋಡುತ್ತಿದೆ ಎಂಬುದರ ಕುರಿತು ರೈತರು ಜಾಗೃತರಾಗಿದ್ದೇವೆ. ಲಖಿಂಪುರ್‌ ಖೇರಿಯಲ್ಲಿ ಹತ್ಯೆಯಾದ ರೈತರಿಗೆ ನ್ಯಾಯ ದೊರಕಬೇಕಿದೆ. ಅದಕ್ಕಾಗಿ ನಾವು ಧ್ವನಿ ಎತ್ತಿದ್ದೇವೆ. ಸಚಿವ ಅಜಯ್‌ ಮಿಶ್ರಾ ಅವರ ರಾಜೀನಾಮೆಯನ್ನು ಕೇಂದ್ರ ಸರ್ಕಾರ ಪಡೆಯಬೇಕು. ಕ್ರಿಮಿನಲ್‌ ಆರೋಪ ಹೊತ್ತಿರುವ ಅಜಯ್‌ ಮಿಶ್ರಾ ಅವರು ಇನ್ನೂ ಸಚಿವರಾಗಿರುವುದು ನಾಚಿಗೆಗೇಡಿನ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದರು.

“ಅಜಯ್‌ ಮಿಶ್ರಾ ಅವರ ಮಗ ಆಶೀಶ್‌ ಮಿಶ್ರಾ ಅವರನ್ನು ಇತರ ಆರೋಪಿಗಳ ರೀತಿಯಲ್ಲೇ ನೋಡಬೇಕು. ಆತನಿಗೆ ವಿಐಪಿ ಸ್ಥಾನಮಾನ ನೀಡಬಾರದು. ಸುಪ್ರೀಂ ಕೋರ್ಟ್ ನೇತೃತ್ವದಲ್ಲಿ ಪ್ರಕರಣದ ತನಿಖೆಯಾಗಬೇಕು. ರೈತ ವಿರೋಧಿ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು” ಎಂದು ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್‌ ಮಾತನಾಡಿ, “ಇದೊಂದು ಪೂರ್ವ ನಿಯೋಜಿತ ಸಂಚು. ಈ ಹಿಂದೆಯೇ ರೈತರಿಗೆ ಸಚಿವರು ಧಮ್ಕಿಯನ್ನು ಹಾಕಿದ್ದರು. ಆ ಬೆದರಿಕೆ ಪ್ರಕಾರ ರೈತರನ್ನು ಅವರು ಹತ್ಯೆ ಮಾಡಿದ್ದಾರೆ. ಅವರೇ ನಿಜವಾದ ಆರೋಪಿಯಾಗಿದ್ದು, ಅವರನ್ನು ಬಂಧಿಸಬೇಕು. ಅವರು ಸಚಿವ ಸ್ಥಾನದಲ್ಲಿ ಕ್ಷಣ ಕಾಲ ಇರಬಾರದು” ಎಂದು ಅಭಿಪ್ರಾಯಪಟ್ಟರು.

ವಿರೋಧ ಪಕ್ಷಗಳು ಮೌನವಹಿಸಿವೆ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, “ವಿರೋಧ ಪಕ್ಷಗಳು ಕಾರ್ಪೋರೇಟ್‌ಗಳ ಗುಲಾಮರಾಗಿವೆಯೋ ಇಲ್ಲವೋ ಎಂಬ ಸ್ಪಷ್ಟತೆಯನ್ನು ನೀಡಬೇಕು. ನರೇಂದ್ರ ಮೋದಿ ಜಾರಿಗೆ ತಂದ ನೋಟು ರದ್ಧತಿ, ಜಿಎಸ್‌ಟಿ, ಈಗಿನ ಖಾಸಗೀಕರಣವೆಲ್ಲ ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಹಳೆಯ ಅಜೆಂಡಾವಾಗಳಾಗಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇವುಗಳನ್ನು ರದ್ದು ಮಾಡುತ್ತದೆಯೋ ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸಬೇಕ. ಸತ್ತಿರುವ ರೈತರನ್ನು ಕಂಡರೆ ನಮಗೆ ಕಣ್ಣೀರು ಬರುತ್ತದೆ, ದುಃಖವಾಗುತ್ತದೆ ಎಂದು ಕಾಂಗ್ರೆಸ್ ಹೇಳಿದರೆ ಸಾಲಲ್ಲ. ಹೀಗಾಗಿ ಕಾಂಗ್ರೆಸ್‌ನ ಸ್ಪಷ್ಟ ಸಂದೇಶ ಬೇಕು. ವಿರೋಧ ಪಕ್ಷಗಳು ಈ ಬಗ್ಗೆ ಸ್ಪಷ್ಟತೆಯನ್ನು ನೀಡಬೇಕು” ಎಂದರು.

ಇಷ್ಟೆಲ್ಲ ಆಗುತ್ತಿದ್ದರೂ ಬಿಜೆಪಿಯೇ ಗೆದ್ದು ಬರುತ್ತಿದೆಯಲ್ಲ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, “ಮುಂದಿನ ಚುನಾವಣೆಗಳನ್ನು ದೇಶದಲ್ಲಿ ನೋಡಬೇಕಾಗುತ್ತದೆ. ಇವರಿಗೆ (ಬಿಜೆಪಿಯವರಿಗೆ) ದುರಂಕಾರವಿದೆ. ಹಣ, ಜಾತಿ, ಧರ್ಮದ ಆಧಾರದಲ್ಲಿ ಅಧಿಕಾರ ಹಿಡಿಯುತ್ತಿದ್ದ ಇವರ ಕುರಿತು ರೈತರಲ್ಲಿ ಚರ್ಚೆ ನಡೆಯತ್ತಿದೆ. ರೈತರು ಎಚ್ಚೆತ್ತುಕೊಂಡಿದ್ದಾರೆ” ಎಂದು ಹೇಳಿದರು.

ಚಿಂತಕ ಜಿ.ಎನ್‌.ನಾಗರಾಜ್‌ ಮಾತನಾಡಿ, “ಈ ಘಟನೆಯನ್ನು ಸಿಖ್‌ ರೈತರು ಹಾಗೂ ಹಿಂದೂಗಳ ನಡುವಿನ ಗಲಭೆಯಂತೆ ಬಿಂಬಿಸಲು ಬಿಜೆಪಿಯವರು ಯತ್ನಿಸಿದರು. ಕೂಡಲೇ ಎಚ್ಚೆತ್ತಕೊಂಡ ಸಂಯುಕ್ತ ಕಿಸಾನ್‌ ಮೋರ್ಚಾದ ನಾಯಕರು,  ರೈತರು ವರ್ಸಸ್‌ ಉತ್ತರ ಪ್ರದೇಶ ಸರ್ಕಾರ ಎಂಬ ವಿಚಾರ ಮುಖ್ಯಭೂಮಿಕೆಯಲ್ಲಿ ಜೀವಂತವಾಗಿ ಇರುವಂತೆ ನೋಡಿಕೊಂಡಿದ್ದಾರೆ” ಎಂದರು.

ನೂರಾರು ಅನ್ನದಾತರ ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿರಿ: ಲಖಿಂಪುರ್ ಹತ್ಯಾಕಾಂಡದ ಹುತಾತ್ಮ ರೈತರಿಗೆ ಅಂತಿಮ ನಮನ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...