ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಮರ್ಥಿಸಿಕೊಂಡಿದ್ದಾರೆ. ರೈತರ ಹಿತಾಸಕ್ತಿಗೆ ವಿರುದ್ಧವಾಗಿ ಈ ಕಾನೂನುಗಳಲ್ಲಿ ಯಾವುದಾದರೂ ಅಂಶವಿದೆ ಎಂದು ರೈತರು ಭಾವಿಸಿದ್ದರೆ ರೈತರೊಂದಿಗೆ ಮಾತನಾಡಲು ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದಾರೆ.
ಮೂರು ಕೃಷಿ ಕಾನೂನುಗಳನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವ ಅವಶ್ಯಕತೆ ಇದೆ ಎಂದು ಹೇಳಿದ ಸಚಿವ ರಾಜನಾಥ್ ಸಿಂಗ್, ವಿರೋಧದ ವಾತಾವರಣ ಸೃಷ್ಟಿಯಾಗುತ್ತಿದೆ. ಇದನ್ನು ರೈತರು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಮುಖ್ಯವಾಗಿ ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ರೈತರು, ಕೃಷಿ ಕಾನೂನುಗಳನ್ನು ವಿರೋಧಿಸಿ ನವೆಂಬರ್ 26 ರಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ದೇಶದ ವಿವಿಧ ಭಾಗಗಳಲ್ಲಿ ಇವರಿಗೆ ಬೆಂಬಲ ನೀಡಿ ಆಂದೋಲನ ನಡೆಯುತ್ತಿದೆ.
ಇದನ್ನೂ ಓದಿ: ರೈತ ಹೋರಾಟ: ಹೋರಾಟನಿರತ ರೈತರ ಬಗ್ಗೆ ಅಮೆರಿಕಾದ ರೈತರ ಮಾತುಗಳು
ಈ ಕೃಷಿ ಕಾನೂನುಗಳು ಎಪಿಎಂಸಿ ಮತ್ತು ಎಂಎಸ್‌ಪಿ ಖರೀದಿ ವ್ಯವಸ್ಥೆಗಳನ್ನು ಕೊನೆಗೊಳಿಸುತ್ತವೆ. ರೈತರನ್ನು ದೊಡ್ಡ ಕಾರ್ಪೊರೇಟ್‌ಗಳ ಕೃಪೆಗೆ ಒಳಪಡಿಸುತ್ತವೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ ಯೋಜನೆಯಡಿ ರಾಜ್ಯ ಮಟ್ಟದ ಅನ್ನಪೂರ್ಣ ಕಾರ್ಯಕ್ರಮವನ್ನು ಗುರುವಾರ ಆನ್‌ಲೈನ್ ಮೂಲಕ ಉದ್ಘಾಟಿಸಿ ಮಾತನಾಡಿದ ರಾಜನಾಥ್ ಸಿಂಗ್, ರೈತರ ಕಲ್ಯಾಣಕ್ಕಾಗಿ ನರೇಂದ್ರ ಮೋದಿ ಸರ್ಕಾರವು ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಶ್ಲಾಘಿಸಿದ್ದಾರೆ.
“ನಮ್ಮ ಸರ್ಕಾರವು ಮೂರು ಕೃಷಿ ಕಾನೂನುಗಳನ್ನು ತಂದಿದೆ. ಈ ಕಾನೂನುಗಳನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವ ಅವಶ್ಯಕತೆಯಿದೆ ಎಂದು ನಾನು ಭಾವಿಸುತ್ತೇನೆ. ಆದರೆ ವಿರೋಧದ ವಾತಾವರಣವನ್ನು ಸೃಷ್ಟಿಸಲಾಗುತ್ತಿದೆ. ರೈತರು ಇದನ್ನು ಅರ್ಥಮಾಡಿಕೊಳ್ಳಬೇಕು”ಎಂದು ಹೇಳಿದ್ದಾರೆ.
“ನಾನು ಕೃಷಿ ಶಾಸನಗಳನ್ನು ಸಂಪೂರ್ಣವಾಗಿ ಅಧ್ಯಯನ ಮಾಡಿದ್ದೇನೆ. ಇದರ ಪ್ರಕಾರ ನಮ್ಮ ರೈತ ಸಹೋದರರ ಹಿತಾಸಕ್ತಿಗೆ ವಿರುದ್ಧವಾಗಿ ಯಾವುದೇ ಅಂಶಗಳು ಇಲ್ಲ. ಯಾರಿಗಾದರೂ ಅಂತಹ ಅಂಶಗಳಿವೆ ಅನಿಸಿದರೆ, ನಾವು ಸಂಪೂರ್ಣ ವಿಶ್ವಾಸದಿಂದ ರೈತ ಸಹೋದರರೊಂದಿಗೆ ಕುಳಿತು ಮಾತುಕತೆ ನಡೆಸಲು ಸಿದ್ಧರಿದ್ದೇವೆ” ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ರೈತರ ಹಿತಕ್ಕಾಗಿ ಮೋದಿ ಸರ್ಕಾರದ ಯೋಜನೆಗಳನ್ನು ಪಟ್ಟಿ ಮಾಡಿರುವ ಅವರು, ಎಂಎಸ್‌ಪಿ ಒಂದೂವರೆ ಪಟ್ಟು ಹೆಚ್ಚಿಸಲಾಗಿದೆ. ಸಣ್ಣ ರೈತರಿಗೆ ಅಗ್ಗದ ಸಾಲಗಳನ್ನು ನೀಡಲಾಗಿದೆ. 1.50 ಲಕ್ಷ ಕೋಟಿಗೂ ಅಧಿಕ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ರೈತ ಹೋರಾಟ: ದೆಹಲಿಯ ಗಡಿಗಳಲ್ಲಿ ರೈತರ ತಿರಂಗಾ ಯಾತ್ರೆ



ಹೇಳಿದ್ದನ್ನೇ ಹೇಳೋ ಕಿಸಬಾಯಿದಸ ಈತ. ಮೋದಿಯವರು ಕಳೆದ ಒ0ದು ವರ್ಷದಿ0ದ ಇದನ್ನೇ ಹೇಳುತ್ತಾ ಬ0ದಿರುತ್ತಾರೆ. ಈಗ ಅದನ್ನೇ ಇವರು… ಮತ್ತೆ…