Homeಚಳವಳಿರೈತ ಹೋರಾಟ: ಜಾತಿ ಕಟ್ಟುಪಾಡುಗಳನ್ನು ಮುರಿಯುತ್ತಿರುವ ಮಹಾಪಂಚಾಯತ್!

ರೈತ ಹೋರಾಟ: ಜಾತಿ ಕಟ್ಟುಪಾಡುಗಳನ್ನು ಮುರಿಯುತ್ತಿರುವ ಮಹಾಪಂಚಾಯತ್!

ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಹೊರತುಪಡಿಸಿ ಯಾರಿಗಾದರೂ ಮತ ಚಲಾಯಿಸುವಂತೆ ಚಧುನಿ ಮನವಿ ಮಾಡಿದ್ದಾರೆ.

- Advertisement -
- Advertisement -

ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸುವ ರೈತರು ದೇಶಾದ್ಯಂತ ಪ್ರತಿಭಟನೆ ವಿಸ್ತರಿಸುವ ಯೋಜನೆಯ ಭಾಗವಾಗಿ ದಲಿತರೊಂದಿಗೆ ಕೈಜೋಡಿಸುತ್ತಿದ್ದಾರೆ. ರೈತ ಪ್ರತಿಭಟನೆ, ಮಹಾಪಂಚಾಯತ್ ಜಾತಿ ಕಟ್ಟುಪಾಡು ಮುರಿಯುತ್ತಿವೆ. ಜೊತೆಗೆ ಪ್ರತಿಭಟನೆಗೆ ವಿಶಾಲವಾದ ನೆಲೆಯನ್ನು ನೀಡುವುದು ಇವುಗಳ ಉದ್ದೇಶವಾಗಿದೆ.

ಹರಿಯಾಣದ ಹಿಸಾರ್ ಜಿಲ್ಲೆಯ ಬಾರ್ವಾಲಾ ಪಟ್ಟಣದಲ್ಲಿ ಶನಿವಾರ(ಫೆ.20) ದಲಿತರೊಂದಿಗೆ ಮಹಾಪಂಚಾಯತ್ ನಡೆಯಿತು. ಇದರಲ್ಲಿ ಕೃಷಿ ಒಕ್ಕೂಟದ ಮುಖಂಡ ಗುರ್ನಮ್ ಚಧುನಿ ಭಾಗವಹಿಸಿದ್ದರು. ಹರಿಯಾಣದ ಜನಸಂಖ್ಯೆಯಲ್ಲಿ ಶೇಕಡಾ 20 ರಷ್ಟು ಜನ ಪರಿಶಿಷ್ಟ ಜಾತಿಗೆ  ಸೇರಿದವರಿದ್ದಾರೆ.

ಮಹಾಪಂಚಾಯತ್‌ನಲ್ಲಿ ರೈತರು ತಮ್ಮ ಮನೆಗಳಲ್ಲಿ ಅಂಬೇಡ್ಕರ್ ಫೋಟೊ, ದಲಿತರು ತಮ್ಮ ಮನೆಗಳಲ್ಲಿ  ಸರ್ ಛೋಟು ರಾಮ್ ಫೋಟೊ ಹಾಕುವಂತೆ ಮನವಿ ಮಾಡಲಾಯಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ರೈತರ ಹೋರಾಟಕ್ಕೆ ಸರ್‌ ಛೋಟು ರಾಮ್ ಸ್ಪೂರ್ತಿ – ರೈತ ಮುಖಂಡರು

ಮಹಾಪಂಚಾಯತ್‌ನಲ್ಲಿ ಮಾತನಾಡಿದ ರೈತ ಮುಖಂಡ ಗುರ್ನಾಮ್ ಚಧುನಿ, ರೈತರು ಮತ್ತು ದಲಿತರ ನಡುವೆ ಹೆಚ್ಚಿನ ಒಗ್ಗಟ್ಟು ಮೂಡಿಸಬೇಕೆಂದು ಕರೆ ನೀಡಿದರು. ರೈತರು ತಮ್ಮ ಮನೆಗಳಲ್ಲಿ ದಲಿತ ಐಕಾನ್ ಬಿ.ಆರ್.ಅಂಬೇಡ್ಕರ್ ಅವರ ಚಿತ್ರಗಳನ್ನು ಹೊಂದುವಂತೆ ನಿರ್ಣಯವನ್ನು ಅಂಗೀಕರಿಸಲಾಯಿತು. ಬ್ರಿಟೀಷ್ ಭಾರತದ ಪ್ರಮುಖ ರೈತ ಮುಖಂಡ ಸರ್ ಛೋಟು ರಾಮ್ ಅವರ ಚಿತ್ರಗಳನ್ನು ದಲಿತರು ತಮ್ಮ ಮನೆಗಳಲ್ಲಿ ಇಟ್ಟುಕೊಳ್ಳುವಂತೆ ಕೇಳಲಾಯಿತು.

“ನಮ್ಮ ಹೋರಾಟವು ಸರ್ಕಾರದ ವಿರುದ್ಧ ಮಾತ್ರವಲ್ಲದೆ ಬಂಡವಾಳಶಾಹಿಗಳ ವಿರುದ್ಧವೂ ಆಗಿದೆ” ಎಂದು ಚಧುನಿ ಹೇಳಿದರು. “ಸರ್ಕಾರವು ಇಲ್ಲಿಯವರೆಗೆ ನಮ್ಮನ್ನು ವಿಭಜಿಸುತ್ತ ಬಂದಿದೆ. ಕೆಲವೊಮ್ಮೆ ಜಾತಿಯ ಹೆಸರಿನಲ್ಲಿ ಅಥವಾ ಕೆಲವೊಮ್ಮೆ ಧರ್ಮದ ಹೆಸರಿನಲ್ಲಿ ಈ ವಿಭಜನೆ ನಡೆಯುತ್ತಿದೆ. ಸರ್ಕಾರದ ಈ ಪಿತೂರಿಯನ್ನು ಅರ್ಥಮಾಡಿಕೊಳ್ಳಿ” ಎಂದು ರೈತರಿಗೆ ಕಿವಿಮಾತು ಹೇಳಿದರು.

’ಇನ್ನು ಮುಂದೆ ಹರಿಯಾಣ ಮತ್ತು ಪಂಜಾಬ್‌ನಲ್ಲಿ ಇಂತಹ ಮಹಾಪಂಚಾಯತ್‌ಗಳ ಅಗತ್ಯವಿಲ್ಲ. ಪಂಜಾಬ್ ಮತ್ತು ಹರಿಯಾಣಗಳಿಗೆ ಕೃಷಿ ಕಾನೂನುಗಳ ಬಗ್ಗೆ ತಿಳಿದಿದೆ. ಈಗ ಇತರ ರಾಜ್ಯಗಳತ್ತ ಗಮನ ಹರಿಸಬೇಕಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ಮೂರು ಕೃಷಿ ಕಾನೂನುಗಳ ವಿರುದ್ಧದ ಯುದ್ಧವು ರೈತರಿಗೆ ಮಾತ್ರವಲ್ಲ ಎಂದು ಕಾರ್ಮಿಕರು ಅರ್ಥಮಾಡಿಕೊಳ್ಳಬೇಕು. ಕಾರ್ಮಿಕ ವರ್ಗವು ಹೆಚ್ಚು ತೊಂದರೆ ಅನುಭವಿಸುತ್ತಿದೆ. ಆದ್ದರಿಂದ, ಈ ಆಂದೋಲನಕ್ಕೆ ಹೆಚ್ಚು ಹೆಚ್ಚು ಕೊಡುಗೆ ನೀಡುವಂತೆ ನಾನು ಕಾರ್ಮಿಕ ವರ್ಗವನ್ನು ವಿನಂತಿಸುತ್ತೇನೆ ” ಎಂದು ಮನವಿ ಮಾಡಿದ್ದಾರೆ.

ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಹೊರತುಪಡಿಸಿ ಯಾರಿಗಾದರೂ ಮತ ಚಲಾಯಿಸುವಂತೆ ಚಧುನಿ ಕೇಳಿಕೊಂಡರು.

ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಮತ್ತು ಎಂಎಸ್‌ಪಿ ಖಾತ್ರಿಗೊಳಿಸುವ ಕಾನೂನು ಜಾರಿಗೊಳಿಸಬೇಕೆಂದು ಆಗ್ರಹಿಸಿ ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ದಿನೇ ದಿನೇ ತೀವ್ರಗೊಳ್ಳುತ್ತಿದೆ. ದೆಹಲಿ ಗಡಿಗಳ ಜೊತೆಗೆ ಉತ್ತರಪ್ರದೇಶ, ಹರಿಯಾಣ, ರಾಜಸ್ಥಾನ ಮತ್ತು ಪಂಜಾಬ್‌ಗಳಲ್ಲಿ ರೈತರ ಬೃಹತ್ ಮಹಾಪಂಚಾಯತ್  ನಡೆಯುತ್ತಿವೆ.

ರಾಜ್ಯದಲ್ಲಿಯೂ ಸಮಾಜವಾದಿ ಹೋರಾಟದ ಜಿಲ್ಲೆ, ಮುಖ್ಯಮಂತ್ರಿಗಳ ತವರೂರು ಶಿವಮೊಗ್ಗದಲ್ಲಿ ಮೊದಲ ಬೃಹತ್ ‘ರೈತ ಮಹಾಪಂಚಾಯತ್’ ನಡೆಸಲು ವೇದಿಕೆ ಸಜ್ಜಾಗಿದೆ. ರೈತ ಸಂಘಟನೆಗಳ ಮತ್ತು ಪ್ರಗತಿಪರ ಸಂಘಟನೆಗಳ ಮಹಾಸಭೆ ನಡೆದಿದ್ದು, ಮಾರ್ಚ್ 15 ರಂದು ಶಿವಮೊಗ್ಗದಲ್ಲಿ ಬೃಹತ್ ರೈತ ಮಹಾ ಪಂಚಾಯತ್ ನಡೆಸಲು ತೀರ್ಮಾನಿಸಲಾಗಿದೆ.


ಇದನ್ನೂ ಓದಿ: ಮಾರ್ಚ್ 15 ಕ್ಕೆ ಶಿವಮೊಗ್ಗದಲ್ಲಿ ಬೃಹತ್ ರೈತ ಮಹಾಪಂಚಾಯತ್: ಚಳವಳಿ ಬಲಪಡಿಸಲು ರೈತಮುಖಂಡರ ಒಕ್ಕೊರಲ ಸಂಕಲ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...