Homeಚಳವಳಿರೈತರ ಕರಾಳ ದಿನ ಆಚರಣೆಗೆ ಭಾರಿ ಬೆಂಬಲ- ಎಲ್ಲೆಡೆ ಕಪ್ಪು ಧ್ವಜಗಳ ಹಾರಾಟ

ರೈತರ ಕರಾಳ ದಿನ ಆಚರಣೆಗೆ ಭಾರಿ ಬೆಂಬಲ- ಎಲ್ಲೆಡೆ ಕಪ್ಪು ಧ್ವಜಗಳ ಹಾರಾಟ

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳ ವಿರುದ್ಧ ತಮ್ಮ ಹೋರಾಟ ಮುಂದುವರೆಸಿರುವ ರೈತರು ಇಂದು ಕರಾಳ ದಿನ ಆಚರಣೆಗೆ ಕರೆ ನೀಡಿದ್ದು, ಭಾರಿ ಬೆಂಬಲ ವ್ಯಕ್ತವಾಗಿದೆ. ಪಂಜಾಬ್, ಹರಿಯಾಣ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಪ್ಪು ಬಾವುಟಗಳು ಹಾರಾಡುತ್ತಿವೆ.

ದೆಹಲಿಯ ಪ್ರತಿಭಟನಾ ಸ್ಥಳಗಳಲ್ಲಿನ ಗಡಿಗಳಿಗೆ ಈಗಾಗಲೇ ಸಾವಿರಾರು ರೈತರು ಸೇರಿಕೊಂಡಿದ್ದಾರೆ. ದೇಶದಲ್ಲಿ ಕೊರೊನಾ ಪರಿಸ್ಥಿತಿಯಿಂದ ಪಂಜಾಬ್, ಹರಿಯಾಣ ಮತ್ತು ದೆಹಲಿಯಲ್ಲಿ ಲಾಕ್‌ಡೌನ್ ವಿಧಿಸಲಾಗಿದೆ. ಇದರ ನಡುವೆಯೇ ರೈತರು ಕರಾಳ ದಿನ ಆಚರಣೆಗೆ ಕರೆ ನೀಡಿದ್ದಾರೆ. ರೈತರ ಕರೆಗೆ ದೇಶಾದ್ಯಂತ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಕೊರೊನಾ ಘಜಿಯಾಬಾದ್‌ನ ಗಾಝಿಪುರ್‌ ಗಡಿಯಲ್ಲಿನ ರೈತರು ಕರಾಳ ದಿನ ಆಚರಿಸಿ ಪ್ರತಿಭಟನೆ ನಡೆಸಿದ್ದಾರೆ.

“ನಾವು ಕಪ್ಪು ಧ್ವಜದ ಜೊತೆಗೆ ತ್ರಿವರ್ಣವನ್ನು ಸಹ ಹಾರಿಸುತ್ತಿದ್ದೇವೆ. ಪ್ರತಿಭಟನೆಗೆ 6 ತಿಂಗಳು ತುಂಬುತ್ತಿವೆ. ಆದರೆ ಸರ್ಕಾರ ನಮ್ಮ ಬೇಡಿಕೆಯನ್ನು ಕೇಳುತ್ತಿಲ್ಲ. ಆದ್ದರಿಂದ ರೈತರು ಕಪ್ಪು ಧ್ವಜಗಳನ್ನು ಹಾರಿಸುತ್ತಿದ್ದಾರೆ. ಪ್ರತಿಭಟನೆ ಶಾಂತಿಯುತವಾಗಿ ನಡೆಸಲಾಗುತ್ತಿದೆ. ನಾವು ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸುತ್ತಿದ್ದೇವೆ. ಜನರು ಎಲ್ಲಿದ್ದಾರೋ ಅಲ್ಲಿಂದಲೇ ಧ್ವಜಗಳನ್ನು ಹಾರಿಸುತ್ತಾ ಪ್ರತಿಭಟನೆಗೆ ಬೆಂಬಲ ನೀಡುತ್ತಿದ್ದಾರೆ” ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಇದನ್ನೂ ಓದಿ: ಮಾಸ್ಟರ್‌ಸ್ಟ್ರೋಕ್’: ಪ್ರಧಾನಿ ಮೋದಿ ಬಗ್ಗೆ ’ನಿರುದ್ಯೋಗಿ ಭಕ್ತ’ನ 56 ಪುಟಗಳ ಖಾಲಿ ಪುಸ್ತಕ!

ಕೃಷಿ ಕಾನೂನುಗಳನ್ನು ವಿರೋಧಿಸಿ ಪಂಜಾಬ್‌ನ ರೈತರು ಇಂದು ‘ಕಪ್ಪು ದಿನ’ ಆಚರಿಸಿ, ತಮ್ಮ ಮನೆಗಳ ಮೇಲೆ ಮತ್ತು ತಮ್ಮ ಟ್ರಾಕ್ಟರುಗಳಲ್ಲಿ ಕಪ್ಪು ಧ್ವಜಗಳನ್ನು ಹಾರಿಸಿದ್ದಾರೆ.

Punjab: People put up black flags at their houses and on their tractors in Chabba village of Amritsar, as the farmers protesting against the Farm Laws, observe 'Black Day' today.
PC: ANI

ಟ್ವಿಟರ್‌ನಲ್ಲಿ ರೈತರಿಗೆ ಕರಾಳದಿನ (#Black_Day_Of_Farmers) ಮತ್ತು ರಾಷ್ಟ್ರೀಯ ಕರಾಳ ದಿನ ( #NationalBlackDay) ಹ್ಯಾಷ್‌ಟ್ಯಾಗ್‌ ಟ್ರೆಂಡಿಂಗ್ ಆಗಿದದೆ. ಲಕ್ಷಾಂತರ ಮಂದಿ ಟ್ವೀಟ್ ಮಾಡಿ, ವಿವಾದಿತ ಕೃಷಿ ಕಾನೂನುಗಳನ್ನು ರದ್ದು ಮಾಡಿ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

’ಕಾನೂನನ್ನು ಪಾಲನೆ ಮಾಡದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾನೂನುಬಾಹಿರ ಚಟುವಟಿಕ ಅವಕಾಶವಿಲ್ಲ’ ಎಂದು ದೆಹಲಿ ಪೊಲೀಸ್ ಪಿಆರ್‌ಒ ಚಿನ್ಮಯ್ ಬಿಸ್ವಾಲ್ ಹೇಳಿದ್ದಾರೆ. ಸಿಂಘು, ಟಿಕ್ರಿ ಮತ್ತು ಗಾಜಿಪುರದ ಪ್ರತಿಭಟನಾ ಸ್ಥಳಗಳು ಸೇರಿದಂತೆ ಎಲ್ಲಾ ಗಡಿ ಕೇಂದ್ರಗಳಲ್ಲಿ ಪೊಲೀಸ್ ಪಡೆಗಳನ್ನು ಈಗಾಗಲೇ ನಿಯೋಜಿಸಲಾಗಿದೆ ಎಂದಿದ್ದಾರೆ.


ಇದನ್ನೂ ಓದಿ: ಸೆಂಟ್ರಲ್‌ ವಿಸ್ತಾ ಯೋಜನೆ ಮತ್ತು ದೆಹಲಿಯ ಮೂಲಕ ಭಾರತವನ್ನು ವಶಪಡಿಸಿಕೊಳ್ಳುವ ಬಿಜೆಪಿ ಸರ್ಕಾರದ ಆಕ್ರಮಣಕಾರಿ ತಂತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...