Homeಚಳವಳಿರೈತ ಹೋರಾಟ: ಮಳೆ ನೀರಿನಿಂದ ತುಂಬಿಕೊಂಡ ಸಿಂಘು ಪ್ರತಿಭಟನಾ ಸ್ಥಳ

ರೈತ ಹೋರಾಟ: ಮಳೆ ನೀರಿನಿಂದ ತುಂಬಿಕೊಂಡ ಸಿಂಘು ಪ್ರತಿಭಟನಾ ಸ್ಥಳ

- Advertisement -
- Advertisement -

ದೆಹಲಿಯ ಕೆಲವು ಭಾಗಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ರಾಷ್ಟ್ರ ರಾಜಧಾನಿ ಜನ ಪರದಾಡಬೇಕಾದ ಸ್ಥಿತಿ ಬಂದಿದೆ. ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಇತ್ತ ಸಿಂಘು ಗಡಿ ಭಾಗದಲ್ಲೂ ಹೆಚ್ಚು ಮಳೆಯಾಗಿದ್ದು, ರೈತ ಹೋರಾಟಗಾರರು ಸಂಕಷ್ಟಕ್ಕೆ ಈಡಾಗಿದ್ದಾರೆ.

ಸಿಂಘು ಗಡಿಯಲ್ಲಿನ ರಸ್ತೆಗಲ್ಲಿ ಮಳೆ ನೀರು ತುಂಬಿಕೊಂಡಿದ್ದು, ರಸ್ತೆಗಳೇ ಸರಿಯಾಗಿ ಕಾಣಿಸುತ್ತಿಲ್ಲ. ರೈತರ ಹುಲ್ಲಿನ ಗುಡುಸಲುಗಳು ಭಾರಿ ಮಳೆಗೆ ಸಿಲುಕಿ ನಾಶವಾಗಿವೆ. ಜಡಿ ಮಳೆಗ ಸಿಲುಕಿದ ಪ್ರತಿಭಟನಾಕಾರರು ತಮ್ಮ ಟೆಂಟ್‌ಗಳು, ಗುಡಿಸಲುಗಳನ್ನು ರಕ್ಷಿಸಿಕೊಳ್ಳುವಲ್ಲಿ ತೊಡಗಿದ್ದಾರೆ.

ಇತ್ತ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಧಾರಣದಿಂದ ಭಾರೀ ತೀವ್ರತೆಯ ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ರೈತ ಹೋರಾಟದ ಸಾವುಗಳ ಬಗ್ಗೆ ಮಾಹಿತಿ ಇಲ್ಲ ಎಂದ ಕೇಂದ್ರ: ಪಂಜಾಬ್ ಅಂಕಿ-ಅಂಶ ತಿಳಿಸಿದ್ದೇ ಬೇರೆ!

ಭಾರಿ ಮಳೆಗೆ ಯಮುನಾ ನದಿ ನೀರು ಅಪಾಯದ ಮಟ್ಟವನ್ನು ಸಮೀಪಿಸುತ್ತಿದೆ. ಭಾನುವಾರ ಬೆಳಿಗ್ಗೆ 205.30 ಮೀಟರ್‌ಗಳಷ್ಟು ನೀರು ತುಂಬಿಕೊಂಡಿದೆ. ಯಮುನಾ ನದಿಯ ನೀರಿನ ಅಪಾಯದ ಮಟ್ಟ 205.33 ಮೀಟರ್‌ ಇದೆ.

ನಗರದಲ್ಲಿ ಭಾರೀ ಮಳೆಯಿಂದಾಗಿ ಮಾಡೆಲ್ ಟೌನ್‌ನ ನೈನಿ ಕೆರೆಯ ಬಳಿ ವಾಸಿಸುತ್ತಿರುವ ಸ್ಥಳೀಯರಲ್ಲಿ ಆತಂಕ ಉಂಟಾಗಿದ್ದು, ಕಳೆದ ಕೆಲವು ದಿನಗಳಿಂದ ಕೆರೆಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (NDMC) ನಲ್ಲಿ ಈ ಬಗ್ಗೆ ಹಲವಾರು ದೂರುಗಳನ್ನು ದಾಖಲಿಸಲಾಗಿದೆ, ಆದರೆ, ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.


ಇದನ್ನೂ ಓದಿ: ನೆರೆ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಟ್ಟಿದ್ದಾಗಿ ಬಿಜೆಪಿ ಜಾಹೀರಾತು: ವಾಸ್ತವದಲ್ಲಿ ಬೀದಿಯಲ್ಲಿರುವ ಸಂತ್ರಸ್ತರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ...

0
ಲೋಕಸಭೆ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನಕ್ಕೆ 24 ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಂಟ ಸಮುದಾಯದ  ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿಲ್ಲವ...