Homeಮುಖಪುಟರೈತರಿಗೆ ರಾಹುಲ್ ಗಾಂಧಿ ಸಾಥ್: ಟ್ಯ್ರಾಕ್ಟರ್ ಚಲಾಯಿಸಿಕೊಂಡು ಸಂಸತ್‌ಗೆ ಆಗಮನ

ರೈತರಿಗೆ ರಾಹುಲ್ ಗಾಂಧಿ ಸಾಥ್: ಟ್ಯ್ರಾಕ್ಟರ್ ಚಲಾಯಿಸಿಕೊಂಡು ಸಂಸತ್‌ಗೆ ಆಗಮನ

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ರೈತರು ದೆಹಲಿಯ ಜಂತರ್‌ ಮಂತರ್‌ನಲ್ಲಿ ಕಿಸಾನ್ ಸಂಸತ್ ನಡೆಸುತ್ತಾ ತಮ್ಮ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರಿಗೆ ಬೆಂಬಲ ವ್ಯಕ್ತಪಡಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಟ್ಯ್ರಾಕ್ಟರ್ ಚಲಾಯಿಸಿಕೊಂಡು ಸಂಸತ್‌ ಅಧಿವೇಶನಕ್ಕೆ ಬಂದಿದ್ದಾರೆ.

ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ತಮ್ಮ ಪ್ರತಿಭಟನೆಯನ್ನು ನಡೆಸಿರುವ ರಾಹುಲ್ ಗಾಂಧಿ ಕಾಯ್ದೆಗಳನ್ನು ರದ್ದುಗೊಳಿಸಿ, ರೈತರ ಬೇಡಿಕೆಗಳನ್ನು ಈಡೇರಿಸಿ ಎಂಬ ಭಿತ್ತಿಫಲಕಗಳ ಜೊತೆಗೆ ಟ್ಯ್ರಾಕ್ಟರ್‌ ಚಲಾಯಿಸಿ ರೈತರಿಗೆ ಬೆಂಬಲ ನೀಡಿದ್ದಾರೆ.

“ನಾನು ರೈತರ ಸಂದೇಶವನ್ನು ಸಂಸತ್ತಿಗೆ ತಂದಿದ್ದೇನೆ. ಸರ್ಕಾರ ರೈತರ ಧ್ವನಿಯನ್ನು ನಿಗ್ರಹಿಸಲು ಪ್ರಯತ್ನಿಸುತ್ತಿದ್ದಾರೆ. ಕೃಷಿ ಕಾನೂನುಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಯಲು ಬಿಡುತ್ತಿಲ್ಲ. ಅವರು ಈ ಕರಾಳ ಕಾನೂನುಗಳನ್ನು ರದ್ದುಗೊಳಿಸಬೇಕಾಗುತ್ತದೆ. ಈ ಕಾನೂನುಗಳು 2- 3 ದೊಡ್ಡ ಉದ್ಯಮಿಗಳ ಪರವಾಗಿರುತ್ತದೆ ಎಂದು ಇಡೀ ದೇಶಕ್ಕೆ ತಿಳಿದಿದೆ” ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

“ರೈತರು ತಮ್ಮ ಭೂಮಿಯನ್ನು ಮಾರಾಟ ಮಾಡುವಂತೆ ಒತ್ತಾಯಿಸಿದರೆ, ಸಂಸತ್ತಿನಲ್ಲಿ ಟ್ರಾಕ್ಟರುಗಳು ಓಡಾಡುತ್ತವೆ” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದ ಸಾವುಗಳ ಬಗ್ಗೆ ಮಾಹಿತಿ ಇಲ್ಲ ಎಂದ ಕೇಂದ್ರ: ಪಂಜಾಬ್ ಅಂಕಿ-ಅಂಶ ತಿಳಿಸಿದ್ದೇ ಬೇರೆ!

“ಸರ್ಕಾರದ ಪ್ರಕಾರ, ಈ ಕಾನೂನುಗಳಿಂದ ರೈತರು ತುಂಬಾ ಸಂತೋಷವಾಗಿದ್ದಾರೆ. ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರು ಭಯೋತ್ಪಾದಕರು. ಆದರೆ ವಾಸ್ತವದಲ್ಲಿ, ಸರ್ಕಾರ ರೈತರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ” ಎಂದು ರಾಹುಲ್ ಹೇಳಿದ್ದಾರೆ.

ಆದರೆ, ರೈತರನ್ನು ರಾಜಕೀಯ ಸಾಧನವಾಗಿ ಪ್ರತಿಪಕ್ಷಗಳು ಬಳಸುತ್ತಿವೆ ಎಂದು ಬಿಜೆಪಿ ಹೇಳಿಕೊಂಡಿದೆ. “ರಾಹುಲ್ ಗಾಂಧಿ ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ರೈತರನ್ನು ರಾಜಕೀಯ ಸಾಧನವಾಗಿ ಬಳಸಲಾಗುತ್ತಿದೆ. ಕಾನೂನುಗಳಲ್ಲಿ ಸಮಸ್ಯೆಗಳಿದ್ದರೆ ಅವುಗಳನ್ನು ತಿದ್ದುಪಡಿ ಮಾಡಲು ಒಕ್ಕೂಟ ಸರ್ಕಾರ ಸಿದ್ಧವಾಗಿದೆ. ರೈತರು ಕೂಡ ಮಾತುಕತೆಗೆ ಸಿದ್ಧರಾಗಿದ್ದಾರೆ” ಎಂದು ಬಿಜೆಪಿ ಸಂಸದ ವಿನಯ್ ಸಹಸ್ರಬುದ್ಧೆ ಹೇಳಿದ್ದಾರೆ.

ಮಾನ್ಸೂನ್ ಅಧಿವೇಶನ ಪ್ರಾರಂಭವಾದಾಗಿನಿಂದ, ಕೃಷಿ ಕಾನೂನುಗಳ ಕುರಿತ ಚರ್ಚೆ ವಿಷಯವಾಗಿ ಸಂಸತ್ತನ್ನು ಹಲವಾರು ಬಾರಿ ಮುಂದೂಡಲಾಗಿದೆ. ಕೆಲವು ಕಾಂಗ್ರೆಸ್ ಸಂಸದರು ಈ ವಿಷಯ ಬಗೆಹರಿಯುವವರೆಗೂ ಸದನವನ್ನು ಕಾರ್ಯನಿರ್ವಹಿಸಲು ಬಿಡುವುದಿಲ್ಲ ಎಂದಿದ್ದರು. ಇನ್ನು ಶಿರೋಮಣಿ ಅಕಾಲಿ ದಳವೂ ಸಂಸತ್ತಿನ ಹೊರಗಡೆ ಪ್ರತಿಭಟನೆ ನಡೆಸಿದೆ.


ಇದನ್ನೂ ಓದಿ: ರೈತ ಹೋರಾಟ: ಯುವಕರನ್ನು ಸೆಳೆಯುತ್ತಿರುವ ಮಿನಿ ಕಿಸಾನ್ ಸಂಸತ್‌ಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯ ಅಧಿಕೃತ ‘ಎಕ್ಸ್’ ಖಾತೆ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಚುನಾವಣಾ ಆಯೋಗ

0
ವಿವಿಧ ಗುಂಪುಗಳು ಮತ್ತು ವರ್ಗಗಳ ನಡುವೆ ದ್ವೇಷ ಹರಡಲು ಮತ್ತು ಉತ್ತೇಜಿಸಲು ಯತ್ನಿಸುತ್ತಿರುವ ಆರೋಪದ ಮೇಲೆ ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ವಿರುದ್ಧ ಚುನಾವಣಾ ಆಯೋಗ ಎಫ್‌ಐಆರ್‌ನ್ನು ದಾಖಲಿಸಿದೆ. ಈ ಕುರಿತು ಚುನಾವಣಾ ಆಯೋಗ...