Homeಚಳವಳಿರೈತ ಹೋರಾಟ: 70,000 ಕೋಟಿ ನಷ್ಟವಾಗಿದೆ ಎಂದ ವಾಣಿಜ್ಯ-ಕೈಗಾರಿಕಾ ಮಂಡಳಿ

ರೈತ ಹೋರಾಟ: 70,000 ಕೋಟಿ ನಷ್ಟವಾಗಿದೆ ಎಂದ ವಾಣಿಜ್ಯ-ಕೈಗಾರಿಕಾ ಮಂಡಳಿ

ಆಹಾರ ಸಂಸ್ಕರಣೆ, ಹತ್ತಿ ಜವಳಿ, ಉಡುಪುಗಳು, ಆಟೋಮೊಬೈಲ್, ಕೃಷಿ ಯಂತ್ರೋಪಕರಣಗಳು, ಮಾಹಿತಿ ತಂತ್ರಜ್ಞಾನ, ವ್ಯಾಪಾರ, ಪ್ರವಾಸೋದ್ಯಮ ಮತ್ತು ಸಾರಿಗೆ ಸೇರಿದಂತೆ ಮುಂತಾದ ಕ್ಷೇತ್ರಗಳ ಮೇಲೆ ತೀವ್ರವಾಗಿ ಪರಿಣಾಮ ಉಂಟಾಗಿದೆ- ಸಂಜಯ್ ಅಗರ್ವಾಲ್

- Advertisement -
- Advertisement -

ಹೊಸ ಕೃಷಿ ಕಾನೂನುಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟದ ಪರಿಣಾಮವಾಗಿ ಪ್ರಸಕ್ತ ಹಣಕಾಸು ವರ್ಷದ 3 ನೇ ತ್ರೈಮಾಸಿಕದಲ್ಲಿ 70,000 ಕೋಟಿ ರೂ.ಗಳ ಆರ್ಥಿಕ ನಷ್ಟವಾಗಲಿದೆ ಎಂದು PHD ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ತಿಳಿಸಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ರೈತ ವಿರೋಧಿಯಾಗಿದೆ ಎಂದು ಆರೋಪಿಸಿ ದೇಶದಾದ್ಯಂತ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಪರಿಣಾಮವಾಗಿ ಪಂಜಾಬ್ -ಹರಿಯಾಣದ ರೈತರು ದೆಹಲಿಯ ಪ್ರಮುಖ ಗಡಿಗಳು ಮತ್ತು ಹೆದ್ದಾರಿಗಳನ್ನು ಮುಚ್ಚಿದ್ದಾರೆ. ಹಾಗಾಗಿ ಸರಬರಾಜು ಮತ್ತು ವ್ಯಾಪಾರ ವಹಿವಾಟುಗಳಿಗೆ ತೊಂದರೆಯಾಗಿ ಬೃಹತ್ ಆರ್ಥಿಕ ನಷ್ಟ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಹತ್ರಾಸ್‌ ಅತ್ಯಾಚಾರ-ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಮ್ಯಾಜಿಸ್ಟ್ರೇಟ್ ವರ್ಗಾವಣೆ!

ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಅಧ್ಯಕ್ಷ ಸಂಜಯ್ ಅಗರ್ವಾಲ್ ಮಾತನಾಡಿ, “ಇದುವರೆಗಿನ 36 ದಿನಗಳ ಕೃಷಿ ಆಂದೋಲನದಿಂದ ಭಾರತವು, 2020-21ರ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ 70,000 ಕೋಟಿ ರೂ.ಗಳಿಗಿಂತ ಹೆಚ್ಚಿನ ಆರ್ಥಿಕ ನಷ್ಟವನ್ನು ಅನುಭವಿಸಲಿದೆ. ಸರಬರಾಜು ಸೇರಿದಂತೆ ದಿನನಿತ್ಯದ ಆರ್ಥಿಕ ಚಟುವಟಿಕೆಗಳಿಗೆ ತೊಂದರೆಯಾಗಿದೆ” ಎಂದು ಹೇಳಿದ್ದಾರೆ.

“ಆಹಾರ ಸಂಸ್ಕರಣೆ, ಹತ್ತಿ ಜವಳಿ, ಉಡುಪುಗಳು, ಆಟೋಮೊಬೈಲ್, ಕೃಷಿ ಯಂತ್ರೋಪಕರಣಗಳು, ಮಾಹಿತಿ ತಂತ್ರಜ್ಞಾನ, ವ್ಯಾಪಾರ, ಪ್ರವಾಸೋದ್ಯಮ ಮತ್ತು ಸಾರಿಗೆ ಸೇರಿದಂತೆ ಮುಂತಾದ ಕ್ಷೇತ್ರಗಳ ಮೇಲೆ ತೀವ್ರವಾಗಿ ಪರಿಣಾಮ ಉಂಟಾಗಿದೆ. ಇದು ಉದ್ಯಮಕ್ಕೆ ಸಾಗಿಸಬೇಕಾದ ಕಚ್ಚಾ ವಸ್ತುಗಳ ಸರಬರಾಜನ್ನೂ ಅಡ್ಡಿಪಡಿಸಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಅನ್ಯಾಯದ ವಿರುದ್ಧ ಹೋರಾಡುತ್ತಿರುವ ರೈತರು, ಕಾರ್ಮಿಕರ ಜೊತೆ ನನ್ನ ಹೃದಯವಿದೆ: ರಾಹುಲ್ ಗಾಂಧಿ

ಕಳೆದ ಒಂದು ತಿಂಗಳಿನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಕೇಂದ್ರ ಸರ್ಕಾರದ ರೈತ ವಿರೋಧಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಜೊತೆ ಆರು ಸುತ್ತಿನ ಮಾತುಕತೆಗಳು ನಡೆದಿದ್ದು, ಅವುಗಳೆಲ್ಲವೂ ವಿಫಲವಾಗಿವೆ.

“ಡಿಸಂಬರ್ 30 ರಂದು ನಡೆದ ಆರನೇ ಸುತ್ತಿನ ಮಾತುಕತೆಯಲ್ಲಿ, ರೈತರ 4 ಪ್ರಮುಖ ಬೇಡಿಕೆಗಳಲ್ಲಿ ಕೇಂದ್ರ ಸರ್ಕಾರ ಎರಡಕ್ಕೆ ಒಪ್ಪಿಗೆ ನೀಡಲಾಗಿದ್ದು, ಉಳಿದ ಎರಡು ಬೇಡಿಕೆಗಳ ಕುರಿತಂತೆ ಜನವರಿ 4 ರಂದು ಮತ್ತೊಂದು ಸುತ್ತಿನ ಮಾತುಕತೆಯಲ್ಲಿ ತೀರ್ಮಾನವಾಗಲಿದೆ. ಅಲ್ಲಿ ತಮ್ಮ ಬೇಡಿಕೆಗಳನ್ನು ಈಡೆರಿಸದಿದ್ದರೆ ದೇಶದಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ರೈತರು ಎಚ್ಚರಿಕೆ ಕೊಟ್ಟಿದ್ದಾರೆ.


ಇದನ್ನೂ ಓದಿ: ಹೊಸ ವರ್ಷ: ಪ್ರಧಾನಿ ಮೋದಿ ಸರ್ಕಾರ ಅದಾನಿ‌ ಗ್ರೂಪ್ಸ್‌ಗೆ ನೀಡಿದ ಗಿಫ್ಟ್‌ ಏನು ಗೊತ್ತಾ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

0
ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಛತ್ರಪತಿ ಸಂಭಾಜಿನಗರದಲ್ಲಿ ಸೇನಾ ಯೋಧನೋರ್ವನನ್ನು ಬಂಧಿಸಿದ್ದಾರೆ. ಮಾರುತಿ ಧಕ್ನೆ(42) ವಿರುದ್ಧ ದೂರು...