Homeಚಳವಳಿರೈತ ಹೋರಾಟ: ಜಿಯೋ ಟವರ್‌ಗಳ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ರೈತರು

ರೈತ ಹೋರಾಟ: ಜಿಯೋ ಟವರ್‌ಗಳ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ರೈತರು

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ರೈತರು ಜಿಯೋ ಸಿಮ್‌ ಅನ್ನು ತಿರಸ್ಕರಿಸಿರುವುದರ ಹಿಂದೆ ಏರ್‌ಟೆಲ್ ಮತ್ತು ವೊಡಾಫೋನ್ ಕಂಪನಿಗಳ ಕೈವಾಡವಿದೆ ಎಂದು ಅಂಬಾನಿಯ ಜಿಯೋ ಕಂಪನಿ ಆರೋಪಿಸಿತ್ತು

- Advertisement -
- Advertisement -

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ಪಂಜಾಬ್‌ನ ಮನ್ಸಾದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ಅಲ್ಲಿನ ಹಲವಾರು ರಿಲಯನ್ಸ್ ಜಿಯೋ ಟವರ್‌ಗಳ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಿದ್ದಾರೆ. ಇದರಿಂದ ರಾಜ್ಯದ ಕೆಲವು ಭಾಗಗಳಲ್ಲಿ ಟೆಲಿಕಾಂ ಸೇವೆಗಳಿಗೆ ಅಡ್ಡಿಯುಂಟಾಗಿದೆ.

ಪ್ರತಿಭಟನಾಕಾರರಲ್ಲಿ ಒಬ್ಬರಾದ ಅವತಾರ್ ಸಿಂಗ್ ಈ ಕುರಿತು ಮಾತನಾಡಿ, “ಈ ಕರಾಳ ಕಾನೂನುಗಳನ್ನು ರದ್ದುಗೊಳಿಸುವವರೆಗೆ ವಿದ್ಯುತ್ ಸರಬರಾಜಿಗೆ ಅನುಮತಿಸುವುದಿಲ್ಲ” ಎಂದು ಹೇಳಿದರು.

“ನಾವು ಜಿಯೋ ಟವರ್‌ಗಳ ವಿದ್ಯುತ್ ಸರಬರಾಜನ್ನು ನಿಲ್ಲಿಸಿದ್ದೇವೆ. ರೈತರ ವಿರುದ್ಧದ ಕರಾಳ ಕಾನೂನುಗಳನ್ನು ಹಿಂತೆಗೆದುಕೊಳ್ಳುವವರೆಗೂ ನಾವು ಜಿಯೋ ಮತ್ತು ರಿಲಯನ್ಸ್ ಅನ್ನು ಬಹಿಷ್ಕರಿಸುತ್ತೇವೆ. ಇದನ್ನು ನಡೆಸಲು ನಾವು ಬಿಡುವುದಿಲ್ಲ. ಎಲ್ಲರೂ ಇದನ್ನು ಬೆಂಬಲಿಸುತ್ತಿದ್ದಾರೆ. ಮೋದಿ ಸರ್ಕಾರ ಈ ಕಾನೂನುಗಳನ್ನು ಕಾರ್ಪೊರೇಟ್‌ಗಳ ಲಾಭಕ್ಕಾಗಿ ತಂದಿದೆ” ಎಂದು ಅವತಾರ್ ಸಿಂಗ್ ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಜಿಯೋದಿಂದ ಹೊರನಡೆದ 26 ಲಕ್ಷ ಗ್ರಾಹಕರು: ರೈತರ ಬಾಯ್ಕಾಟ್ ಕರೆಗೆ Jio ಕಂಗಾಲು!

ಈ ಹಿಂದೆ, ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ರೈತರು ಜಿಯೋ ಸಿಮ್‌ ಅನ್ನು ತಿರಸ್ಕರಿಸಿರುವುದರ ಹಿಂದೆ ಏರ್‌ಟೆಲ್ ಮತ್ತು ವೊಡಾಫೋನ್ ಕಂಪನಿಗಳ ಕೈವಾಡವಿದೆ ಎಂದು ಅಂಬಾನಿಯ ಜಿಯೋ ಕಂಪನಿ ಆರೋಪಿಸಿತ್ತು. ಜೊತೆಗೆ ಈ ಎರಡು ನೆಟ್‌ವರ್ಕ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಟೆಲಿಕಾಂ ರೆಗ್ಯುಲೇಟರ್ ಅಥಾರಿಟಿ ಆಫ್ ಇಂಡಿಯಾ (TRAI)ಗೆ ಡಿಸಂಬರ್ 10 ರಂದು ದೂರು ನೀಡಿತ್ತು.

ಜಿಯೋ ಮಾಡಿದ ಆರೋಪಗಳಿಗೆ ಪ್ರತಿಕ್ರಿಯಿಸಿದ ಭಾರತೀಯ ಏರ್‌ಟೆಲ್, “ಏರ್‌ಟೆಲ್, ಟೆಲಿಕಾಂ ಉದ್ಯಮದಲ್ಲಿ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಈ ಅವಧಿಯಲ್ಲಿ, ನಾವು ಮಾರುಕಟ್ಟೆಯಲ್ಲಿ ತೀವ್ರ ಪೈಪೋಟಿ ನೀಡಿದ್ದೇವೆ ಮತ್ತು ನಮ್ಮ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡಲು ಶ್ರಮಿಸಿದ್ದೇವೆ. ಅದೇ ಸಮಯದಲ್ಲಿ ನಮ್ಮ ಸ್ಪರ್ಧಿಗಳು ಮತ್ತು ಪಾಲುದಾರರನ್ನೂ ಗೌರವದಿಂದ ನಡೆಸಿಕೊಂಡಿದ್ದೇವೆ. ನಾವು ನಮ್ಮ ವ್ಯವಹಾರವನ್ನು ಪಾರದರ್ಶಕವಾಗಿ ನಡೆಸಿದ್ದೇವೆ. ಇದಕ್ಕೆ ನಮಗೆ ಬಹಳ ಹೆಮ್ಮೆಯಿದೆ” ಎಂದು ಹೇಳಿತ್ತು.

ಇದನ್ನೂ ಓದಿ: ಬಾಯ್ಕಾಟ್ ಅಭಿಯಾನ: ಏರ್‌ಟೆಲ್, ವೊಡಾಫೋನ್ ವಿರುದ್ಧ ದೂರು ನೀಡಿದ ಜಿಯೋ!

ಅಂಬಾನಿ ಮತ್ತು ಅವರ ಕಂಪನಿಗಳ ಉತ್ಪನ್ನಗಳಾದ ಪೆಟ್ರೋಲ್ ಪಂಪ್, ಜಿಯೋ ಸಿಮ್, ರಿಲಯನ್ಸ್ ಸೇರಿದಂತೆ ಇತರೆ ಉತ್ಪನ್ನಗಳನ್ನು ಬಾಯ್ಕಾಟ್ ಮಾಡುವಂತೆ ಪ್ರತಿಭಟನಾ ನಿರತ ರೈತರು ಇತ್ತೀಚೆಗೆ ಕರೆ ನೀಡಿದ್ದರು. ಕರ್ನಾಟಕದಲ್ಲಿಯೂ ಯುವಕರು ಜಿಯೋ ಸಿಮ್ ಇಂದ ಪೋರ್ಟಿಂಗ್ ಅಭಿಯಾನವನ್ನು ಕೈಗೊಂಡಿದ್ದರು.

ಕೇಂದ್ರ ಸರ್ಕಾರ ತನ್ನ ಕೃಷಿ ಕಾನೂನುಗಳನ್ನು ಹಿಂಪಡೆಯಲಿ ಎಂದು ಒತ್ತಾಯಿಸಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕೃಷಿ ಕಾನೂನುಗಳು ಪರೋಕ್ಷವಾಗಿ ಅಂಬಾನಿಗೆ ಸಹಕಾರಿಯಾಗುತ್ತದೆ ಎಂಬ ಕಾರಣಕ್ಕೆ ಅಂಬಾನಿ ಕಂಪನಿಯ ಉತ್ಪನ್ನಗಳನ್ನು ಬಾಯ್ಕಾಟ್‌ ಮಾಡಬೇಕು ಎಂದು ಕರೆ ನೀಡಲಾಗಿತ್ತು.


ಇದನ್ನೂ ಓದಿ: ನಮಗೆ ಜಿಯೋ ಬೇಡ, BSNLಗೆ ಪೋರ್ಟ್ ಆಗಲು 4G ಸೇವೆ ಕೊಡಿ: KVS ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...