Homeಅಂತರಾಷ್ಟ್ರೀಯರೈತ ಹೋರಾಟ: ಭಾರತದೊಂದಿಗೆ ಮಾತನಾಡುವಂತೆ ಒತ್ತಾಯ - ಅಮೆರಿಕದ ಸಂಸದರ ಪತ್ರ

ರೈತ ಹೋರಾಟ: ಭಾರತದೊಂದಿಗೆ ಮಾತನಾಡುವಂತೆ ಒತ್ತಾಯ – ಅಮೆರಿಕದ ಸಂಸದರ ಪತ್ರ

"ಇದು ನಿರ್ದಿಷ್ಟವಾಗಿ ಅಮೆರಿಕದಲ್ಲಿರುವ ಸಿಖ್ಖರಿಗೆ ಸಂಬಂಧಿಸಿದ ಸಮಸ್ಯೆಯಾಗಿದೆ. ಆದರೂ ಇದು ಇತರ ರಾಜ್ಯಗಳ ಭಾರತೀಯ ಅಮೆರಿಕನ್ನರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ"

- Advertisement -
- Advertisement -

ದೇಶದಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ರೈತರ ಹೋರಾಟಕ್ಕೆ ಸಂಬಂಧಿಸಿದಂತೆ, ಅಮೆರಿಕದ ಏಳು ಪ್ರಭಾವಿ ಸಂಸದರ ತಂಡವೊಂದು ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಅವರಿಗೆ ಪತ್ರ ಬರೆದಿದ್ದು, ರೈತರ ಪ್ರತಿಭಟನೆಯ ವಿಚಾರವನ್ನು ತಮ್ಮ ಭಾರತೀಯ ಸಹವರ್ತಿಯೊಂದಿಗೆ ಮಾತನಾಡುವಂತೆ ಒತ್ತಾಯಿಸಿದ್ದಾರೆ.

“ಇದು ನಿರ್ದಿಷ್ಟವಾಗಿ ಅಮೆರಿಕದಲ್ಲಿರುವ ಸಿಖ್ಖರಿಗೆ ಸಂಬಂಧಿಸಿದ ಸಮಸ್ಯೆಯಾಗಿದೆ. ಆದರೂ ಇದು ಇತರ ರಾಜ್ಯಗಳ ಭಾರತೀಯ ಅಮೆರಿಕನ್ನರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ” ಎಂದು ಸಂಸದರು ಡಿ. 23 ರಂದು ಪೊಂಪಿಯೊಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಭಾರತೀಯ-ಅಮೆರಿಕನ್ ಸಂಸದೆ ಪ್ರಮೀಳಾ ಜಯಪಾಲ್ ಸೇರಿದಂತೆ ಸಂಸದರಾದ ಡೊನಾಲ್ಡ್ ನ್ಯಾಕ್ರೋಸ್, ಬ್ರೆಂಡನ್ ಎಫ್ ಬೊಯ್ಲೆ, ಬ್ರಿಯಾನ್ ಫಿಟ್ಜ್‌ಪ್ಯಾಟ್ರಿಕ್, ಮೇರಿ ಗೇ ಸ್ಕ್ಯಾನ್‌ಲಾನ್, ಡೆಬ್ಬಿ ಡಿಂಗಲ್ ಮತ್ತು ಡೇವಿಡ್ ಟ್ರೋನ್ ಈ ಪತ್ರಕ್ಕೆ ಸಹಿ ಹಾಕಿದ್ದಾರೆ ಎಂದು ಹಿಂದೂಸ್ಥಾನ್ ಟೈಮ್ಸ್‌ ವರದಿ ಮಾಡಿದೆ.

ಇದನ್ನೂ ಓದಿ: ಮಹರ್ ಸೈನಿಕರ ‘ಭೀಮಾ ಕೋರೆಗಾಂವ್’ ಹೋರಾಟ ನೆನಪಿಸುವ ಕನ್ನಡ ಹಾಡು…

“ಅನೇಕ ಭಾರತೀಯ ಅಮೆರಿಕನ್ನರ ಪ್ರಕಾರ, ಈ ಪ್ರತಿಭಟನೆ ಪಂಜಾ‌ಬ್‌ನಲ್ಲಿರುವ ತಮ್ಮ ಕುಟುಂಬ ಸದಸ್ಯರು ಮತ್ತು ಪೂರ್ವಜರ ಭೂಮಿಯನ್ನು ಹೊಂದಿರುವವರ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಹಾಗಾಗಿ ಭಾರತದಲ್ಲಿರುವ ತಮ್ಮ ಕುಟುಂಬಗಳ ಮೇಲೆ ಅವರು ಕಾಳಜಿ ಹೊಂದಿದ್ದಾರೆ. ಈ ಗಂಭೀರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ವಿದೇಶದಲ್ಲಿ ರಾಜಕೀಯ ವಾಕ್ ಸ್ವಾತಂತ್ರ್ಯದ ಬಗ್ಗೆ ಅಮೆರಿಕದ ಬದ್ಧತೆಯನ್ನು ಬಲಪಡಿಸುವದಕ್ಕೆ ಸಂಬಂಧಿಸಿದಂತೆ ನಿಮ್ಮ ಭಾರತೀಯ ಸಹವರ್ತಿಯನ್ನು ಸಂಪರ್ಕಿಸಲು ನಾವು ನಿಮ್ಮನ್ನು ಈ ಪತ್ರದ ಮೂಲಕ ಒತ್ತಾಯಿಸುತ್ತಿದ್ದೇವೆ” ಎಂದು ಬರೆದಿದ್ದಾರೆ.

“ಭಾರತದ ರಾಜಕೀಯ ಪ್ರತಿಭಟನೆಗಳ ಕುರಿತು ಅಮೆರಿಕಾಗೆ ಪರಿಚಯವಿರುವುದರಿಂದ, ಸದ್ಯದ ಪರಿಸ್ಥಿತಿಯಲ್ಲಿ ಭಾರತಕ್ಕೆ ಸಲಹೆಗಳನ್ನು ನೀಡಬಹುದು. ರಾಷ್ಟ್ರವೊಂದರ ಸಂಸದರಾಗಿ, ಅಸ್ತಿತ್ವದಲ್ಲಿರುವ ಕಾನೂನಿಗೆ ಅನುಸಾರವಾಗಿ ರಾಷ್ಟ್ರೀಯ ನೀತಿಯನ್ನು ನಿರ್ಧರಿಸುವ ಭಾರತ ಸರ್ಕಾರದ ಹಕ್ಕನ್ನು ನಾವು ಗೌರವಿಸುತ್ತೇವೆ. ಈ ಕೃಷಿ ಕಾನೂನುಗಳು ತಮ್ಮ ಆರ್ಥಿಕ ಭದ್ರತೆಯ ಮೇಲಿನ ಆಕ್ರಮಣ ಮಾಡುತ್ತದೆ ಎಂದು ಹಲವಾರು ಭಾರತೀಯ ರೈತರು ಭಾವಿಸಿದ್ದು, ಇದರ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಭಾರತ ಮತ್ತು ವಿದೇಶದಲ್ಲಿರುವವರ ಹಕ್ಕುಗಳನ್ನು ನಾವು ಅಂಗೀಕರಿಸಿದ್ದೇವೆ” ಎಂದು ಸಂಸದರು ತಿಳಿಸಿದ್ದಾರೆ.

ಇದನ್ನೂ ಓದಿ: ಡಿಸೆಂಬರ್ 25 – ಅಂಬೇಡ್ಕರ್ ‘ಮನುಸ್ಮೃತಿ’ ಎಂಬ ‘ಭೂತಕಾಲದ ಸಂವಿಧಾನ’ವನ್ನು ಸುಟ್ಟ ದಿನ

ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪಂಜಾಬ್, ಹರಿಯಾಣ ಮತ್ತು ಇತರೆ ಹಲವು ರಾಜ್ಯಗಳ ಸಾವಿರಾರು ರೈತರು ನವೆಂಬರ್ 26 ರಿಂದ ದೆಹಲಿಯ ವಿವಿಧ ಭಾಗಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಇಂದಿಗೆ 30ನೇ ದಿನಕ್ಕೆ ಕಾಲಿಟ್ಟಿದೆ.

ಈ ಹಿಂದೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಸಹ ಭಾರತೀಯ ರೈತರ ಹೋರಾಟಕ್ಕೆ ಬೆಂಬಲಿಸಿದ್ದರು. ಇದಕ್ಕೆ ಭಾರತದ ಆಕ್ಷೇಪ ವ್ಯಕ್ತಪಡಿಸಿದರೂ ಲೆಕ್ಕಿಸದೆ ಜಗತ್ತಿನ ಎಲ್ಲಾ ಶಾಂತಿಯುತ ಹೋರಾಟಗಳನ್ನು ಕೆನಡಾ ಬೆಂಬಲಿಸುತ್ತದೆ ಎಂದು ಘೋಷಿಸಿದ್ದರು.

ರೈತರ ಪ್ರತಿಭಟನೆ ವಿಚಾರವಾಗಿ ವಿದೇಶಿ ನಾಯಕರು ಮತ್ತು ರಾಜಕಾರಣಿಗಳು ಇತ್ತೀಚೆಗೆ ನೀಡುತ್ತಿರುವ ಹೇಳಿಕೆಗಳನ್ನು ಭಾರತವು ವಿರೋಧಿಸಿದ್ದು, ಇಂತಹ ಹೇಳಿಕೆಗಳು ‘ಅನಪೇಕ್ಷಿತ’ ಮತ್ತು ‘ಅನಗತ್ಯ’ ಎಂದು ಅಭಿಪ್ರಾಯ ವ್ಯಕ್ತಪಡಿಸಿತ್ತು. ಜೊತೆಗೆ ಈ ವಿಚಾರವು ಪ್ರಜಾಪ್ರಭುತ್ವ ರಾಷ್ಟ್ರದ ಆಂತರಿಕ ವ್ಯವಹಾರಗಳಿಗೆ ಸಂಬಂಧಿಸಿದ್ದು ಎಂದು ಪ್ರತಿಪಾದಿಸಿದೆ.

ಇದನ್ನೂ ಓದಿ: ಅಜಾತಶತ್ರು? ಆಹಾ ಗೆಳೆಯನೇ ಇದು ಅತ್ಯಂತ ಕೆಟ್ಟ ಬಿರುದು!- ’ಭಗತ್‌ ಸಿಂಗ್ ಜೈಲ್ ಡೈರಿ’

“ಭಾರತದ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಕೆಲವರು ಹೇಳಿಕೆ ನೀಡುತ್ತಿದ್ದಾರೆ. ವಿಶೇಷವಾಗಿ ಪ್ರಜಾಪ್ರಭುತ್ವ ರಾಷ್ಟ್ರವೊಂದರ ಆಂತರಿಕ ವ್ಯವಹಾರಗಳಿಗೆ ಸಂಬಂಧಿಸಿದ ವಿಚಾರಗಳಿಗೆ ಇಂತಹ ಹೇಳಿಕೆಗಳು ಅನಗತ್ಯ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದರು.

ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ಇತ್ತೀಚೆಗೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.

ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.


ಇದನ್ನೂ ಓದಿ: ತಮಿಳುನಾಡಿನಲ್ಲಿ ಮತ್ತೊಂದು ಹೊಸ ಪಕ್ಷ – ಕರುಣಾನಿಧಿ ಹಿರಿಯ ಪುತ್ರ ಎಂ.ಕೆ. ಅಳಗಿರಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...