Homeಮುಖಪುಟದೆಹಲಿಯಲ್ಲಿ ಪರಸ್ಪರ ಗುಲಾಬಿ ವಿನಿಮಯ, ಒಟ್ಟಿಗೆ ಊಟ ಮಾಡಿದ ರೈತರು ಮತ್ತು ಪೊಲೀಸರು!

ದೆಹಲಿಯಲ್ಲಿ ಪರಸ್ಪರ ಗುಲಾಬಿ ವಿನಿಮಯ, ಒಟ್ಟಿಗೆ ಊಟ ಮಾಡಿದ ರೈತರು ಮತ್ತು ಪೊಲೀಸರು!

- Advertisement -
- Advertisement -

ದೆಹಲಿ ಇಂದು ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾಗಿದೆ. ಲಕ್ಷಾಂತರ ಟ್ರ್ಯಾಕ್ಟರ್‌ಗಳಲ್ಲಿ ದೆಹಲಿ ರಸ್ತೆಗಿಳಿದ ರೈತರು ಪರೇಡ್ ನಡೆಸಿ ಗಮನ ಸೆಳೆದಿದ್ದಾರೆ. ಒಂದೆರೆಡು ಸ್ಥಳಗಳಲ್ಲಿ ರೈತರು ಮತ್ತು ಪೊಲೀಸರ ನಡುವೆ ಘರ್ಷಣೆ ಸಂಭವಿಸಿದೆ. ಅದರಲ್ಲಿ ಒಬ್ಬ ರೈತ ಮೃತಪಟ್ಟಿದ್ದಾನೆ. ಇನ್ನು ರೈತರ ಒಂದು ಗುಂಪು ಮಾರ್ಗ ಉಲ್ಲಂಘಿಸಿ ಕೆಂಪು ಕೋಟೆ ನುಗ್ಗಿ ಧ್ವಜ ಹಾರಿಸಿವೆ. ಇಷ್ಟೆಲ್ಲದರ ನಡುವೆಯೂ ಶೇ.99 ರಷ್ಟು ಟ್ರ್ಯಾಕ್ಟರ್ ರ್ಯಾಲಿ ಶಾಂತಿಯುತವಾಗಿ ನಡೆದಿದೆ. ಈ ನಡುವೆ ಕೆಲವೆಡೆ ರೈತರು ಮತ್ತು ಪೊಲೀಸರು ಪರಸ್ಪರ ಗುಲಾಬಿ ವಿನಿಮಯ ಮಾಡಿಕೊಂಡಿದ್ದಲ್ಲದೇ ಒಟ್ಟಿಗೆ ಊಟ ಮಾಡಿ ಸೌಹಾರ್ದತೆ ಮೆರೆದಿದ್ದಾರೆ.

ಉತ್ತರ ಪ್ರದೇಶ ಮತ್ತು ದೆಹಲಿ ನಡುವಿನ ಚಿಲ್ಲಾ ಗಡಿಯಲ್ಲಿ ಹೋರಾಟನಿರತ ರೈತರು ಮತ್ತು ಪೊಲೀಸರು ಪರಸ್ಪರ ಗುಲಾಬಿ ವಿನಿಮಯ ಮಾಡಿಕೊಂಡು ಸಾವಿರಾರು ಜನರ ಹೃದಯ ಗೆದ್ದಿದ್ದಾರೆ. ನೋಯ್ಡಾ ಹೆಚ್ಚುವರಿ ಪೊಲೀಸ್ ಉಪ ಆಯುಕ್ತ ರಣವಿಜಯ್ ಸಿಂಗ್ ಅವರಿಗೆ ಭಾರತ್ ಕಿಸಾನ್ ಒಕ್ಕೂಟದ (ಭನು) ಯುಪಿ ಅಧ್ಯಕ್ಷ ಯೋಗೇಶ್ ಪ್ರತಾಪ್ ಸಿಂಗ್ ಅವರು ಗುಲಾಬಿಗಳನ್ನು ನೀಡಿದರು. ರಣವಿಜಯ್ ಸಿಂಗ್ ಪ್ರತಿಭಟನಾಕಾರ ರೈತರು ಸಿದ್ಧಪಡಿಸಿದ ಊಟ ಮಾಡುವು ಮೂಲಕ ಶಾಂತಿ ಸಂದೇಶ ಸಾರಿದ್ದಾರೆ.

ಭಾರತ್ ಕಿಸಾನ್ ಒಕ್ಕೂಟದ ಸದಸ್ಯರು ಪ್ರತಿಭಟನಾ ಸ್ಥಳಕ್ಕೆ ಹೋಗಲು ಪೊಲೀಸರು ತಡೆಯುವುದಿಲ್ಲ ಎಂದು ಘೋಷಿಸಿದಾಗ ಈ ಘಟನೆ ನಡೆದಿದ್ದು ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಕಳೆದ ಎರಡು ತಿಂಗಳಿನಿಂದ ರಾಜ್ಯ ಪೊಲೀಸರು ಜನರನ್ನು ಚಿಲ್ಲಾ ಗಡಿ ತಲುಪಲು ಬಿಟ್ಟಿರಲಿಲ್ಲ. ಮೀರತ್ ಮತ್ತು ಆಗ್ರಾದಲ್ಲಿ ಟ್ರ್ಯಾಕ್ಟರ್‌ಗಳನ್ನು ತಡೆಯಲಾಗಿತ್ತು.


ಇದನ್ನೂ ಓದಿ: ದೆಹಲಿ ಟ್ರ್ಯಾಕ್ಟರ್ ಪರೇಡ್ ಸಂಪೂರ್ಣ ಯಶಸ್ವಿ: ಶೇ. 99 ಶಾಂತಿಯುತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...