Homeಕರ್ನಾಟಕಬಗರ್ ಹುಕುಂ ಸಾಗುವಳಿದಾರರಿಗೆ ಕಿರುಕುಳ: ಸುಳ್ಳು ಕೇಸುಗಳಲ್ಲಿ ಬಂಧಿಯಾಗುತ್ತಿದ್ದಾರೆ ಅನ್ನದಾತರು

ಬಗರ್ ಹುಕುಂ ಸಾಗುವಳಿದಾರರಿಗೆ ಕಿರುಕುಳ: ಸುಳ್ಳು ಕೇಸುಗಳಲ್ಲಿ ಬಂಧಿಯಾಗುತ್ತಿದ್ದಾರೆ ಅನ್ನದಾತರು

ಸುಮಾರು 10-15 ವರ್ಷದಿಂದ ಸಾಗುವಳಿ ಮಾಡಿಕೊಂಡು ಬಂದಿರುವ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಗುಬ್ಬಿ ತಾಲೂಕು ಗಂಗಯ್ಯನಪಾಳ್ಯದ ಗೋಮಾಳದಲ್ಲಿ ಸಾಗುವಳಿ ಮಾಡುತ್ತಿದ್ದ ಮೂವರು ರೈತರ ಮೇಲೆ ಪ್ರಕರಣ ದಾಖಲಿಸಲಾಗಿದೆ.

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ಬಗರ್ ಹುಕುಂ ಸಾಗುವಳಿ ರೈತರನ್ನು ಒಕ್ಕಲೆಬ್ಬಿಸುವ, ಬೆದರಿಕೆ ಹಾಕುವ ಮತ್ತು ಅವರ ಮೇಲೆ ಸುಳ್ಳು ಪ್ರಕರಣ ದಾಖಲಿಸುವ ಪ್ರಕರಣಗಳು ಮುಂದುವರಿದಿವೆ. ಅರಣ್ಯ ಇಲಾಖೆ ಸಿಬ್ಬಂದಿ ಸಾಗುವಳಿ ಜಮೀನಿನಲ್ಲಿ ರೈತರು ಕಟ್ಟಿಕೊಂಡಿದ್ದ ಗುಡಿಸಲು ಧ್ವಂಸ, ಬೆಳೆ ನಾಶ ಮಾಡಿದ್ದು ರೈತರ ಮೇಲೆ ಹಲ್ಲೆ, ದೌರ್ಜನ್ಯಗಳು ಕೂಡ ನಡೆಸಲಾಗಿದೆ ಎಂಬ ದೂರುಗಳು ಕೇಳಿಬಂದಿವೆ.

ಜಿಲ್ಲೆಯಲ್ಲಿ ಸುಮಾರು 1.5 ಲಕ್ಷ ಮಂದಿ ಬಗರ್ ಹುಕುಂ ಸಾಗುವಳಿದಾರರಿದ್ದು ಸರ್ಕಾರಕ್ಕೆ ಸಾಗುವಳಿ ಚೀಟಿ ನೀಡುವಂತೆ ಅರ್ಜಿ ಹಾಕಿಕೊಂಡಿದ್ದಾರೆ. ಫಾರಂ 57 ಅನ್ನು ಸಲ್ಲಿಸಿದ್ದಾರೆ. ಭೂಮಿ ಇಲ್ಲದೆ ಗೋಮಾಳದಲ್ಲಿ ಉಳುಮೆ ಮಾಡಿಕೊಂಡರೆ ಅರಣ್ಯ ಇಲಾಖೆ ಸಿಬ್ಬಂದಿಯ ಕಾಟ ತಪ್ಪಿಲ್ಲ. ಕೊರೊನಾ ಸಂಕಷ್ಟದಲ್ಲಿರುವ ರೈತರು ಭೂಮಿ ಉಳುಮೆ ಮಾಡಿಕೊಂಡು ಜೀವನ ಸಾಗಿಸಲು ಮುಂದಾದರೆ ಅರಣ್ಯ ಇಲಾಖೆ ಬಿಡುತ್ತಿಲ್ಲ.

ಸುಮಾರು 10-15 ವರ್ಷದಿಂದ ಸಾಗುವಳಿ ಮಾಡಿಕೊಂಡು ಬಂದಿರುವ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಗುಬ್ಬಿ ತಾಲೂಕು ಗಂಗಯ್ಯನಪಾಳ್ಯದ ಗೋಮಾಳದಲ್ಲಿ ಸಾಗುವಳಿ ಮಾಡುತ್ತಿದ್ದ ಮೂವರು ರೈತರ ಮೇಲೆ ಪ್ರಕರಣ ದಾಖಲಿಸಿದೆ. ತುಮಕೂರು ತಾಲೂಕು ಶಂಭೋನಹಳ್ಳಿಯ ಸರ್ವೇ ನಂಬರ್ 39, 40 ಮತ್ತು 41ರಲ್ಲಿ ಸಾಗುವಳಿ ಮಾಡುತ್ತಿದ್ದ 36 ಮಂದಿ ರೈತರ ಮೇಲೆ ಅರಣ್ಯ ಇಲಾಖೆ ಬೆಲೆ ಬಾಳುವ ಮರಗಳನ್ನು ಕಡಿದಿದ್ದಾರೆ ಎಂದು ಕೇಸ್ ದಾಖಲಿಸಿದೆ.

ಶಂಭೋನಹಳ್ಳಿಯ ಮೂರು ಸರ್ವೇ ನಂಬರ್‌ಗಳಲ್ಲಿರುವ ಗೋಮಾಳದಲ್ಲಿ 36 ರೈತರು ಕಳೆದ ಮೂರು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಕ್ಕೆ ಸೇರಿದ ಬಡ ರೈತರು ಜೀವನೋಪಾಯಕ್ಕಾಗಿ ಭೂಮಿ ಉಳುಮೆ ಮಾಡಿಕೊಂಡರೆ ಈಗ ಇವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಇದರಿಂದ ಬಡ ರೈತರು ಹೆದರಿಕೊಂಡಿದ್ದಾರೆ. ಪೊಲೀಸರು ಗ್ರಾಮಕ್ಕೆ ಬಂದರೆ ರೈತರು ಬಚ್ಚಿಟ್ಟುಕೊಳ್ಳುವಂತಹ ಪರಿಸ್ಥಿತಿ ಬಂದಿದೆ ಎಂದು ಹೆಸರು ಬಹಿರಂಗಪಡಿಸಲು ಇಚ್ಚಿಸದ ರೈತರೊಬ್ಬರು ಅಳಲು ತೋಡಿಕೊಂಡಿದ್ದಾರೆ. ಸಂಸದ ಜಿ.ಎಸ್. ಬಸವರಾಜು ಕೋರ ಪೊಲೀಸರಿಗೆ ಹೇಳಿ ಪ್ರಕರಣ ದಾಖಲಿಸುವಂತೆ ಮಾಡಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ.

ಶಂಭೋನಹಳ್ಳಿ ಗ್ರಾಮದ ಸರ್ವೇ ನಂಬರ್ 38ರಲ್ಲಿ ಬಲಾಢ್ಯರಿಗೆ ಸಾಗುವಳಿ ಚೀಟಿ ನೀಡಲಾಗಿದೆ. ಸಾಕಷ್ಟು ಜಮೀನು ಇರುವ ಭೂಮಾಲಿಕರಿಗೆ ಅಧಿಕಾರಿಗಳು ಲಂಚ ಪಡೆದು ಸಾಗುವಳಿ ಚೀಟಿ ನೀಡುತ್ತಿದ್ದಾರೆ. ಸ.ನ. 38ರಲ್ಲಿ ಒಂದೇ ಸಮುದಾಯದ ರೈತರಿಗೆ ಭೂಮಿ ಮಂಜೂರು ಮಾಡಿದೆ. ಹಾಗಾಗಿ ಹಿಂದುಳಿದವರು ಮತ್ತು ಪರಿಶಿಷ್ಟರು ಪಕ್ಕದಲ್ಲಿದ್ದರೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಸಂಸದರ ಮೇಲೆ ಒತ್ತಡ ತಂದು ಪ್ರಕರಣ ದಾಖಲಿಸುವಂತೆ ಮಾಡಲಾಗಿದೆ ಎಂದು ದೂರಲಾಗಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಸಿ.ಅಜ್ಜಪ್ಪ ನಿರಂತರ ಹೋರಾಟದ ಫಲವಾಗಿ ಕೆಲವು ಕಡೆ ಸಾಗುವಳಿ ಚೀಟಿ ನೀಡಿದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮುತುವರ್ಜಿಯಿಂದ ಕೆಲವು ರೈತರಿಗೆ ಸಾಗುವಳಿ ಚೀಟಿ ದೊರೆತಿವೆ.  ಚಿ.ನಾ.ಹಳ್ಳಿ, ಗುಬ್ಬಿ ಮತ್ತು ತುಮಕೂರು ತಾಲೂಕುಗಳಲ್ಲಿ 6-7 ಸಾವಿರ ಮಂದಿ ರೈತರಿಗೆ ಸಾಗುವಳಿ ಚೀಟಿ ನೀಡಲಾಗಿದೆ  ಆದರೆ  ಡಾ.ನಂಜುಂಡಪ್ಪ ವರದಿ ಪ್ರಕಾರ ಅತೀ ಹಿಂದುಳಿದ ತಾಲೂಕು ಗಳಾಗಿರುವ ಪಾವಗಡ, ಮಧುಗಿರಿ, ಶಿರಾ  ಕೊರಟಗೆರೆಯಲ್ಲಿ ಸಾಗುವಳಿ ಚೀಟಿ ನೀಡಿಲ್ಲ. ಜಮೀನು ಇರುವ ರೈತರಿಗೆ ಅಧಿಕಾರಿಗಳು ಸಾಗುವಳಿ ಭೂಮಿ ಮಂಜೂರು ಮಾಡುತ್ತಾರೆ. ಇದರಿಂದ ಭೂರಹಿತರಿಗೆ ಜಮೀನು ದೊರೆಯುತ್ತಿಲ್ಲ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಹಸಿರುಶಾಲು ಹೊದ್ದುಕೊಂಡು ರೈತಪರವೆಂದು ಹೇಳಿಕೊಳ್ಳುತ್ತಾರೆ. ರೈತರು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಕಿವಿಗೆ ಹಾಕಿಕೊಳ್ಳುವುದಿಲ್ಲ. ಕೊರೊನಾ ಸಂದರ್ಭವನ್ನು ಬಳಸಿಕೊಂಡು ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆ ಬ್ಬಿಸುವುದು, ಪ್ರಕರಣ ದಾಖಲಿಸುತ್ತಿದ್ದರೂ ತಡೆಯುವ ಕೆಲಸ ಮಾಡುತ್ತಿಲ್ಲ. ಕೇವಲ ತೋರಿಕೆಗಾಗಿ ಹಸಿರು ಶಾಲು ಹಾಕಿಕೊಂಡರೆ ಅದರಿಂದ ರೈತರಿಗೆ ಏನೂ ಪ್ರಯೋಜನವಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಗರ್ ಹುಕುಂ ಸಾಗುವಳಿದಾರರ ಮೇಲೆ ನಡೆಯುತ್ತಿರುವ ಪೊಲೀಸ್ ಇಲಾಖೆ, ಅರಣ್ಯ ಇಲಾಖೆಗಳ ದಾಳಿ ಮತ್ತು ಕಿರುಕುಳ ನಿಲ್ಲಿಸಬೇಕು. ಒಕ್ಕಲೆಬ್ಬಿಸುವುದನ್ನು ಬಿಟ್ಟು ಸಾಗುವಳಿ ಚೀಟಿ ಕೊಡಬೇಕು. ಪೊಲೀಸ್ ಠಾಣೆಗಳಲ್ಲಿ ಬಡವರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಕೈಬಿಡಬೇಕು ಎಂದು ಸಾಗುವಳಿದಾರರು ಒತ್ತಾಯಿಸಿದ್ದಾರೆ.  ರೌಡಿಗಳು, ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿರುವವರ ಮೇಲಿನ ಪ್ರಕರಣಗಳನ್ನು  ಕೈಬಿಡುವ ಸರ್ಕಾರ ಬಡವರ ಮೇಲೆ ಪ್ರಕರಣಗಳನ್ನು ದಾಖಲಿಸುತ್ತದೆ ಎಂಬ ಆಕ್ರೋಶ ವ್ಯಕ್ತವಾಗಿದೆ.


ಇದನ್ನೂ ಓದಿ: ಬಗರ್ ಹುಕುಂ ಸಾಗುವಳಿ ವಿವಾದ; ಮಹಿಳೆಯನ್ನು ಎಳೆದಾಡಿ, ಆಕೆಯ ಪತಿ ಕೈ ಕಚ್ಚಿದ ಫಾರೆಸ್ಟ್ ಗಾರ್ಡ್!

Also Read: Save India´on Quit India Day: Nationwide Farmers, Trade Unions protests

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...