Homeಮುಖಪುಟಚಳವಳಿ ವೇಳೆ ಪೊಲೀಸರು ಜರುಗಿಸಿದ ಕ್ರಮಗಳಿಂದ ರೈತರು ಸತ್ತಿಲ್ಲ: ಕೇಂದ್ರ ಸರ್ಕಾರ

ಚಳವಳಿ ವೇಳೆ ಪೊಲೀಸರು ಜರುಗಿಸಿದ ಕ್ರಮಗಳಿಂದ ರೈತರು ಸತ್ತಿಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

ಕೃಷಿ ಕಾನೂನುಗಳ ವಿರುದ್ಧ ವರ್ಷವಿಡೀ ನಡೆದ ಹೋರಾಟದ ಸಂದರ್ಭದಲ್ಲಿ “ಪೊಲೀಸರು ಜರುಗಿಸಿದ ಕ್ರಮಗಳಿಂದ ಯಾವುದೇ ರೈತರು ಸಾವನ್ನಪ್ಪಿಲ್ಲ” ಎಂದು ಕೇಂದ್ರ ಸರ್ಕಾರ ಶುಕ್ರವಾರ ಹೇಳಿದೆ.

ರೈತರ ವಿರುದ್ಧದ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು ಸೇರಿದಂತೆ ರೈತರ ಪ್ರಮುಖ ಬೇಡಿಕೆಗಳನ್ನು ಜಾರಿಗೊಳಿಸಲು ಕ್ರಮ ವಹಿಸಲಾಗುವುದು ಎಂದು ಕೇಂದ್ರ ಸರ್ಕಾರ ಲಿಖಿತವಾಗಿ ಭರವಸೆ ನೀಡಿದ ಬಳಿಕ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಹೋರಾಟವನ್ನು ಗುರುವಾರ ಹಿಂಪಡೆದಿದೆ.

ಶುಕ್ರವಾರ ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, “ರೈತ ಚಳವಳಿಯಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರದ ನೀಡಬೇಕಾದದ್ದು ರಾಜ್ಯ ಸರ್ಕಾರಗಳಿಗೆ ಸಂಬಂಧಿಸಿದೆ” ಎಂದು ತಿಳಿಸಿದ್ದಾರೆ.

ರೈತರ ಆಂದೋಲನದ ಸಂದರ್ಭದಲ್ಲಿ ಪೊಲೀಸರ ಕ್ರಮದಿಂದ ಯಾವುದೇ ರೈತರು ಸಾವನ್ನಪ್ಪಿಲ್ಲ ಎಂದು ಅವರು ಹೇಳಿದ್ದಾರೆ. “ಪ್ರತಿಭಟನೆಯ ಸಂದರ್ಭದಲ್ಲಿ ಸಾವಿಗೀಡಾದ ರೈತರ ಬಗ್ಗೆ ಯಾವುದೇ ಮಾಹಿತಿ ಇಲ್ಲ” ಎಂದು ಕೇಂದ್ರ ಸರ್ಕಾರ ಜೂನ್‌ನಲ್ಲಿ ಸಂಸತ್ತಿನಲ್ಲಿ ಹೇಳಿತ್ತು.

ಕಾಂಗ್ರೆಸ್ ನಾಯಕ ಧೀರಜ್ ಪ್ರಸಾದ್ ಸಾಹು ಮತ್ತು ಎಎಪಿ ನಾಯಕ ಸಂಜಯ್ ಸಿಂಗ್ ಅವರ ಜಂಟಿ ಪ್ರಶ್ನೆಗೆ ತೋಮರ್ ಈಗ ಪ್ರತಿಕ್ರಿಯಿಸಿದ್ದಾರೆ.

ರೈತರ ಪ್ರತಿಭಟನೆಯ ವೇಳೆ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಜೀವನೋಪಾಯ ಮತ್ತು ಆರ್ಥಿಕ ಪರಿಹಾರವನ್ನು ನೀಡಲು ಸರ್ಕಾರ ಚಿಂತಿಸಿದೆಯೇ ಎಂದು ಸದಸ್ಯರು ಪ್ರಶ್ನಿಸಿದ್ದಾರೆ. ಒಂದು ವರ್ಷದಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸಾವಿಗೀಡಾದ ರೈತರ ಬಗ್ಗೆ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳು ದನಿ ಎತ್ತುತ್ತಲೇ ಇವೆ.

ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ರೈತರು, ಕೋವಿಡ್-19 ಮತ್ತು ವ್ಯತಿರಿಕ್ತ ಹವಾಮಾನ ಪರಿಸ್ಥಿತಿಗಳನ್ನು ಎದುರಿಸಿ ಹೋರಾಟ ನಡೆಸಿದ್ದರು. ನವೆಂಬರ್ 2020ರ ಅಂತ್ಯದಿಂದ ದೆಹಲಿಯ ಗಡಿಯಲ್ಲಿ ಹೋರಾಟ ನಡೆಸಿದರು. ಪ್ರತಿಭಟನೆಯ ಸಂದರ್ಭದಲ್ಲಿ 700 ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದಾರೆ ಎಂದು ಎಸ್‌ಕೆಎಂ ಹೇಳಿದೆ.

“ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಹಿಂದೆ ‘ಶ್ರೀಮಂತ ರೈತರು’ ಹೆಚ್ಚಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಪಟಿಯಾಲಾದ ಪಂಜಾಬಿ ವಿಶ್ವವಿದ್ಯಾಲಯದ ಇಬ್ಬರು ಅರ್ಥಶಾಸ್ತ್ರಜ್ಞರು ನಡೆಸಿದ ಅಧ್ಯಯನವು ನೀಡಿದ ವರದಿ ಸರ್ಕಾರದ ಹೇಳಿಕೆಗೆ ವಿರುದ್ಧವಾಗಿತ್ತು. ಪ್ರತಿಭಟನೆಯ ಸಮಯದಲ್ಲಿ ಸಾವನ್ನಪ್ಪಿದವರು ಸರಾಸರಿ 2.94 ಎಕರೆಗಿಂತ ಹೆಚ್ಚು ಭೂಮಿಯನ್ನು ಸಾಗುವಳಿ ಮಾಡುತ್ತಿರಲಿಲ್ಲ. ಅವರೆಲ್ಲರೂ ಸಣ್ಣ ಮಟ್ಟದ ರೈತರಾಗಿದ್ದರು” ಎಂದು ‘ದಿ ವೈರ್‌’ ವರದಿ ಮಾಡಿತ್ತು.

ಎಂಎಸ್‌ಪಿ ಕುರಿತ ಪ್ರತ್ಯೇಕ ಪ್ರಶ್ನೆಗಳಿಗೆ ಉತ್ತರಿಸಿದ ತೋಮರ್, “ಶೂನ್ಯ ಬಜೆಟ್ ಆಧಾರಿತ ಕೃಷಿಯನ್ನು ಉತ್ತೇಜಿಸಲು, ದೇಶದ ಬದಲಾಗುತ್ತಿರುವ ಅಗತ್ಯಗಳಿಗೆ ಅನುಗುಣವಾಗಿ ಬೆಳೆ ಮಾದರಿಯನ್ನು ಬದಲಾಯಿಸಲು, ಎಂಎಸ್‌ಪಿಯನ್ನು ಹೆಚ್ಚು ಪರಿಣಾಮಕಾರಿ ಹಾಗೂ ಪಾರದರ್ಶಕಗೊಳಿಸಲು ಸಮಿತಿಯನ್ನು ರಚಿಸಲಾಗುತ್ತಿದೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.


ಇದನ್ನೂ ಓದಿರಿ: ಹರಿಯಾಣದ ಹಳ್ಳಿಗಳಿಗೆ ತೆರಳಿ ಧನ್ಯವಾದ ತಿಳಿಸುತ್ತಿರುವ ಪಂಜಾಬ್ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...