Homeಮುಖಪುಟ'ದೆಹಲಿ ಚಲೋ ಪ್ರತಿಭಟನೆಗೆ ರೈತರು ಬೆಂಬಲ ನೀಡುತ್ತಿಲ್ಲ..'; ಮಧ್ಯಪ್ರದೇಶ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಆರೋಪ

‘ದೆಹಲಿ ಚಲೋ ಪ್ರತಿಭಟನೆಗೆ ರೈತರು ಬೆಂಬಲ ನೀಡುತ್ತಿಲ್ಲ..’; ಮಧ್ಯಪ್ರದೇಶ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಆರೋಪ

- Advertisement -
- Advertisement -

“ದೆಹಲಿ ಮತ್ತು ಇತರ ರಾಜ್ಯಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ರೈತರ ಬೆಂಬಲವಿಲ್ಲ. ಪ್ರತಿಭಟನಾಕಾರರು ರೈತ ಸಮುದಾಯದ ನಿಜವಾದ ಭಾವನೆಗಳನ್ನು ಪ್ರತಿನಿಧಿಸುವುದಿಲ್ಲ” ಎಂದು ಮಧ್ಯಪ್ರದೇಶ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಶನಿವಾರ ಹೇಳಿದ್ದಾರೆ.

ರೈತ ನಾಯಕ ಎಂದು ಹೇಳಿಕೊಳ್ಳುವ ಸಚಿವ ಪಟೇಲ್, “ರೈತ ನಾಯಕನಾದ ನನಗೆ ರೈತರ ಸಮಸ್ಯೆಗಳ ಬಗ್ಗೆ ಅರಿವಿದೆ. ಕೆಲವರು ರೈತರ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ರೈತರು ಪ್ರತಿಭಟನಾಕಾರರೊಂದಿಗೆ ಇಲ್ಲ” ಎಂದು ಹೇಳಿದ ಪಟೇಲ್, ಹರ್ಯಾಣ ಮತ್ತು ಪಂಜಾಬ್‌ನಲ್ಲಿ ಇತ್ತೀಚಿನ ಬೆಳವಣಿಗೆಗಳನ್ನು ಅವರು ಸಾಕ್ಷಿಯಾಗಿ ತೋರಿಸಿದರು, ರೈತರು ಹೋರಾಟಗಳಲ್ಲಿ ಭಾಗವಹಿಸಲಿಲ್ಲ ಎಂದು ಹೇಳಿದರು.

ಬಿಜೆಪಿ ಸರ್ಕಾರ ನಿರಂತರವಾಗಿ ರೈತರ ಕಲ್ಯಾಣಕ್ಕೆ ಆದ್ಯತೆ ನೀಡಿದೆ. ಬಿಜೆಪಿ ಸರ್ಕಾರದಲ್ಲಿ ಸವಲತ್ತುಗಳನ್ನು ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಈ ಮಧ್ಯೆ, ಪಂಜಾಬ್‌ನ ಶಂಭು ಮತ್ತು ಖಾನೌರಿ ಗಡಿಯಲ್ಲಿ ರೈತರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಗಾಗಿ ಕಾನೂನು ಖಾತರಿ, ಸಾಲ ಮನ್ನಾ ಮತ್ತು ಕೃಷಿ ಸುಧಾರಣೆಗಳಿಗೆ ಒತ್ತಾಯಿಸಿ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಫೆಬ್ರವರಿ 13, 2023 ರಂದು, ಭದ್ರತಾ ಪಡೆಗಳು ರೈತರನ್ನು ದೆಹಲಿಗೆ ಹೋಗದಂತೆ ತಡೆದು, ಪಂಜಾಬ್‌ನ ಶಂಭು ಮತ್ತು ಖಾನೌರಿ ಗಡಿಯಲ್ಲಿ ಬಿಡಾರ ಹೂಡಿದ್ದಾರೆ. ಶನಿವಾರ, ಹರಿಯಾಣ ಪೊಲೀಸರು ಶಂಭು ಗಡಿಯಲ್ಲಿ ಪ್ರತಿಭಟನಾ ನಿರತ ರೈತರನ್ನು ಅಶ್ರುವಾಯು ಶೆಲ್‌ಗಳೊಂದಿಗೆ ಚದುರಿಸಿದರು.

ಇದನ್ನೂ ಓದಿ; ಇಂಡಿಯಾ ಬಣದ ನಾಯಕತ್ವವನ್ನು ಕಾಂಗ್ರೆಸ್ ಸಮರ್ಥಿಸಿಕೊಳ್ಳಬೇಕು: ಒಮರ್ ಅಬ್ದುಲ್ಲಾ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...