Homeಕರ್ನಾಟಕರೈತ ವಿರೋಧಿ ಕಾಯ್ದೆಗೆ ಜೋತು ಬಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ : ನಿಲುವು ಸ್ಪಷ್ಟಡಿಸುವಂತೆ ಸಿಎಂಗೆ...

ರೈತ ವಿರೋಧಿ ಕಾಯ್ದೆಗೆ ಜೋತು ಬಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ : ನಿಲುವು ಸ್ಪಷ್ಟಡಿಸುವಂತೆ ಸಿಎಂಗೆ ತುರ್ತು ಬಹಿರಂಗ ಪತ್ರ

- Advertisement -
- Advertisement -

ರೈತ ಸಂಘಟನೆಗಳ ತೀವ್ರ ಪ್ರತಿರೋಧದಿಂದಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಿಂಪಡೆದಿದ್ದ ಮೂರು ಕೃಷಿ ಕಾಯ್ದೆಗಳ ಮೂಲಕವೇ ರೈತರ ಆದಾಯ ಹೆಚ್ಚಿಸಲು ಶಿಫಾರಸು ನೀಡಿ ಎಂದು ಕರ್ನಾಟಕ ಕೃಷಿ ಬೆಲೆ ಆಯೋಗಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಸೂಚಿಸಿರುವುದಾಗಿ ಮಂಗಳವಾರ (ಫೆ.4) ವರದಿಯಾಗಿದೆ.

ಈ ಬೆನ್ನಲ್ಲೇ ರಾಜ್ಯದ ರೈತ ಸಂಘಟನೆಗಳ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತುರ್ತು ಬಹಿರಂಗ ಪತ್ರ ಬರೆದಿರುವ ಸಂಯುಕ್ತ ಹೋರಾಟ ಸಮಿತಿ ಸರ್ಕಾರದ ನಿಲುವು ಸ್ಪಷ್ಟಪಡಿಸುವಂತೆ ಒತ್ತಾಯಿಸಿದೆ. ಹೋರಾಟದ ಎಚ್ಚರಿಕೆ ನೀಡಿದೆ.

ಪತ್ರಿಕೆಯ ವರದಿಯನ್ನು ಓದಿ ನಾವು ಆಘಾತಕ್ಕೊಳಗಾಗಿದ್ದೇವೆ. ಸರ್ಕಾರದ ನಿಲುವು ಇದೇ ಆಗಿದ್ದರೆ, ಇದು ರೈತ ಕುಲಕ್ಕೆ ಮಾಡುತ್ತಿರುವ ಮಹಾದ್ರೋಹವಾಗಿದೆ. ನಾವಿದನ್ನು ಉಗ್ರವಾಗಿ ಪ್ರತಿಭಟಿಸಿ ಬೀದಿಗೆ ಇಳಿಯಬೇಕಾಗುತ್ತದೆ. ನಿಮ್ಮಿಂದ ಸ್ಪಷ್ಟನೆ ಪಡೆಯಲು ಈ ಬಹಿರಂಗ ಪತ್ರ ಬರೆಯುತ್ತಿದ್ದೇವೆ ಎಂದು ಸಮಿತಿಯ ಪ್ರಮುಖರು ಸಿಎಂಗೆ ತಿಳಿಸಿದ್ದಾರೆ.

“ರೈತರ ಆದಾಯವನ್ನು ದ್ವಿಗುಣಗೊಳಿಸುವ ಬೋಗಸ್ ಮಾತುಗಳೊಂದಿಗೆ ಬಿಜೆಪಿ ಪಕ್ಷ ಕೃಷಿ ಭೂಮಿಯನ್ನು, ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನು ಸಂಪೂರ್ಣವಾಗಿ ಕಾರ್ಪೋರೇಟ್ ಕಂಪನಿಗಳಿಗೆ ಹಸ್ತಾಂತರಿಸುವ ಹುನ್ನಾರ ನಡೆಸುತ್ತಿದೆ. ಅದರ ಭಾಗವಾಗಿ ಮೂರು ಕರಾಳ ಕೃಷಿ ಕಾನೂನುಗಳನ್ನು ಜಾರಿಗೊಳಿಸಿತ್ತು. ದೇಶದ 562 ರೈತ ಸಂಘಟನೆಗಳು ಒಂದು ವರ್ಷಕ್ಕೂ ಹೆಚ್ಚು ಸಮಯ ನಿರಂತರ ಹೋರಾಟ ನಡೆಸಿದ ಪರಿಣಾಮವಾಗಿ ಕೇಂದ್ರ ಸರ್ಕಾರ ಮೂರು ಕಾನೂನುಗಳನ್ನು ವಾಪಸ್ ಪಡೆಯಿತು. ಈ ಹೋರಾಟದ ಸಂದರ್ಭದಲ್ಲಿ 700ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದಾರೆ” ಎಂದು ಸಿಎಂಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ.

“ರೈತರ ಹೋರಾಟಕ್ಕೆ ಮಣಿದ ಸರ್ಕಾರ ಮೂರು ಕಾನೂನುಗಳನ್ನು ಹಿಂಪಡೆಯುದಾಗಿ ಹೇಳಿತ್ತು. ಆದರೆ, ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಹಿಂಬಾಗಿಲ ಮೂಲಕ ಅದನ್ನು ಜಾರಿಗೊಳಿಸಿದೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಭೂ ಸುಧಾರಣೆ, ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ಮಾಡಿರುವುದು ಅದರ ಭಾಗವಾಗಿಯೇ. ಆಗ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ರೈತರ ಹೋರಾಟಕ್ಕೆ ಬೆಂಬಲ ಕೊಟ್ಟಿತ್ತು. ಇಬ್ಬರೂ ಸೇರಿ ಹೋರಾಡೋಣ ಎಂದಿತ್ತು. 2023ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದ ರೈತ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸುತ್ತೇವೆ, ರೈತರ ಮೇಲೆ ಹಾಕಿರುವ ರಾಜಕೀಯ ಪ್ರೇರಿತ ಪ್ರಕರಣಗಳನ್ನು ವಾಪಸ್ ಪಡೆಯುತ್ತೇವೆ, ಎಂಎಸ್‌ಪಿ ಜಾರಿಗೊಳಿಸುತ್ತೇವೆ ಮತ್ತು ಬಡ್ಡಿ ರಹಿತ ಸಾಲದ ಪ್ರಮಾಣ ಹೆಚ್ಚಿಸುತ್ತೇವೆ ಎಂಬುವುದಾಗಿ ಭರವಸೆ ನೀಡಿತ್ತು” ಎಂದು ನೆನಪಿಸಲಾಗಿದೆ.

“ಬಿಜೆಪಿಯ ಕಾಯ್ದೆಗಳನ್ನು ಹಾಗೆಯೇ ಮುಂದುವರಿಸಿದ್ದೀರಿ, ಬಿಜೆಪಿ ನೇಮಿಸಿದ್ದ ಬೆಲೆ ಆಯೋಗವನ್ನು ಮುಂದಿನ ಮೂರು ವರ್ಷಗಳಿಗೆ ವಿಸ್ತರಿಸಿದ್ದೀರಿ, ಬಿಜೆಪಿ ನೀಡಿದ್ದ ಮಾರ್ಗಸೂಚಿಗಳನ್ನೇ ನಿಮ್ಮ ಸರ್ಕಾರವೂ ನೀಡಿದೆ. ಅದರಲ್ಲಿ ಕೇಂದ್ರ ಸರ್ಕಾರ ಸುಗ್ರಿವಾಜ್ಞೆ ಮಾಡಿದ್ದ, ರೈತ ಹೋರಾಟದಿಂದ ಹಿಂಪಡೆದಿರುವ ತಿದ್ದುಪಡಿ ಕಾಯ್ದೆಗಳನ್ನೇ ಉಲ್ಲೇಖಿಸಿ, ಇವುಗಳನ್ನು ಅನುಷ್ಠಾನ ಮಾಡಲು ಏನೆಲ್ಲಾ ಮಾಡಬೇಕು ಎಂದು ಅಧ್ಯಯನ ಮಾಡಿ ಶಿಫಾರಸು ಮಾಡಿ ಎಂದು ಕೇಳಿದ್ದೀರಿ. ಎಂಎಸ್‌ಪಿ ಜಾರಿ ಮಾಡುವ, ಸರ್ಕಾರ ರೈತರ ಸಹಾಯಕ್ಕೆ ಬರುವ ಒಂದೇ ಒಂದು ಮಾತೂ ಇದರಲ್ಲಿ ಇಲ್ಲ. ಇದು ನಮಗೆ ಅಪಾರ ನೋವು ತಂದಿದೆ. ಇದಕ್ಕೆ ಕೂಡಲೇ ಸರ್ಕಾರ ಉತ್ತರ ನೀಡಲೇಬೇಕಿದೆ” ಎಂದು ಸಂಯುಕ್ತ ಹೋರಾಟ ಸಮಿತಿಯ ಪತ್ರದಲ್ಲಿ ಒತ್ತಾಯಿಸಲಾಗಿದೆ.

ತೆಲಂಗಾಣ | ಎಸ್‌ಸಿ ಒಳ ಮೀಸಲಾತಿ ಜಾರಿಗೆ ಬದ್ದ ಎಂದ ಸಿಎಂ ರೇವಂತ್ ರೆಡ್ಡಿ : ಕೆನೆಪದರ ಪ್ರಸ್ತಾವನೆ ತಿರಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...