Homeಕರ್ನಾಟಕಕೃಷಿ ಮಸೂದೆಗಳನ್ನು ವಿರೋಧಿಸಿ ರೈತರಿಂದ ಬಾರುಕೋಲು ಚಳುವಳಿ

ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರಿಂದ ಬಾರುಕೋಲು ಚಳುವಳಿ

ಪೊಲೀಸರು ರಸ್ತೆ ಬಂದ್ ಮಾಡಿದ ಹಿನ್ನೆಲೆ ಫ್ರೀಡಂ ಪಾರ್ಕ್ ಬಳಿ ರಸ್ತೆಯಲ್ಲೇ ಕುಳಿತು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ, ನಿನ್ನೆ ಭಾರತ್ ಬಂದ್‌ಗೆ ಕರೆ ಕೊಟ್ಟಿದ್ದ ಅನ್ನದಾತರಿಗೆ ದೇಶಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿತ್ತು. ಇಂದು ಕೂಡ ರಾಜ್ಯದ ಹಲವು ಕಡೆಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಬಾರುಕೋಲು ಚಳುವಳಿ ನಡೆಯುತ್ತಿದೆ.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಬಾರುಕೋಲು ಮೆರವಣಿಗೆ ಮೂಲಕ ವಿಧಾನಸೌಧ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಬೆಳಗ್ಗೆ 11 ಗಂಟೆಯಿಂದ ನಗರ ರೈಲ್ವೇ ನಿಲ್ದಾಣದಿಂದ ರೈತರ ಬಾರುಕೋಲು ಪ್ರತಿಭಟನಾ ಮೆರವಣಿಗೆ ಆರಂಭವಾಗಿದೆ. ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಲು ಆಗ್ರಹಿಸಿ, ಅನ್ನದಾತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟಿದ್ದಾರೆ.

ಇದನ್ನೂ ಓದಿ: ಭಾರತ್ ಬಂದ್: ಇದು ರೈತರು-ಕಾರ್ಪೋರೇಟ್‌ ಕಂಪನಿಗಳ ನಡುವಿನ ಹೋರಾಟ – AIKSCC

ರ್‍ಯಾಲಿ ಆರಂಭಗೊಂಡು, ಶೇಷಾದ್ರಿ ರಸ್ತೆಯ ಫ್ಲೈಓವರ್ ನಿಂದ ಕೆಳಗೆ ಇಳಿಯುತ್ತಿದ್ದಂತೆ ಫ್ರೀಡಂ ಪಾರ್ಕ್ ಬಳಿ ರಸ್ತೆ ಫುಲ್ ಬ್ಲಾಕ್ ಮಾಡಿದ ಪೊಲೀಸರು, ಬ್ಯಾರಿಕೇಡ್ ಹಾಕಿ ರಸ್ತೆಗೆ ಅಡ್ಡವಾಗಿ ಹಗ್ಗ ಹಿಡಿದು ನಿಂತಿದ್ದಾರೆ. ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಮುನ್ನವೇ ರೈತರ ಪ್ರತಿಭಟನಾ ಮೆರವಣಿಗೆಯನ್ನ ತಡೆದು ನಿಲ್ಲಿಸಲು ಸಜ್ಜಾಗಿದ್ದಾರೆ.

ಪೊಲೀಸರು ರಸ್ತೆ ಬಂದ್ ಮಾಡಿದ ಹಿನ್ನೆಲೆ ಫ್ರೀಡಂ ಪಾರ್ಕ್ ಬಳಿ ರಸ್ತೆಯಲ್ಲೇ ಕುಳಿತು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಮೌರ್ಯ ಸರ್ಕಲ್​​ನಿಂದ ಕೆ.ಆರ್ ಸರ್ಕಲ್ ಕಡೆ ತೆರಳವ ಮಾರ್ಗ ಹಾಗೂ ಫ್ರೀಡಂ ಪಾರ್ಕ್​ನಿಂದ ಕೆ.ಜಿ ರಸ್ತೆಗೆ ತೆರಳುವ ಮಾರ್ಗಗಳು ಬಂದ್ ಮಾಡಲಾಗಿದೆ. ಸ್ಥಳದಲ್ಲಿ ಐನೂರಕ್ಕೂ ಹೆಚ್ಚು ಪೊಲೀಸರು ಉಪಸ್ಥಿತರಿದ್ದಾರೆ.

ಇದನ್ನೂ ಓದಿ: ಪ್ರತ್ಯೇಕ ರಾಜ್ಯದ ಕೂಗಿನ ವಿರುದ್ಧ ಗಟ್ಟಿ ದನಿ: ‘ಕರ್ನಾಟಕವೊಂದೇ’ ಅಭಿಯಾನಕ್ಕೆ ವ್ಯಾಪಕ ಬೆಂಬಲ

 

ಬ್ಯಾರಿಕೇಡ್ ದಾಟಲು ಮುಂದಾದ ಕೆಲ ರೈತರು ಮತ್ತು ಪೊಲೀಸರ ನಡುವೆ ನೂಕಾಟ, ತಳ್ಳಾಟ ನಡೆದಿದ್ದು,  ನಮ್ಮನ್ನು ಯಾಕೆ‌ ತಡೆದಿದ್ದೀರಿ? ಹೇಳಿ  ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರಿಗೆ ಪ್ರಶ್ನೆ ಮಾಡಿದ್ದಾರೆ.


ಇದನ್ನೂ ಓದಿ: ಬಿಜೆಪಿ ಮಂಡಿಸಿದ ಭೂ ಸುಧಾರಣೆ ತಿದ್ದುಪಡಿ ಮಸೂದೆ ಪರ ಮತ ಹಾಕಿದ ಜೆಡಿಎಸ್: ಪರಿಷತ್‌ನಲ್ಲಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...