Homeಚಳವಳಿಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಕೇಂದ್ರ ಸರ್ಕಾರದ "ಹೊಸ" ಪ್ರಸ್ತಾಪವನ್ನು ರೈತ ಸಂಘಟನೆಗಳು ನಿಷ್ಠುರ ಮತ್ತು ಸೊಕ್ಕಿನ ಪ್ರಸ್ತಾಪ ಎಂದು ಕರೆದು ಖಂಡಿಸಿ, ತಿರಸ್ಕರಿಸಿದ್ದಾರೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೀಡಿದ್ದ ಪ್ರಸ್ತಾಪವನ್ನು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ (AIKSCC) ತಿರಸ್ಕರಿಸಿದ್ದು, ರೈತರ ಪ್ರತಿಭಟನೆ ಮುಂದುವರೆಸಲು ನಿರ್ಧರಿಸಿದೆ ಎಂದು ಮಾಧ್ಯಮ ಬುಲೆಟಿನ್‌ನಲ್ಲಿ ತಿಳಿಸಿದೆ.

ಮೋದಿ ಸರ್ಕಾರವು ಹಳೆಯ ಪ್ರಸ್ತಾಪಗಳನ್ನೇ ಹೊಸ ಬಟ್ಟೆ ಧರಿಸಿದಂತೆ ಮಾಡಿ ಅವುಗಳನ್ನೆ ಮತ್ತೆ ಕೊಟ್ಟಿದೆ. ಇವುಗಳನ್ನು ಎಲ್ಲಾ ರೈತ ಸಂಘಟನೆಗಳು ಒಮ್ಮತವಾಗಿ ತಿರಸ್ಕರಿಸಿವೆ ಎಂದು ಮಾಧ್ಯಮ ಬುಲೆಟಿನ್‌ನಲ್ಲಿ AIKSCC ಹೇಳಿದೆ.

AIKSCC ಮತ್ತು ಎಲ್ಲಾ ರೈತ ಸಂಘಟನೆಗಳು ಕೇಂದ್ರ ಸರ್ಕಾರದ ವಿವಾದಿತ ಮೂರು ಕೃಷಿ ಕಾನೂನುಗಳನ್ನು ಮತ್ತು ವಿದ್ಯತ್ ಕಾಯ್ದೆ 2020 ಅನ್ನು ರದ್ದುಗೊಳಿಸುವ ತಮ್ಮ ಬೇಡಿಕೆಯನ್ನು ಮತ್ತೆ ಸರ್ಕಾರದ ಮುಂದಿಡುತ್ತಿವೆ ಎಂದಿದೆ. ಜೊತೆಗೆ ಪ್ರತಿಭಟನೆಗೆ ದೆಹಲಿಯಲ್ಲಿ ಹೆಚ್ಚಿನ ರೈತರು ಸೇರಬೇಕು ಎಂದು ಕರೆ ನೀಡಿದೆ. ಇಲ್ಲವಾದಲ್ಲಿ ಎಲ್ಲಾ ರಾಜ್ಯಗಳಲ್ಲಿ ಜಿಲ್ಲಾ ಮಟ್ಟದ ರೈತ ಧರಣಿಗಳನ್ನುಪ್ರಾರಂಭಿಸಲು ಕರೆ ನೀಡಿದೆ.

ಇದನ್ನೂ ಓದಿ: ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಕೇಂದ್ರ ಘೋಷಿಸಬಹುದು: ಸುಪ್ರೀಂ‌ಕೋರ್ಟ್

ಎಐಸಿಸಿಸಿಯ ರಾಷ್ಟ್ರೀಯ ಕಾರ್ಯನಿರತ ಸಂಘವು ಸಭೆ ಸೇರಿ ಕೆಲವು ನಿರ್ಧಾರಗಳನ್ನು ತೆಗೆದುಕೊಂಡಿದೆ.

೧. ಎಐಕೆಎಸ್‌ಸಿಸಿ ಕೇಂದ್ರ ಸರ್ಕಾರದ “ಹೊಸ” ಪ್ರಸ್ತಾಪವನ್ನು ರೈತ ಸಂಘಟನೆಗಳು ನಿಷ್ಠುರ ಮತ್ತು ಸೊಕ್ಕಿನ ಪ್ರಸ್ತಾಪ ಎಂದು ಕರೆದು ಅದನ್ನು ಖಂಡಿಸಿ, ತಿರಸ್ಕರಿಸಿದ್ದಾರೆ.

೨. ರೈತ ಸಂಘಟನೆ ಎಐಕೆಎಸ್‌ಸಿಸಿ ಮೋದಿ ಸರ್ಕಾರವನ್ನು ಬಹಿರಂಗ ಪಡಿಸಲು, ರಾಷ್ಟ್ರವ್ಯಾಪಿ “ಸರ್ಕಾರ್ ಕಿ ಅಸ್ಲಿ ಮಜ್ಬೂರಿ – ಅದಾನಿ, ಅಂಬಾನಿ, ಜಮಾಖೋರಿ (ಸರ್ಕಾರದ ನಿಜವಾದ ಅಸಹಾಯಕತೆ-ಅದಾನಿ, ಅಂಬಾನಿ, ಜಮಾಖೋರಿ) ಎಂಬ ಅಭಿಯಾನವನ್ನು ಪ್ರಾರಂಭಿಸಲು ನಿರ್ಧರಿಸಿದೆ.

ಇದನ್ನೂ ಓದಿ: ಪ.ಬಂಗಾಳ: ಬಿಜೆಪಿ ನಾಯಕರ ಮೇಲೆ ಜಾಮೀನು ರಹಿತ ಪ್ರಕರಣದಲ್ಲಿ ಎಫ್‌ಐಆರ್ ದಾಖಲು!

೩. ಎಐಕೆಎಸ್‌ಸಿಸಿ ಎಲ್ಲಾ ಜಿಲ್ಲೆಗಳು ಮತ್ತು ರಾಜ್ಯ ರಾಜಧಾನಿಗಳಲ್ಲಿ ನಿರಂತರ ರೈತ ಪ್ರತಿಭಟನೆ ಆಯೋಜಿಸಲು ರೈತ ಸಂಘಟನೆಗಳಿಗೆ ಕರೆ ನೀಡುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ರೈತರಿಗೆ ಬೆಂಬಲ ನೀಡುವ ಇತರ ಸಂಸ್ಥೆಗಳೊಂದಿಗೆ ಜಂಟಿಯಾಗಿ ಧರಣಿ ಆರಂಭಿಸಲು ಕರೆ ನೀಡಿದೆ.

೪. ಡಿಸೆಂಬರ್ 8 ರ ’ಭಾರತ್ ಬಂದ್’ ಜನಪ್ರಿಯ ರೈತರ ಪ್ರತಿಭಟನೆಯಾಗಿ ಯಶಸ್ವಿಯಾಗಿದೆ. ರೈತ ಸಂಘಟನೆ ಎಲ್ಲಾ ವರ್ಗದವರ ಬೆಂಬಲವನ್ನು ಅಭಿನಂದಿಸುತ್ತದೆ ಎಂದಿದೆ.

೫. ಭಾರತ್ ಬಂದ್‌ನಲ್ಲಿ ಸಾಮೂಹಿಕ ಭಾಗವಹಿಸುವಿಕೆಯನ್ನು ಗಮನಿಸಿದ ರೈತ ಸಂಘವು ಪ್ರತಿಭಟನೆ ತೀವ್ರಗೊಳಿಸಲು ದೆಹಲಿಗೆ “ಫಾರ್ಮರ್ಸ್ ಮಾರ್ಚ್” ಆಯೋಜಿಸಲು ಎಲ್ಲಾ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳಿಗೆ ಕರೆ ನೀಡಿದೆ.

ಇನ್ನೂ, ಡಿಸೆಂಬರ್ 12 ರಂದು ಪ್ರತಿಭಟನೆ ನಡೆಸಿ ದೆಹಲಿ-ಜೈಪುರ ಮತ್ತು ದೆಹಲಿ-ಆಗ್ರಾ ಹೆದ್ದಾರಿಗಳನ್ನು ನಿರ್ಬಂಧಿಸುತ್ತೇವೆ ಎಂದು ಸಿಂಘ ಗಡಿಯಲ್ಲಿ ರೈತ ಮುಖಂಡರು ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿ: ರೈತವಿರೋಧಿ ಕಾನೂನುಗಳನ್ನು ಹಿಂಪಡೆಯುವಂತೆ ಪಟ್ಟು: ರೈತರೊಂದಿಗೆ ಅಮಿತ್ ಶಾ ಮಾತುಕತೆ ವಿಫಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...