Homeಚಳವಳಿರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ದೇಶವ್ಯಾಪಿ 'ಸಂಚಾರ ಸ್ಥಗಿತ ಚಳವಳಿ'ಗೆ ಕರೆ

ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ದೇಶವ್ಯಾಪಿ ‘ಸಂಚಾರ ಸ್ಥಗಿತ ಚಳವಳಿ’ಗೆ ಕರೆ

ರೈತರ ಹೋರಾಟ ಇಂದಿಗೆ 70 ನೆ ದಿನಕ್ಕೆ ಕಾಲಿಟ್ಟಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ದೆಹಲಿಯ ಗಡಿಗಳಲ್ಲಿ ನಡೆಸುತ್ತಿರುವ ಹೋರಾಟ 70 ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರವು ರೈತರೊಂದಿಗೆ ಹನ್ನೊಂದು ಸುತ್ತಿನ ಮಾತುಕತೆ ನಡೆಸಿದೆಯಾದರೂ ಎಲ್ಲವೂ ವಿಫಲಗೊಂಡಿದೆ. ಇದೀಗ ರೈತರು ಶನಿವಾರದಂದು ದೇಶಾದ್ಯಂತ ‘ಸಂಚಾರ ಸ್ಥಗಿತ ಚಳವಳಿ’ ನಡೆಸುವಂತೆ ಕರೆ ನೀಡಿದ್ದಾರೆ.

‘ಸಂಚಾರ ಸ್ಥಗಿತ ಚಳವಳಿ’ ಫೆಬ್ರವರಿ 6ರ ಶನಿವಾರ ಮಧ್ಯಾಹ್ನ 12 ರಿಂದ 3 ಗಂಟೆಯ ತನಕ ಅಂದರೆ ಒಟ್ಟು ಮೂರು ಗಂಟೆಗಳ ಕಾಲ ನಡೆಯಲಿದ್ದು, ಶಾಂತಿಯುವ ಪ್ರತಿಭಟನೆ ನಡೆಸುವಂತೆ ಸಂಯುಕ್ತ ಕಿಸಾನ್ ಮೋರ್ಚಾದ ರೈತ ಮುಖಂಡರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ದೆಹಲಿ ಪೊಲೀಸರ ಕೈಗೆ ಲೋಹದ ಲಾಠಿ?: ಇದು ಯಾವುದರ ಸೂಚಕ?

100ಕ್ಕೂ ಹೆಚ್ಚು ರೈತರು ಕಾಣೆಯಾಗಿರುವುದು, ರೈತರು ಮತ್ತು ಪತ್ರಕರ್ತರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿರುವುದು, ರೈತರು ಪ್ರತಿಭಟನೆ ನಡೆಸುತ್ತಿರುವ ಗಡಿಗಳಲ್ಲಿ ಇಂಟರ್‌ನೆಟ್ ಸ್ಥಗಿತ, ಹೋರಾಟಗಾರರಿಗೆ ಕಿರುಕುಳ, ಪ್ರತಿಭಟನಾ ಸ್ಥಳಗಳ ವಿದ್ಯುತ್ ಮತ್ತು ನೀರು ಸರಬರಾಜನ್ನು ನಿಲ್ಲಿಸಿರುವುದನ್ನು ವಿರೋಧಿಸಿ ಸರ್ಕಾರದ ವಿರುದ್ದ ಪ್ರತಿಭಟಿಸಲು ರೈತರು ಈ ‘ಸಂಚಾರ ಸ್ಥಗಿತ ಚಳವಳಿ’ ಕರೆ ನೀಡಿದ್ದಾರೆ.

ಪೊಲೀಸರು ರಸ್ತೆಗಳನ್ನು ಅಗೆಯುತ್ತಿದ್ದು, ದೊಡ್ಡ ದೊಡ್ಡ ಬ್ಯಾರಿಕೇಡ್‌ಗಳು, ಮುಳ್ಳು ತಂತಿಗಳನ್ನು ನೆಡುವ ಮೂಲಕ ರೈತರು ಪ್ರತಿಭಟನೆಗೆ ಬಾರದಂತೆ ತಡೆಯುತ್ತಿದೆ. ರೈಲುಗಳ ಮಾರ್ಗಗಳನ್ನೇ ಬದಲಿಸುತ್ತಿದೆ. ಬಿಜೆಪಿ-ಆರ್‌ಎಸ್‌ಎಸ್‌ ಗೂಂಡಾಗಳನ್ನು ಛೂ ಬಿಟ್ಟು ಶಾಂತಿಯುತ ರೈತ ಹೋರಾಟಕ್ಕೆ ಅಡ್ಡಿಪಡಿಸಲಾಗುತ್ತಿದೆ. ಇಂತಹ ಕೃತ್ಯಗಳನ್ನು ಕೇಂದ್ರ ಸರ್ಕಾರ ನಿಲ್ಲಿಸುವವರೆಗೂ ಸರ್ಕಾರದೊಂದಿಗೆ ಔಪಚಾರಿಕ ಮಾತುಕತೆ ಸಾಧ್ಯವಿಲ್ಲವೆಂದು ಸಂಯುಕ್ತ ಕಿಸಾನ್ ಮೋರ್ಚಾ ನಿರ್ಧರಿಸಿದೆ.

ಕೇಂದ್ರ ಸರ್ಕಾರವು ರೈತರ ಪ್ರತಿಭಟನೆಗೆ ಹೆದರುತ್ತಿದೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತಿದೆ. ಒಂದು ಕಡೆ ಪ್ರಧಾನಿ ಮೋದಿಯವರು ಮಾತುಕತೆಗೆ ಸಿದ್ದ ಎನ್ನುತ್ತಲೇ ಇನ್ನೊಂದು ಕಡೆ ರೈತರಿಗೆ ಸಾಕಷ್ಟು ಕಿರುಕುಳ ನೀಡಲಾಗುತ್ತಿದೆ. ಈ ದ್ವಂದ್ವವನ್ನು ಕೇಂದ್ರ ಸರ್ಕಾರ ಬಿಡಬೇಕು ಎಂದು ರೈತ ಮುಖಂಡ ಡಾ.ದರ್ಶನ್ ಪಾಲ್ ಆಗ್ರಹಿಸಿದ್ದಾರೆ.

ಸೋಮವಾರ ಮಂಡನೆಯಾಗಿರುವ ಕೇಂದ್ರ ಬಜೆಟ್‌ನಲ್ಲಿ ರೈತರನ್ನು ಕಡೆಗಣಿಸಲಾಗಿದೆ ಎಂದು ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರೈತರು ಬಜೆಟ್ ದಿನದಂದು ಸಂಸತ್ತಿಗೆ ಪಾದಯಾತ್ರೆ ರ್‍ಯಾಲಿ ನಡೆಸಲು ಉದ್ದೇಶಿಸಿದ್ದರು. ಆದರೆ ಗಣರಾಜ್ಯೋತ್ಸವದಂದು ನಡೆದ ಅಹಿತಕರ ಘಟನೆಯಿಂದಾಗಿ ಆ ರ್‍ಯಾಲಿಯನ್ನು ಮೂಂದೂಡಲಾಗಿದೆ.

ಇದನ್ನೂ ಓದಿ: ರೈತ ಹೋರಾಟ ತಡೆಯಲು ದಾರಿಯಲ್ಲಿ ಮುಳ್ಳುಕಂಬ ನೆಡುತ್ತಿರುವ ಕೇಂದ್ರ ಸರ್ಕಾರ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...