Homeಚಳವಳಿಆಜ್‌‌ತಕ್ ವರದಿಗಾರರನ್ನು ’ಗೋದಿ ಮೀಡಿಯಾ’ ಎಂದು ಕರೆದು ಸ್ವಾಗತಿಸಿದ ಚಳವಳಿ ನಿರತ ರೈತರು!

ಆಜ್‌‌ತಕ್ ವರದಿಗಾರರನ್ನು ’ಗೋದಿ ಮೀಡಿಯಾ’ ಎಂದು ಕರೆದು ಸ್ವಾಗತಿಸಿದ ಚಳವಳಿ ನಿರತ ರೈತರು!

ಮಾಧ್ಯಮಗಳು ಐತಿಹಾಸಿಕ ಹೋರಾಟವನ್ನು ನಿರ್ಲಕ್ಷ್ಯ ವಹಿಸುತ್ತಿರುವುದು ಹೋರಾಟಗಾರರ ಆಕ್ರೋಶವನ್ನು ಹೆಚ್ಚಿಸಿದೆ

- Advertisement -
- Advertisement -

ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತರಲು ಹೊರಟಿರುವ ರೈತ ವಿರೋಧಿ ಕಾಯ್ದೆಗಳ ವಿರುದ್ದ ರೈತರು ನಡೆಸುತ್ತಿರುವ ’ದೆಹಲಿ ಚಲೋ’ ಆಂದೋಲನ ಇಂದಿಗೆ ಐದನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನಲೆಯಲ್ಲಿ ಹಿಂದಿ ಮಾಧ್ಯಮ ’ಆಜ್‌ತಕ್’ ರೈತ ಹೋರಾಟಗಾರರನ್ನು ಮಾತನಾಡಿಸಲು ಹೋಗಿ ’ಗೋದಿ ಮಿಡಿಯಾ’ ಎಂದು ಬೈಸಿಕೊಂಡಿದೆ. ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.

ಕೇಂದ್ರ ಸರ್ಕಾರ ತಂದಿರುವ ಕಾನೂನಿನ ವಿರುದ್ದ ಸೆಪ್ಟೆಂಬರ್‌ನಿಂದಲೂ ರೈತರು ಹೋರಾಟ ನಡೆಸುತ್ತಿದ್ದು ಮಾಧ್ಯಮಗಳು ಈ ಐತಿಹಾಸಿಕ ಹೋರಾಟವನ್ನು ನಿರ್ಲಕ್ಷ್ಯ ವಹಿಸುತ್ತಲೇ ಬಂದಿದೆ. ಪ್ರಸ್ತುತ ’ದೆಹಲಿ ಚಲೋ’ ಹೋರಟದ ಬಗ್ಗೆ ನಕರತ್ಮಕವಾಗಿ ಬಿಂಬಿಸಿರುವುದು ಕೂಡಾ ರೈತರ ಆಕ್ರೋಶವನ್ನು ಇನ್ನೂ ಹೆಚ್ಚಿಸಿದೆ.

ಇದನ್ನೂ ಓದಿ: ನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

ಇದೀಗ ಹಿಂದಿ ಸುದ್ದಿ ಮಾಧ್ಯಮ ಆಜ್‌ತಕ್ ವರದಿಗಾರರೊಬ್ಬರು ಹೋರಾಟ ನಿರತ ರೈತರೊಬ್ಬರನ್ನು ಮಾತನಾಡಿಸಿದಾಗ, “ಸತ್‌ಸ್ರೀ ಅಕಾಲ್ ಗೋದಿ ಮೀಡಿಯಾ” ಎಂದು ಅವರನ್ನು ಸ್ವಾಗತಿಸಿದ್ದಾರೆ. ವಿಡಿಯೋದಲ್ಲಿ, “ನಾವು ಪಂಜಾಬ್‌‌ನಲ್ಲಿ ಎರಡು ತಿಂಗಳಿನಿಂದ ಪ್ರತಿಭನೆ ಮಾಡುತ್ತಿದ್ದೇವೆ ನೀವು ಎಲ್ಲಿ ಹೋಗಿದ್ದೀರಿ” ಎಂದು ಪ್ರಶ್ನಿಸಿದ್ದು ಇದರಿಂದ ಮುಜುಗರಕ್ಕೊಳಗಾದ ಅವರು ಅಲ್ಲಿಂದ ತೆರಳಿದ್ದಾರೆ. ಜೊತೆಗೆ “ಗೋದಿ ಮೀಡಿಯಾ ಮುರ್ದಾಬಾದ್” ಎಂದು ದಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಬಂದ್ ಮಾಡುವುದಾಗಿ ರೈತರ ಎಚ್ಚರಿಕೆ: ತಡರಾತ್ರಿ BJP ಸಭೆ ನಡೆಸಿದ ಅಮಿತ್ ಶಾ

ಕೇಂದ್ರದ ಬಿಜೆಪಿ ನೇತೃತ್ವದ ಮೋದಿ ಸರ್ಕಾರದ ಪರವಾಗಿ ನಿಂತು ನಿರಂತರ ಹೊಗಳುವ ಮಾಧ್ಯಮಗಳಿಗೆ ಬಳಸುವ ಪದವಾಗಿ ’ಗೋದಿ ಮೀಡಿಯಾ’ ಪದವನ್ನು ಬಳಸಲಾಗುತ್ತಿದೆ. ಈ ಹಿಂದೆ ಜೆಎನ್‌ಯುನಲ್ಲಿ ಕೂಡಾ ಕೇಂದ್ರ ಸರ್ಕಾರದ ಪರವಾಗಿರುವ ಮಾಧ್ಯಮಗಳನ್ನು ಇದೇ ರೀತಿ ಕರೆಯಲಾಗಿತ್ತು. ಸಿಎಎ ವಿರುದ್ದದ ಹೋರಾಟದ ಪ್ರತಿಭಟನಾಕಾರರು ಕೂಡಾ ”ಗೋದಿ ಮೀಡಿಯಾ” ಎಂದು ಕರೆದು ಹೋರಾಟವನ್ನು ನಿರ್ಲಕ್ಷ್ಯವಹಿಸುತ್ತಿರುವುದರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು.

ಲಕ್ಷಾಂತರ ರೈತರು ದೆಹಲಿ ಪ್ರವೇಶಿಸಲು ದೆಹಲಿಯ ಗಡಿಗಳಲ್ಲಿ ಜಮಾಯಿಸಿದ್ದರಾದರೂ ಹಲವು ರಾಷ್ಟ್ರೀಯ ಮಾಧ್ಯಮಗಳು ಆಂದೋಲನವನ್ನು ಗಣನೆಗೆ ತೆಗೆದುಕೊಳ್ಳದೆ ನಿರ್ಲಕ್ಷ್ಯವಹಿಸಿದ್ದಾರೆ. ಅದನ್ನೂ ಮೀರಿ ದೇಶದ ಹಲವು ರಾಜ್ಯದ ರೈತರು ದೆಹಲಿ ಚಲೋಗೆ ಹೊರಟಿದ್ದಾರೆ. ಚಳುವಳಿ ಐದನೇ ದಿನಕ್ಕೆ ಕಾಲಿಟ್ಟಿದ್ದು ಕೇಂದ್ರ ಸರ್ಕಾರದ ಷರತ್ತುಬದ್ದ ಮಾತುಕತೆಯನ್ನು ನಿನ್ನೆ ತಿರಸ್ಕರಿಸಿದ ಹೋರಾಟಗಾರರು, ಪ್ರತಿಭಟನೆಯನ್ನು ಬುರಾರಿಯ ನಿರಂಕಾರಿ ಕ್ರೀಡಾಂಗಣಕ್ಕೆ ಸ್ಥಳಾಂತರಿಸಬೇಕು ಎಂದು ಕೇಳಿಕೊಂಡಿದ್ದ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿ: ವಾಟರ್ ಜೆಟ್ ನಿಲ್ಲಿಸಿದ ರೈತ ಹೋರಾಟದ ‘ಹೀರೋ’ ಮೇಲೆ ಕೊಲೆಯತ್ನದ ಕೇಸು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...