Homeಕರ್ನಾಟಕಫೆ.10ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಸಮಾವೇಶ: ಬಡಗಲಪುರ ನಾಗೇಂದ್ರ

ಫೆ.10ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಸಮಾವೇಶ: ಬಡಗಲಪುರ ನಾಗೇಂದ್ರ

- Advertisement -
- Advertisement -

ರೈತ ನಾಯಕ ಪ್ರೊ ಎಂ.ಡಿ ನಂಜುಂಡಸ್ವಾಮಿ ಅವರ ಜನ್ಮ ದಿನದ ಅಂಗವಾಗಿ ಫೆಬ್ರವರಿ 10ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಸಮಾವೇಶ ನಡೆಯಲಿದೆ. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ವಿವಿಧ ಜಾತಿ ಮತ್ತು ರೈತ ಸಮುದಾಯವನ್ನು ಸಮಾಜವಾದಿ ಚಿಂತನೆಗೆ ಕರೆತಂದು, ಜಾತಿಗಿಂತ ವರ್ಗ ದೊಡ್ಡದು ಎಂಬ ಪ್ರಜ್ಞೆ ಮೂಡಿಸಿದವರು ನಂಜುಂಡಸ್ವಾಮಿ ಅವರು. ರೈತ ಸಂಘವನ್ನು ಪರಿಣಾಮಕಾರಿ ಮತ್ತು ಪ್ರಭಾವ ಬೀರುವ ಚಳುವಳಿಯಾಗಿ ಅವರು ಕಟ್ಟಿದ್ದಾರೆ. ಅವರನ್ನು ಸ್ಮರಿಸುವುದು ನಾಡಿದ ರೈತರ ಕರ್ತವ್ಯ” ಎಂದು ಹೇಳಿದರು.

“ನಂಜುಂಡಸ್ವಾಮಿ ಅವರ ಗರಡಿಯಲ್ಲಿ ಬೆಳದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಅಂದು ರೈತರ ನಾನಾ ಬೇಡಿಕೆಗಳಿರುವ 38 ಪುಟಗಳ ಹಕ್ಕೊತ್ತಾಯವನ್ನು ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಗುತ್ತದೆ. ರೈತ ಚಿಂತನೆಯಿರುವ ಸಮಾಜ ಕಲ್ಯಾಣ ಸಚಿವ ಡಾ.ಹೆಚ್ ಸಿ ಮಹಾದೇವಪ್ಪ, ಶಾಸಕ ಹಾಗೂ ಮುಖ್ಯಮಂತ್ರಿಗಳ ಸಲಹೆಗಾರ ಬಿ.ಆರ್ ಪಾಟೀಲ್, ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೂಡ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ” ಎಂದು ತಿಳಿಸಿದರು.

“2013ರಲ್ಲಿ ಕಾಂಗ್ರೆಸ್‌ ಸರ್ಕಾರವೇ ರಚಿಸಿದ್ದ ಕೃಷಿ ಬೆಲೆ ಆಯೋಗವನ್ನು ಮತ್ತಷ್ಟು ಬಲವರ್ಧನೆ ಮಾಡಬೇಕು. ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿ ಬದಲು ಹಣ ನೀಡಲಾಗುತ್ತಿದೆ. ಹಣ ನೀಡುವ ಬದಲು ರೈತರು ಬೆಳೆಯುತ್ತಿರುವ ಜೋಳ, ರಾಗಿ, ತೊಗರಿ ಬೇಳೆ ಹಾಗೂ ಎಣ್ಣೆ ವಿತರಣೆ ಮಾಡಬೇಕು. ಇದರಿಂದ ಸರ್ಕಾರದ ಮೇಲಿನ ಹೊರೆಯೂ ಕಡಿಮೆಯಾಗುತ್ತದೆ. ರೈತರಿಗೆ ಅನುಕೂಲವಾಗುತ್ತದೆ” ಎಂದು ಬಡಗಲಪುರ ನಾಗೇಂದ್ರ ತಿಳಿಸಿದರು.

ಸಮಾವೇಶಕ್ಕೆ ಮುಖ್ಯಮಂತ್ರಿಯನ್ನು ಕರೆಸುವುದು ಸಂಘಟನೆಯ ಮೇಲೆ ರಾಜಕೀಯ ಪ್ರಭಾವ ಬೀರುವುದಿಲ್ಲವೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಇದು ಪ್ರತಿಭಟನಾ ಸಮಾವೇಶವಲ್ಲ. ನಂಜುಂಡಸ್ವಾಮಿ ಅವರನ್ನು ಸ್ಮರಿಸುವ ಸಮಾವೇಶ. ಸಿದ್ದರಾಮಯ್ಯ ಅವರು ನಂಜುಂಡಸ್ವಾಮಿ ಅವರನ್ನು ತಮ್ಮ ರಾಜಕೀಯ ಗುರುಗಳು ಎಂದು ಹೇಳುತ್ತಾರೆ. ಹೀಗಾಗಿ, ಅವರು ನಂಜುಂಡಸ್ವಾಮಿ ಅವರ ಅನುಯಾಯಿಯಾಗಿ ಸಮಾವೇಶದಲ್ಲಿ ಭಾಗಿಯಾಗುತ್ತಿದ್ದಾರೆ. ಸರ್ಕಾರದ ವಿರುದ್ಧ ಹೋರಾಟ ನಿರಂತರವಾಗಿ ನಡೆಯುತ್ತದೆ. ಅದರಲ್ಲಿ ಯಾವುದೇ ರಾಜಿ ಇಲ್ಲ. ಸಂಘಟನೆ ಮೇಲೆ ಯಾವುದೇ ರಾಜಕೀಯ ಪ್ರಭಾವ ಬೀರುವುದಿಲ್ಲ” ಎಂದು ಹೇಳಿದರು.

ರೈತ ಸಂಘದ ಕಾರ್ಯಾಧ್ಯಕ್ಷ ವಿರಸಂಗಯ್ಯ ಮಾತನಾಡಿ, “ಕರ್ನಾಟಕ ಹಳ್ಳಿಗಳ ರಾಜ್ಯ. ಬೆರಳೆಣಿಕೆಯ ನಗರಗಳನ್ನು ಅಭಿವೃದ್ಧಿ ಮಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಹಳ್ಳಿಗಳು ಉಳಿದರೆ ಮಾತ್ರ ದೇಶ ಉಳಿಯುತ್ತದೆ. ಗ್ರಾಮೀಣ ಭಾಗದ ಯುವಕರಿಗೆ ವಿವಾಹಕ್ಕೆ ಹೆಣ್ಣು ಸಿಗದೇ ಇರುವುದು ಸಮಾಜದಲ್ಲಿ ಸೂತಕದ ಛಾಯೆಯನ್ನು ಸೂಚಿಸುತ್ತದೆ. ರೈತ ಯುವಜನರನ್ನು ಪ್ರೋತ್ಸಾಹಿಸುವ, ಅವರಿಗೆ ಕನಿಷ್ಠ ಆದಾಯ ಖಾತ್ರಿಯಾಗುವಂತಹ ಯೋಜನೆಗಳನ್ನು ಜಾರಿಗೆ ತರಬೇಕು” ಎಂದರು.

ಸುದ್ದಿಗೋಷ್ಠಿಯಲ್ಲಿ ಗೋಪಾಲ್ ಪಾಪೇಗೌಡ, ರವಿಕರಣ್ ಪುಣಚ, ಶ್ರೀಶೈಲ ನಾಯಕ್ ಸೇರಿದಂತೆ ಇತರರು ಇದ್ದರು.

ಇದನ್ನೂ ಓದಿ : ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅವ್ಯವಹಾರ ಆರೋಪ: ಸಿಐಡಿ ತನಿಖೆಗೆ ಸಿಎಂ ಆದೇಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಿಯಾಂಕ ಗಾಂಧಿ

ಗಾಜಾದಲ್ಲಿ ಇಸ್ರೇಲ್‌ನ ‘ಜನಾಂಗೀಯ ಕೃತ್ಯಗಳು’ ನಿಲ್ಲಬೇಕು: ಪ್ರಿಯಾಂಕಾ ಗಾಂಧಿ

0
ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ದಾಳಿಯನ್ನು ಸ್ವೀಕಾರಾರ್ಹವಲ್ಲ ಮತ್ತು ಹತ್ಯಾಕಾಂಡ ಎಂದು ಹೇಳಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಇದನ್ನು ಜಗತ್ತಿನ ಪ್ರತಿಯೊಂದು ಸರ್ಕಾರ ಖಂಡಿಸಬೇಕು ಎಂದು ಶುಕ್ರವಾರ ಕರೆ...